ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ; ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಜಮೀರ್ ಅಹ್ಮದ್
ಹೆಲ್ಮೆಟ್ ಹೇಗೆ ಸೇಫ್ಟಿ ಕೊಡುತ್ತೋ ಹಾಗೇ ಹಿಜಾಬ್ ನೀಡುತ್ತೆ. ಹೆಲ್ಮೆಟ್ ಕಡ್ಡಾಯವಿದ್ದರೂ ಕೆಲ ಬೈಕ್ ಸವಾರರು ಹಾಕಲ್ಲ. ಅದೇ ರೀತಿ ಬಹಳ ಜನ ಹಿಜಾಬ್ ಕೂಡ ಹಾಕುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಹುಬ್ಬಳ್ಳಿ: ಹಿಜಾಬ್ ಬಗ್ಗೆ ನಾನು ಮಾತನಾಡುತ್ತೇನೆ. ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ. ನಾನು ಯಾಕೆ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ (DK Shivakumar) ಜಮೀರ್ ಅಹ್ಮದ್ ಖಾನ್ (Zameer Ahmad Khan) ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಿಜಾಬ್ (Hijab) ಹಾಕಬೇಕು ಎಂದು ನಾನು ಹೇಳಿಕೆ ನೀಡಿದ್ದೆ. ನನ್ನ ಹೇಳಿಕೆಯನ್ನು ಮಾಧ್ಯಮದವರು ತಿರುಚಿದ್ದಾರೆ. ಹೆಲ್ಮೆಟ್ ರೀತಿ ಹಿಜಾಬ್ ಹಾಕಬೇಕು ಎಂದು ಹೇಳಿದ್ದೆ. ಹೆಲ್ಮೆಟ್ ಹೇಗೆ ಸೇಫ್ಟಿ ಕೊಡುತ್ತೋ ಹಾಗೇ ಹಿಜಾಬ್ ನೀಡುತ್ತೆ. ಹೆಲ್ಮೆಟ್ ಕಡ್ಡಾಯವಿದ್ದರೂ ಕೆಲ ಬೈಕ್ ಸವಾರರು ಹಾಕಲ್ಲ. ಅದೇ ರೀತಿ ಬಹಳ ಜನ ಹಿಜಾಬ್ ಕೂಡ ಹಾಕುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಮೀರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು. ಮೊದಲೇ ಹೇಳಿದ್ದೆ ಮಾತನಾಡಬಾರದು ಅಂತಾ. ಆದರೂ ಕೆಲವರು ಮಾತನಾಡಿದ್ದಾರೆ, ಜಮೀರ್ ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಲು ಹೇಳುತ್ತೇನೆ ಎಂದು ಹೇಳಿದ್ದರು.
ನಿನ್ನೆ (ಫೆಬ್ರವರಿ 13) ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವಿವಿಧ ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಹಿಜಾಬ್ ಅಂದ್ರೆ ಮುಸಲ್ಮಾನರಲ್ಲಿ ಗೋಶಾಪರದ ಅಂತ ಹೇಳ್ತೇವೆ. ಅವರ ಮನೆಯಲ್ಲಿ ಹೆಣ್ಣುಮಕ್ಕಳಿದ್ದಾರೋ ಇಲ್ಲವೋ ಗೊತ್ತಿಲ್ಲ. ಅವರ ಮನೆಯಲ್ಲಿ ಹೆಣ್ಣುಮಕ್ಕಳು ಇದ್ದಿದ್ದರೆ ಗೊತ್ತಾಗುತ್ತಿತ್ತು. ಹೆಣ್ಣುಮಕ್ಕಳು ತಮ್ಮ ರಕ್ಷಣೆಗಾಗಿ ಹಿಜಾಬ್ ಧರಿಸುತ್ತಾರೆ. ಹೆಣ್ಣುಮಕ್ಕಳು ದೊಡ್ಡವರಾದ ಮೇಲೆ ದೇಹರಚನೆ ಕಾಣಿಸಬಾರದು. ದೇಹರಚನೆ ಹೊರಗೆ ಕಾಣಿಸಬಾರದು ಎಂದು ಹಿಜಾಬ್ ಬಳಸ್ತಾರೆ. ಅತ್ಯಾಚಾರ ಪ್ರಕರಣ ಹೆಚ್ಚಾಗಿರುವುದು ಭಾರತದಲ್ಲಿ. ಹಿಜಾಬ್ ಹಾಕದಿರುವ ಕಾರಣದಿಂದ ಇಂತಹ ಘಟನೆ ನಡೆದಿದೆ ಎಂದು ಜಮೀರ್ ಅಹ್ಮದ್ ಹೇಳಿದ್ದರು.
ಇದನ್ನೂ ಓದಿ: ಸಂಬಂಧಗಳಿಗೆ ಮಹತ್ವ ಕೊಡುವ ಬುದ್ಧಿ ಜಮೀರ್ಗೆ ಬರಲಿ: ಭಾರತಿ ಶೆಟ್ಟಿ ಆಕ್ರೋಶ
ಇದನ್ನೂ ಓದಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ: ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ
Published On - 5:52 pm, Mon, 14 February 22