ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದು ಧನ್ಯವಾದ ತಿಳಿಸಿದ್ದ ಧಾರವಾಡ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

| Updated By: ಆಯೇಷಾ ಬಾನು

Updated on: Sep 09, 2023 | 1:56 PM

ರಾಜ್ಯ ಸರಕಾರದ ಮೊಟ್ಟೆ, ಹಾಲು ವಿತರಣೆ ಯೋಜನೆ ಬಗ್ಗೆ ಶ್ಲಾಘಿಸಿ ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದಿದ್ದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಇಂದು ಧಾರವಾಡ ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಆಶಾ ಕೂಡ ಆಗಮಿಸಿದ್ದರು.

ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದು ಧನ್ಯವಾದ ತಿಳಿಸಿದ್ದ ಧಾರವಾಡ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಹಾಗೂ ಅವರ ತಂದೆ
Follow us on

ಹುಬ್ಬಳ್ಳಿ, ಸೆ.09: ರಾಜ್ಯ ಸರಕಾರದ(State Government) ಮೊಟ್ಟೆ, ಹಾಲು ವಿತರಣೆ ಯೋಜನೆ ಬಗ್ಗೆ ಶ್ಲಾಘಿಸಿ ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದಿದ್ದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ಮಾಡಿದ್ದಾರೆ. ಇಂದು ಧಾರವಾಡ ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಆಶಾ ಕೂಡ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ಆಶಾಗೆ ಶೇಕ್ ಹ್ಯಾಂಡ್ ನೀಡಿ ಅಭಿನಂದಿಸಿದ್ದರು. 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯನವರು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡುವ ಯೋಜನೆ ವಿಸ್ತರಣೆ ಮಾಡಿದ್ದರು. ಇದರಿಂದ ಸಂತಸಗೊಂಡು ಸಿಎಂ ಸಿದ್ದರಾಮಯ್ಯರಿಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಳಲಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಪತ್ರ ಬರೆದು ಸಿಎಂಗೆ ಅಭಿನಂದನೆ ಸಲ್ಲಿಸಿದ್ದರು. ಜೊತೆಗೆ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂತ ಮನವಿ ಮಾಡಿದ್ದರು. ಆಶಾಳ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ಸಿದ್ದರಾಮಯ್ಯನವರು ಅಭಿನಂದನೆ ತಿಳಿಸಿದ್ದರು.

2021ರಲ್ಲಿ ಸರ್ಕಾರ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿನ ಒಂದರಿಂದ ಎಂಟನೇ ತರಗತಿಯವರೆಗಿನ ಶಾಲೆ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡುತ್ತಿತ್ತು. ಬಳಿಕ ಸರ್ಕಾರ ಒಂದು ಸಮೀಕ್ಷೆಯನ್ನು ಮಾಡಿದ ಮೇಲೆ ಶೇಕಡಾ 70 ರಷ್ಟು ಮಕ್ಕಳು ಮೊಟ್ಟೆ ಬೇಕು ಎಂದು ತಿಳಿಸಿದ್ದರು. ಇದಾದ ಮೇಲೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಎರಡು ದಿನ ಮೊಟ್ಟೆ ವಿತರಣೆ ಮಾಡಲು ಸೂಚಿಸಲಾಯಿತು.

ಇದನ್ನೂ ಓದಿ: 9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ ವಿಸ್ತರಣೆ; ಸಿಎಂ ಗೆ ಬಂತು ವಿದ್ಯಾರ್ಥಿನಿಯಿಂದ ಪತ್ರ

ಬಳಿಕ ಪೋಷಕರು ಒಂಭತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುವಂತೆ ಮನವಿ ಮಾಡಿತ್ತು. ಅದರಂತೆ ಸರ್ಕಾರ ಒಂದರಿಂದ ಹತ್ತನೇ ತರಗತಿಯವರೆಗೂ ಮೊಟ್ಟೆ ವಿತರಣೆ ವಿಸ್ತರಿಸಿತು. ಇದೀಗ ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಧಾರವಾಡ ವಿದ್ಯಾರ್ಥಿನಿ ಆಶಾ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ತಿಳಿಸಿದ್ದಳು. ಸದ್ಯ ಇಂದು ಧಾರವಾಡ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯನವರು ವಿಮಾನ ನಿಲ್ದಾಣದಲ್ಲಿ ಆಶಾಳಿಗೆ ಶೇಕ್ ಹ್ಯಾಂಡ್ ನೀಡಿ ಅಭಿನಂದಿಸಿದರು.

ವಿದ್ಯಾರ್ಥಿನಿ ಬರೆದ ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು.

ಹುಬ್ಬಳ್ಳಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ