ರಾಜ್ಯದ ಅಭಿವೃದ್ಧಿ ಮರೆತ ಕಾಂಗ್ರೆಸ್ ನಾಯಕರು ಆಂತರಿಕ ಕಿತ್ತಾಟದಲ್ಲೇ ಮುಳುಗಿದ್ದಾರೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

|

Updated on: Oct 29, 2023 | 5:51 PM

ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ಪಕ್ಷದೊಳಗಿನ ಒಳಬೇಗುದಿಯ ಕಾರಣಕ್ಕೆ ದಿನದಿಂದ ದಿನಕ್ಕೆ ಭಿನ್ನಮತ ಹೆಚ್ಚಾಗುತ್ತಿದ್ದು, ಕೈನಾಯಕರ ನಡುವೆ ಅಧಿಕಾರಕ್ಕಾಗಿ ಆಂತರಿಕ ಕಿತ್ತಾಟ ನಡೆಯುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ. 

ರಾಜ್ಯದ ಅಭಿವೃದ್ಧಿ ಮರೆತ ಕಾಂಗ್ರೆಸ್ ನಾಯಕರು ಆಂತರಿಕ ಕಿತ್ತಾಟದಲ್ಲೇ ಮುಳುಗಿದ್ದಾರೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Follow us on

ಹುಬ್ಬಳ್ಳಿ, ಅಕ್ಟೋಬರ್​​​ 29: ಕಾಂಗ್ರೆಸ್ ಪಕ್ಷದೊಳಗಿನ ಒಳಬೇಗುದಿಯ ಕಾರಣಕ್ಕೆ ದಿನದಿಂದ ದಿನಕ್ಕೆ ಭಿನ್ನಮತ ಹೆಚ್ಚಾಗುತ್ತಿದ್ದು, ಕೈನಾಯಕರ ನಡುವೆ ಅಧಿಕಾರಕ್ಕಾಗಿ ಆಂತರಿಕ ಕಿತ್ತಾಟ ನಡೆಯುತ್ತಿದೆ. ಇದನ್ನು ಮರೆಮಾಚಲು ಹುಲಿ ಉಗುರಿನ ಪೆಂಡೆಂಟ್ ಹಾಗೂ ಅಪರೇಶನ್ ಕಮಲದಂತಹ ವಿಚಾರಗಳನ್ನು ತಂದು ಇಶ್ಯೂ ಡೈವರ್ಟ್ ಮಾಡುವ ಪ್ರಯತ್ನ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಗೊಂದಲದಿಂದ ರಾಜ್ಯದ ಜನ ಅತಂತ್ರರಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೆರಡು ಡಿಸಿಎಂ ಹುದ್ದೆ ಸೃಷ್ಟಿಸಬೇಕು, ಇನ್ನೂ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಇಂತಹ ರಾಜಕೀಯದಲ್ಲೇ ಮುಳುಗಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ: ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡಲಿ: ನಿವೃತ್ತ ಐಎಎಸ್ ಅಧಿಕಾರಿ ಡಾ ಎಸ್​ಬಿ ಜಾಮದಾರ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿಗಳನ್ನ ಹೊರಗಿಟ್ಟು ಸಭೆ ಮಾಡುವ ಪರಿಸ್ಥಿತಿ ಬಂದಿದೆ. ಒಟ್ನಲ್ಲಿ ಅಭಿವೃದ್ಧಿ ಮರೆತು ರಾಜಕೀಯ ಹೈಡ್ರಾಮ ನಡೆಸೋದರಲ್ಲೇ ಕಾಂಗ್ರೆಸ್ ನಾಯಕರೆಲ್ಲ ಮುಳುಗಿ ಹೋಗಿದ್ದಾರೆ. ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಅವರ ಜಗಳ ತಾರಕಕ್ಕೇರಿದೆ. ಇದನ್ನು ಡೈವರ್ಟ್ ಮಾಡಲು ಅಪರೇಶನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ಟೀಕಿಸಿದರು.

ಇದನ್ನೂ ಓದಿ: ಇಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಜನ ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದು, ಐದು ವರ್ಷ ಆಡಳಿತ ನಡೆಸಲಿ. ಆದರೆ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಾಲಿಶ ಹೇಳಿಕೆ ನೀಡೋದನ್ನ ಬಿಡಬೇಕು ಎಂದು ಪ್ರಲ್ಹಾದ ಜೋಶಿ ಹೇಳಿದರು.

ಸುಳ್ಳು ಹೇಳುವುದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ನಿಸ್ಸೀಮರು

10 ಕೆ.ಜಿ ಅಕ್ಕಿ ಕೊಡುತ್ತೇವೆ ಅಂದವರು ಬಡವರಿಗೆ ಇನ್ನೂ ಕೊಡುತ್ತಿಲ್ಲ. ದೇಶದಲ್ಲಿ ವಿದ್ಯುತ್ ಇದ್ದರೂ ರಾಜ್ಯ ಸರ್ಕಾರ ಸರಿಯಾಗಿ ಪೂರೈಸುತ್ತಿಲ್ಲ. ರಾಜ್ಯ ಕಾಂಗ್ರೆಸ್​ ನಾಯಕರು ಮಹಾಸುಳ್ಳರು ದಗಾಕೋರರು. ನಮಗೆ ಎಷ್ಟು ವಿದ್ಯುತ್ ಬೇಕೋ ಅದಕ್ಕಿಂತ ಹೆಚ್ಚು ಉತ್ಪಾದನೆ ಆಗುತ್ತಿದೆ. ನಾವು ನೇಪಾಳ ಹಾಗೂ ಬಾಂಗ್ಲಾದೇಶಕ್ಕೂ ವಿದ್ಯುತ್ ಕೊಡುತ್ತಿದ್ದೇವೆ. ಉಚಿತ ಕೊಡಬೇಕು ಅನ್ನೋ ಕಾರಣಕ್ಕೆ ಕರೆಂಟ್ ಕಟ್ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ನಿಸ್ಸೀಮರು ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.