AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಶಾಸಕ ವಿನಯ್ ಕುಲಕರ್ಣಿಗೆ ನಿರಾಸೆ: ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅನುಮತಿ ನಿರಾಕರಿಸಿದೆ.

ಕೈ ಶಾಸಕ ವಿನಯ್ ಕುಲಕರ್ಣಿಗೆ ನಿರಾಸೆ: ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್
ವಿನಯ್ ಕುಲಕರ್ಣಿಗೆ ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್
Rakesh Nayak Manchi
Rakesh Nayak Manchi|

Updated on: Jun 19, 2023 | 4:03 PM

Share

ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ನಿರಾಸೆಯಾಗಿದೆ. ಧಾರವಾಡ ಪ್ರವೇಶಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅನುಮತಿ ನಿರಾಕರಿಸಿದೆ. ಜೂನ್ 20ರ ಚುನಾವಣೆಗೆ ಮತದಾನ ಮಾಡಲು ಕುಲಕರ್ಣಿ ಅವರು ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅನುಮತಿ ನಿರಾಕರಿಸಿ ನ್ಯಾಯಾಧೀಶ ಬಿ.ಜಯಂತಕುಮಾರ್ ಆದೇಶ ಹೊರಡಿಸಿದ್ದಾರೆ.

ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಅನುಮತಿಯನ್ನು ಈ ಹಿಂದೆಯೇ ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಯ ತಾಯಿ ನಗರ ಪಾಲಿಕೆ ಸದಸ್ಯರಾಗಿದ್ದಾರೆ. ಸದ್ಯ ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿಯಾಗಿರುವ ಹಿನ್ನೆಲೆ ಅನುಮತಿ ನೀಡದಂತೆ ಸಿಬಿಐ ಎಸ್​ಪಿಪಿ ಗಂಗಾಧರ ಶೆಟ್ಟಿ ವಾದ ಮಂಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಜೂ.20 ರಂದು ಚುನಾವಣೆ ನಡೆಯಲಿದ್ದು, ಕೈ ಎತ್ತುವ ಮೂಲಕ ಮತದಾನ ಮಾಡಬೇಕು. ಹೀಗಾಗಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಶಾಸಕನಾಗಿ ಅಯ್ಕೆಯಾಗಿರುವ ಕಾರಣಕ್ಕೆ ಮತದಾನ ಮಾಡಬೇಕಿರುವುದರಿಂದ ಧಾರವಾಡ ಪ್ರವೇಶಿಸದಂತೆ ವಿಧಿಸಿರುವ ನಿರ್ಬಂಧವನ್ನು ಸಡಿಲಿಸುವಂತೆ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜೂ.17ರೊಳಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕೋರ್ಟ್ ಸೂಚನೆ ನೀಡಿತ್ತು.

ಇದನ್ನೂ ಓದಿ: ಬತ್ತುತ್ತಿರುವ ಬೆಳಗಾವಿ ಜಿಲ್ಲೆಯ 7 ನದಿಗಳು: ಹುಬ್ಬಳ್ಳಿ-ಧಾರವಾಡ, ಕುಂದಾನಗರಿಯಲ್ಲಿ ನೀರಿಗೆ ಹಾಹಾಕಾರ..!?

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಹಲವರು ಆರೋಪಿ ಸ್ಥಾನದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡುವ ವೇಳೆ, ನ್ಯಾಯಾಲಯದ ಅನುಮತಿ ಪಡೆಯದೇ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿದಂತೆ ನಾಲ್ಕು ಷರತ್ತುಗಳನ್ನು ವಿಧಿಸಿತ್ತು.

ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ, ಧಾರವಾಡ ಪ್ರವೇಶಿಸಲು ನ್ಯಾಯಾಲಯದ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿತ್ತು. ಹೀಗಾಗಿ, ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಯೂ ಅರ್ಜಿ ವಜಾ ಆಗಿತ್ತು. ಇದರಿಂದ ವಿನಯ್ ಕುಲಕರ್ಣಿ ಅವರು ಧಾರವಾಡ ಜಿಲ್ಲೆಯಿಂದ ಹೊರಗೆ ಇದ್ದುಕೊಂಡೇ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅಂತಿಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್