ಸಿದ್ದರಾಮಯ್ಯ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ: ಸಿಎಂ ಬೊಮ್ಮಾಯಿ

ಗಾಂಧಿ ಮಾತಿಗೆ ಕರ್ನಾಟಕದ ಜನರು ಬೆಲೆ ಕೊಡಲ್ಲ. ರಾಹುಲ್ ಗಾಂಧಿಯವರ ಕಳೆದ ಬಾರಿ ಭೇಟಿಗೂ ಈ ಬಾರಿ ಭೇಟಿಗೂ ವ್ಯತ್ಯಾಸವಿದೆ. ರಾಹುಲ್​ ಗಾಂಧಿ ಪ್ರಜಾಪ್ರಭುತ್ವ ವಿರೋಧಿ ಮಾತುಗಳನ್ನಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿದ್ದರಾಮಯ್ಯ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
ವಿವೇಕ ಬಿರಾದಾರ
|

Updated on:Mar 21, 2023 | 11:50 AM

ಹುಬ್ಬಳ್ಳಿ: ಸಿದ್ದರಾಮಯ್ಯ (Siddaramaiah) ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಕೊಟ್ಟಿದ್ದ ಭರವಸೆಯನ್ನೇ ಕಾಂಗ್ರೆಸ್ (Congress) ಈಡೇರಿಸಿಲ್ಲ. ಕಾಂಗ್ರೆಸ್​ ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್​ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ವಿಸಿಟಿಂಗ್ ಕಾರ್ಡ್. ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ (Lokayukta) ದೂರು ದಾಖಲಾಗಿದೆ. ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ ಅಂದ್ರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ವ್ಯಂಗ್ಯವಾಡಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಹುಲ್ ಗಾಂಧಿ ಮಾತಿಗೆ ಕರ್ನಾಟಕದ ಜನರು ಬೆಲೆ ಕೊಡಲ್ಲ. ರಾಹುಲ್ ಗಾಂಧಿಯವರ ಕಳೆದ ಬಾರಿ ಭೇಟಿಗೂ ಈ ಬಾರಿ ಭೇಟಿಗೂ ವ್ಯತ್ಯಾಸವಿದೆ. ರಾಹುಲ್​ ಗಾಂಧಿ ಪ್ರಜಾಪ್ರಭುತ್ವ ವಿರೋಧಿ ಮಾತುಗಳನ್ನಾಡಿದ್ದಾರೆ. ವಿಪಕ್ಷಗಳ 59 ಕೇಸ್​ಗಳ ಪೈಕಿ ಕೆಲವನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೇವೆ. ರೀಡೂ, ದುಬಾರಿ ವಾಚ್ ಬಗ್ಗೆ ನ್ಯಾಯಾಂಗ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಬೋಗಸ್ ಕಾರ್ಡ್ ಸರಣಿ, ಇವ್ಯಾವುವೂ ನಡೆಯಲ್ಲ; ಸಿಎಂ ಬೊಮ್ಮಾಯಿ ವ್ಯಂಗ್ಯ

ಬಾಬುರಾವ್​ ಚಿಂಚನಸೂರ್​ ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ಚಿಂಚನಸೂರ್ ಕಾಂಗ್ರೆಸ್‌ನಿಂದ ಬಂದಿದ್ದರು, ಮತ್ತೆ ಅಲ್ಲಿಗೆ ಹೋಗುತ್ತಿದ್ದಾರೆ. ಗುರುಮಠಕಲ್ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ಪಕ್ಷದ ಸಂಘಟನೆ ಚೆನ್ನಾಗಿದೆ. ಗುರುಮಠಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ. ಮಾರ್ಚ್ 24 ಕ್ಕೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುತ್ತಾರೆ. ಮಾರ್ಚ್ 25 ಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಮತ್ತೆ ಮಾರ್ಚ್ 26 ಕ್ಕೆ ಮತ್ತೆ ಅಮಿತ್ ಶಾ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡ್ತಿದೆ ಎಂಬ ಆರೋಪವಿಚಾರವಾಗಿ ಮಾತನಾಡಿದ ಅವರು ಇತಿಹಾಸವನ್ನು ಮರೆಮಾಚುವ ಕೆಲಸ ನಡೆದಿದೆ. ಹಲವಾರು ಪ್ರಕರಣಗಳಲ್ಲಿ ಸತ್ಯ ಮರೆಮಾಚುವ ಕೆಲಸ ನಡೆದಿದೆ. ಅವುಗಳ ಸತ್ಯ ಹೇಳಿದರೆ ಇವರಿಗೆ ತಡೆದುಕೊಳ್ಳೋಕೆ ಆಗಲ್ಲ. ಸತ್ಯ ಶೋಧನೆ ಆದಾಗ ಎಲ್ಲವೂ ಹೊರಗೆ ಬರುತ್ತೆ, ಜಯ ಸಿಗುತ್ತೆ ಎಂದರು.

ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಅವರು, ಅವರ ಬೇಡಿಕೆ ಈಡೇರಿಸಿದ್ದೇವೆ. ಪ್ರಮುಖ ಸಂಘಟನೆ ಮುಖಂಡರೊಂದಿಗೆ ಚರ್ಚಿಸಿ, ಬಗೆಹರಿಸಿದ್ದೇನೆ. ಅಭಿನಂದನೆ ಸಲ್ಲಿಸೊ ಜೊತೆಗೆ, ಮುಷ್ಕರ ವಾಪಸ್ ಪಡೆದಿದ್ದಾರೆ. ಪ್ರಮುಖ ಸಂಘಟನೆ ಜೊತೆ ಮಾತನಾಡಿದ್ದು, ಮುಷ್ಕರಕ್ಕೆ ಹೋಗೋ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:16 am, Tue, 21 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್