ಸಿದ್ದರಾಮಯ್ಯ ನಾಯಕತ್ವ ಅಂತ್ಯಕಾಲಕ್ಕೆ ಬಂದಿದೆ -ಶೆಟ್ಟರ್
ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಅಧಿಕಾರದ ಕನಸು ಕಾಣುತ್ತಿದ್ದಾರೆ, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ: ಬಿಜೆಪಿ ಸಾಂಸ್ಥಿಕ ಚುನಾವಣಾ ವೀಕ್ಷಕರ ಸಭೆಯಲ್ಲಿ ಮಾತನಾಡಿದ ಶೆಟ್ಟರ್, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಚುನಾವಣಾ ಫಲಿತಾಂಶ ಬರುವ ಮುಂಚೆಯೇ ಅವರು ಅಧಿಕಾರದ ಕನಸು ಕಾಣುತ್ತಿದ್ದಾರೆ. ಈ ಹಿಂದೆ ಅವರು ಕೊಟ್ಟಂತಹ ಭಾಗ್ಯಗಳು ಯಾರಿಗೂ ತಲುಪಿಲ್ಲ. […]
ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಅಧಿಕಾರದ ಕನಸು ಕಾಣುತ್ತಿದ್ದಾರೆ, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ: ಬಿಜೆಪಿ ಸಾಂಸ್ಥಿಕ ಚುನಾವಣಾ ವೀಕ್ಷಕರ ಸಭೆಯಲ್ಲಿ ಮಾತನಾಡಿದ ಶೆಟ್ಟರ್, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಚುನಾವಣಾ ಫಲಿತಾಂಶ ಬರುವ ಮುಂಚೆಯೇ ಅವರು ಅಧಿಕಾರದ ಕನಸು ಕಾಣುತ್ತಿದ್ದಾರೆ. ಈ ಹಿಂದೆ ಅವರು ಕೊಟ್ಟಂತಹ ಭಾಗ್ಯಗಳು ಯಾರಿಗೂ ತಲುಪಿಲ್ಲ. ಸಿದ್ದರಾಮಯ್ಯಗೆ ಜನರ ನಾಡಿಮಿಡಿತ ಗೊತ್ತಿಲ್ಲ. ಅವರು ಅಹಂಕಾರದಿಂದ ಮಾತನಾಡುತ್ತಾರೆ. ಸಿದ್ಧರಾಮಯ್ಯ ಅವರ ನಾಯಕತ್ವ ಅಂತ್ಯಕಾಲಕ್ಕೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.
ಸಿದ್ದರಾಮಯ್ಯ ಅವರ ವಿಪಕ್ಷ ನಾಯಕ ಸ್ಥಾನವನ್ನು ಮುಟ್ಟುಗೋಲು ಹಾಕಿಕೊಳ್ತಾರೆ. ಸಿದ್ದರಾಮಯ್ಯ ನಾಯಕತ್ವ ಅಂತ್ಯಕಾಲಕ್ಕೆ ಬಂದಿದೆ. ಹೀಗಾಗಿ ಮೊದಲು ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿ. ಅದನ್ನು ಬಿಟ್ಟು ಬಿಜೆಪಿ ಬಗ್ಗೆ ಮಾತನಾಡುವುದನ್ನು ಬಿಡಲಿ ಎಂದು ಹುಬ್ಬಳ್ಳಿ ನಗರದಲ್ಲಿ ಸಚಿವ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.