ಸಂವಿಧಾನ ಮುಟ್ಟಿದ್ರೆ ನೀವು ಸುಟ್ಟು ಭಸ್ಮ ಆಗ್ತೀರಿ- ಬಿಜೆಪಿಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಎಚ್ಚರಿಕೆ

ಇಂದು(ಏ.14) ಹುಬ್ಬಳ್ಳಿಯಲ್ಲಿ(Hubballi) ನಡೆದ ವಿಶ್ವ ಮಾನವರ ದಿನಾಚರಣೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ, ‘ಸಂವಿಧಾನ ಮುಟ್ಟಿದ್ರೆ ನೀವು ಸುಟ್ಟು ಭಸ್ಮ ಆಗ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಸಚಿವ ಸಂತೋಷ್​ ಲಾಡ್​ ಮಾತನಾಡಿ, ‘ಬಸವಣ್ಣನವರು ಸಮಾನತೆಗಾಗಿ ಶ್ರಮಿಸಿದ ಕ್ರಾಂತಿಕಾರಿ ನಾಯಕ. ಬಸವಣ್ಣನವರ ಆಶಯ ರೀತಿಯಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ನಡೆದಿದ್ದಾರೆ ಎಂದರು.

ಸಂವಿಧಾನ ಮುಟ್ಟಿದ್ರೆ ನೀವು ಸುಟ್ಟು ಭಸ್ಮ ಆಗ್ತೀರಿ- ಬಿಜೆಪಿಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಎಚ್ಚರಿಕೆ
ಬಿಜೆಪಿಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಎಚ್ಚರಿಕೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 14, 2024 | 9:52 PM

ಹುಬ್ಬಳ್ಳಿ, ಏ.14: ಸಂವಿಧಾನ ಮುಟ್ಟಿದ್ರೆ ನೀವು ಸುಟ್ಟು ಭಸ್ಮ ಆಗ್ತೀರಿ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ (Prasad Abbayya)ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು(ಏ.14) ಹುಬ್ಬಳ್ಳಿಯಲ್ಲಿ(Hubballi) ನಡೆದ ವಿಶ್ವ ಮಾನವರ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಕೆಲವೊಬ್ಬರು ಮಾತೆತ್ತಿದ್ರೆ ಸಂವಿಧಾನ ಬದಲಾಯಿಸುವ ಬಗ್ಗೆ ಮಾತಾಡುತ್ತಿದ್ದಾರೆ. ಆದರೆ, ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ. ಒಂದು ವೇಳೆ ಸಂವಿಧಾನ ಬದಲಾವಣೆಗೆ ಕೈಹಾಕಿದರೆ ಸುಟ್ಟು ಭಸ್ಮ ಆಗುತ್ತಾರೆ ಎಂದರು.

ಡಾ. ಬಿ.ಆರ್​ ಅಂಬೇಡ್ಕರ್ ಅವರು ಶೋಷಿತ ಜನಾಂಗಕ್ಕೆ ಜೀವನ ಮುಡುಪಾಗಿಟ್ಟಿದ್ದರು. ಸಂವಿಧಾನ ಬದಲಾಯಿಸ್ತೇವೆ ಎನ್ನುವ ಭೂಪರಿಗೆ ತಕ್ಕ ಉತ್ತರ ಕೊಡಬೇಕು. ಸಂವಿಧಾನ ವಿರೋಧಿ ಹೇಳಿಕೆ ಕೊಡುವವರನ್ನು ಲಾಡ್ ನಾಶ ಮಾಡ್ತಾರೆ. ಸಚಿವ ಸಂತೋಷ್ ಲಾಡ್ ಗುಡುಗು ಮಿಂಚಿನ ರೀತಿಯಲ್ಲಿ ಓಡಾಡುತ್ತಿದ್ದಾರೆ. BJP ಕಚೇರಿಯಲ್ಲಿ ಅಂಬೇಡ್ಕರ್, ವಾಲ್ಮೀಕಿ ಫೋಟೋ ಹೊರಗೆ ಹಾಕಲಾಗಿದೆ. ಬಿಜೆಪಿ ಮತ್ತು RSS ಮನಸ್ಥಿತಿ ಏನು ಎಂದು ಇದರಿಂದಲೇ ಗೊತ್ತಾಗುತ್ತದೆ. ಸಂವಿಧಾನ ಉಳಿಯಬೇಕಾದ್ರೆ ವಿನೋದ್ ಅಸೂಟಿಯಂಥವರು ಗೆಲ್ಲಬೇಕು ಎಂದು ಹೇಳಿದರು.

ಇದನ್ನೂ ಓದಿ:ಅನಂತಕುಮಾರ್ ಹೆಗಡೆ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಅಸಾಧ್ಯ: ಬಿಜೆಪಿ ಉಪಾಧ್ಯಕ್ಷ ರಾಜುಗೌಡ

ಇದೇ ವೇಳೆ ಮಾತನಾಡಿದ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್, ‘ಡಾ.ಅಂಬೇಡ್ಕರ್​ ಕೇವಲ ಎಸ್​ಸಿ, ಎಸ್​ಟಿ ಜನಾಂಗಕ್ಕೆ ಸೀಮಿತವಾಗಿರಲಿಲ್ಲ. ಸಾಹು ಮಹಾರಾಜರು ಶೇ.50.ರಷ್ಟು ಮೀಸಲಾತಿ ಕೊಟ್ಟ ಮೊದಲಿಗರು, ಬಸವಣ್ಣನವರು ಸಮಾನತೆಗಾಗಿ ಶ್ರಮಿಸಿದ ಕ್ರಾಂತಿಕಾರಿ ನಾಯಕ. ಬಸವಣ್ಣನವರ ಆಶಯ ರೀತಿಯಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ನಡೆದಿದ್ದಾರೆ. 70 ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಅಂತಾ ಮೋದಿ ಕೇಳ್ತಾರೆ. ಮೋದಿ ಜನಿಸಿದ ವರ್ಷದಲ್ಲೇ ಈ ದೇಶಕ್ಕೆ ಸಂವಿಧಾನ ಜಾರಿಗೆ ಬಂತು. ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮೋದಿ ಓದಿ ಅರ್ಥ ಮಾಡಿಕೊಳ್ಳಲಿ. ಬಿಜೆಪಿ ಮತ್ತು ಆರ್​​ಎಸ್​​ಎಸ್​​ನವರು ಎಂದೂ ಅಂಬೇಡ್ಕರ್​​ರನ್ನು ಒಪ್ಪಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ