AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ತಮ್ಮದೇ ಸರ್ಕಾರದ ವಿರುದ್ಧ ಕೈ ಶಾಸಕ ಅಸಮಾಧಾನ

ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿ ಮತ್ತು ಶಿಕ್ಷಣ ಕಾಶಿ ಧಾರವಾಡ ನಗರದಲ್ಲಿ ರಕ್ಷಕರೇ ಭಕ್ಷರಾಗುತ್ತಿದ್ದಾರಾ? ಇಂತಹದೊಂದು ಆರೋಪವನ್ನು ವಿಪಕ್ಷ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದು ಸಾಮಾನ್ಯ ಕೂಡ. ಆದ್ರೆ, ಸ್ವತಃ ಆಡಳಿತ ಪಕ್ಷದ ಶಾಸಕರೇ ಪೊಲೀಸರ ಮೇಲೆ ಅನೇಕ ಆರೋಪ ಮಾಡುತ್ತಿದ್ದು, ಅವಳಿ ನಗರದ ಎಲ್ಲಾ ಪೊಲೀಸ ಅಧಿಕಾರಿಗಳ ವರ್ಗಾವಣೆ ಮಾಡಲು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ತಮ್ಮದೇ ಸರ್ಕಾರದ ವಿರುದ್ಧ ಕೈ ಶಾಸಕ ಅಸಮಾಧಾನ
Congress Mla Prasad Abbayya
ಸಂಜಯ್ಯಾ ಚಿಕ್ಕಮಠ
| Edited By: |

Updated on: May 03, 2026 | 3:43 PM

Share

ಹುಬ್ಬಳ್ಳಿ, (ಮೇ 03): ಹುಬ್ಬಳ್ಳಿ ಧಾರವಾಡ (Hubballi And Dharwad) ಅವಳಿ ನಗರ ವ್ಯಾಪಾರ ಮತ್ತು ಶಿಕ್ಷಣ ದಿಂದ ಸುಪ್ರಸಿದ್ದಿಯನ್ನು ಪಡೆದಿವೆ. ಧಾರವಾಡಕ್ಕೆ ವಿದ್ಯಾರ್ಜನೆಗಾಗಿ ರಾಜ್ಯದ ವಿವಿಧಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಆಗಮಿಸಿದ್ರೆ ಹುಬ್ಬಳ್ಳಿ ಗೆ ವ್ಯಾಪರಕ್ಕೆ ದೇಶದ ವಿವಿದಡೆಯಿಂದ ಜನ ಬರ್ತಾರೆ. ಇಂತಹ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಪೊಲೀಸ ಕಮಿಷನರೇಟ್ ಇದ್ದು ಪೊಲೀಸ ಕಮಿಷನರ್, ಡಿಸಿಪಿ,ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸ ಸಿಬ್ಬಂದಿ ಇದ್ದಾರೆ. ಆದ್ರೆ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಸ್ವತಃ ಪೊಲೀಸರ ವಸೂಲಿ ಮಾಡೋದು, ರೌಡಿ ಸೀಟರ್ ಗಳಿಗೆ ನೆರವಾಗೋದು ಸೇರಿದಂತೆ ಅನೇಕ ಕಾನೂನು ಬಾಹಿರ ಕೆಲಸಗಳನ್ನು ಮಾಡ್ತಿರೋ ಆರೋಪ ಕೇಳಿ ಬರ್ತಿವೆ. ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅಸಮಾಧಾನ ಹೊರಹಾಕಿದ್ದಾರೆ.

ಪೊಲೀಸರ ವರ್ತನೆಗೆ ಕೈ ಶಾಸಕ ಅಸಮಾಧಾನ

ಅದರಲ್ಲೂ ಧಾರವಾಡದಲ್ಲಿ ವಿದ್ಯಾರ್ಥಿಯೋರ್ವ‌ ಪೊಲೀಸರು ಹಣಕ್ಕಾಗಿ ಪೀಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ‌ ನಂತರ ಪೊಲೀಸರ ಮೇಲೆ ಹೆಚ್ಚಿನ ಆರೋಪಗಳು ಕೇಳಿ ಬರ್ತಿವೆ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸೋದು, ಅನ್ಯಾಯ, ಅಕ್ರಮ ಮಾಡಿದವರನ್ನು ಕಂಬಿ ಹಿಂದೆ ಕಳುಹಿಸಬೇಕಿದ್ದ ಪೊಲೀಸರೇ ಹಣಕ್ಕಾಗಿ ಅನ್ಯಾಯದ ಮಾರ್ಗ ಹಿಡದಿದ್ದಾರೆ ಅಂತ ಅನೇಕ ಬಿಜೆಪಿ ಶಾಸಕರು ಆರೋಪಿಸಿದ್ದರು. ಇದೀಗ ಸ್ವತ ಆಡಳಿತ ಪಕ್ಷದ ಶಾಸಕರು ಕೂಡಾ ಅವಳಿ ನಗರದ ಪೊಲೀಸರ ವರ್ತನೆಗೆ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ

ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳು ಬೇಕು

ಹುಬ್ಬಳ್ಳಿ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ, ಪೊಲೀಸರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅವಳಿ ನಗರದಲ್ಲಿ ಪೊಲೀಸ ಇಲಾಖೆಯಲ್ಲಿ ಯಾವುದು ಸರಿಯಿಲ್ಲ. ಪೊಲೀಸರೇ ರಿಯಲ್ ಎಸ್ಟೇಟ್ ದಂಧೆ ಮಾಡೋದು, ಅಕ್ರಮ ದಂಧೆ ಮಾಡೋರಿಗೆ ಸಹಾಯ ಮಾಡೋದು ಸೇರಿದಂತೆ ಅನೇಕ ಆರೋಪಗಳು ಕೇಳಿ ಬರ್ತಿವೆ. ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿ ಹೋಗ್ತಿದೆ. ಹೀಗಾಗಿ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳನ್ನು ಹುಬ್ಬಳ್ಳಿ ಧಾರವಾಡ ಕ್ಕೆ ಹಾಕುವಂತೆ ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ. ಸಿಎಂ ಭೇಟಿ ಮಾಡಿ ಕೂಡಾ ಈ ಬಗ್ಗೆ ಮನವಿ ಸಲ್ಲಿಸುತ್ತೇನೆ. ಆದಷ್ಟು ಬೇಗನೆ ಅವಳಿ ನಗರದಲ್ಲಿರೋ ಅಧಿಕಾರಿಗಳ ವರ್ಗಾವಣೆ ಗ್ಯಾರಂಟಿ ಅಂತ ಹೇಳಿದ್ದಾರೆ.

ಹುಬ್ಬಳ್ಳಿ ಧಾರವಾಡ ಕೆಲ ಪೊಲೀಸರು ಹಣಕ್ಕಾಗಿ ಜನರನ್ನು ಪೀಡಿಸೋ ಆರೋಪಗಳು ಹೆಚ್ಚಾಗುತ್ತಿವೆ. ಗುಂಡಾಗಳು ಪೊಲೀಸ ಠಾಣೆಗಳಲ್ಲಿ ಯಾರ ಅಂಜಿಕೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು, ಅಕ್ರಮ ಅಕ್ಕಿ ಸಾಗಾಟ ಪ್ರಕರಣಗಳು ಪೊಲೀಸರ ಮೂಗಿನ ನೇರದಲ್ಲಿ ನಡೆದ್ರು ಅವರ ವಿರುದ್ಧ ಕಠಿಣ ಕ್ರಮವಾಗುತ್ತಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ನ್ಯಾಯ ಕೇಳಿಕೊಂಡು ಠಾಣೆಗೆ ಹೋದ್ರು ಅವರಿಂದ ಕೂಡಾ ಕೆಲವರು ಹಣ ವಸೂಲಿ ಮಾಡುತ್ತಿದ್ದಾರೆ. ಇನ್ನು ಅವಳಿ ನಗರದಲ್ಲಿ ಈ ಹಿಂದೆ ಪೊಲೀಸ ಕಮಿಷನರ್ ರೌಡಿ ಪರೇಡ್ ಮಾಡಿ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದರು. ಡ್ರಗ್ಸ್ ಪೆಡ್ಲರ್ ಗಳನ್ನು ಮಟ್ಟ ಹಾಕೋ ಕೆಲಸಕ್ಕೆ ಕೂಡಾ ಮುಂದಾಗಿದ್ದರು. ಆದ್ರೆ ಇವುಗಳಲ್ಲಿ ಕೂಡಾ ಕೆಲ ಅಧಿಕಾರಿಗಳು ಹಣ ಮಾಡಲು ಹೋಗಿದ್ದು ಗುಟ್ಟಾಗಿ ಉಳಿದಿಲ್ಲ.

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೆಲ ದಕ್ಷ ಮತ್ತು ಪ್ರಮಾಣಿಕ ಪೊಲೀಸರು, ಪೊಲೀಸ ಅಧಿಕಾರಿಗಳು ಇದ್ದಾರೆ. ಆದ್ರೆ ಕೆಲ ಪೊಲೀಸರು ಹಣಕ್ಕಾಗಿ ಅಡ್ಡದಾರಿ ಹಿಡಿದಿದ್ದರಿಂದ ಇಲಾಖೆಗೆ ಕೆಟ್ಟು ಹೆಸರು ಬರ್ತಿದೆ. ಹೀಗಾಗಿ ಗೃಹ ಇಲಾಖೆ ಅವಳಿ ನಗರದ ಪೊಲೀಸರ ಮೇಲೆ ಯಾವ ಕ್ರಮ ಕೈಗೊಳ್ಳುತ್ತದೆ, ಯಾರೆಲ್ಲರ ವರ್ಗಾವಣೆ ಯಾಗುತ್ತದೆ ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!