‘ವಾಣಿಜ್ಯನಗರಿ ಹುಬ್ಬಳ್ಳಿ ಗಾರ್ಬೇಜ್ ಸಿಟಿಯಾಗಿದೆ’ ಪಾಲಿಕೆಯ ಆವರಣದಲ್ಲಿ ಕಸ ಸುರಿದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಒಂದು ಕಡೆ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ ಮತ್ತೊಂದೆಡೆ ಪಾಲಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿಗೆ ಮುಜುಗರ ಉಂಟುಮಾಡಲು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಮತ್ತಿತರರ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ.
ಹುಬ್ಬಳ್ಳಿ: ‘ವಾಣಿಜ್ಯನಗರಿ ಹುಬ್ಬಳ್ಳಿ ಗಾರ್ಬೇಜ್ ಸಿಟಿಯಾಗಿದೆ’ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಗೆ ಇಳಿದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಲೋಡ್‌ಗಟ್ಟಲೆ ಕಸವನ್ನು ಸುರಿದು ತೀವ್ರ ಆಕ್ರೋಶ ಹೊರ ಹಾಕಿದೆ.
ಹುಬ್ಬಳ್ಳಿಯಲ್ಲಿ ಒಂದು ಕಡೆ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ ಮತ್ತೊಂದೆಡೆ ಪಾಲಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿಗೆ ಮುಜುಗರ ಉಂಟುಮಾಡಲು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಮತ್ತಿತರರ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಹುಬ್ಬಳ್ಳಿ ಮಹಾನಗರ ಪಾಲಿಕೆ ಆವರಣದಲ್ಲಿ ಕಸ ಚೆಲ್ಲಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿಟ್ಟು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಾರ್ಟ್ ಸಿಟಿ ಎಂದು ಹೇಳ್ತಿರಾ ಆದ್ರೆ ಹುಬ್ಬಳ್ಳಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ರಸ್ತೆಗಳು ಗುಂಡಿಗಳಿಂದ ತುಂಬಿ ಹೋಗಿವೆ. ಎಲ್ಲಿ ನೋಡಿದರೂ ಧೂಳು. ಕಸ ವಿಲೇವಾರಿಯೂ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪಿಸಿ ಬಿಜೆಪಿ ಸರ್ಕಾರದ ಕಾರ್ಯವೈಖರಿ ವಿರುದ್ಧ ಗರಂ ಆಗಿದ್ದಾರೆ. ಜೊತೆಗೆ ಕೂಡಲೇ ನಗರದ ಜನತೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯನ್ನು ಸ್ವಚ್ಛವಾಗಿಡಲು ಬಿಜೆಪಿ ವಿಫಲವಾಗಿದೆ. ಹುಬ್ಬಳ್ಳಿಯನ್ನ ಕಸಮುಕ್ತ ಮಾಡಲು ಬಿಜೆಪಿಯಿಂದ ಆಗಿಲ್ಲ. ಕಳೆದ ಒಂದು ವಾರದಿಂದ ಕಸ ವಿಲೇವಾರಿ ಮಾಡಿಲ್ಲ. ಪೌರ ಕಾರ್ಮಿಕರನ್ನು ಬಿಜೆಪಿ ಕೆಲಸಕ್ಕೆ ಬಳಸಿಕೊಳ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ.
ಇದನ್ನೂ ಓದಿ: Viral Video: ಕೊವಿಡ್ ನಿಯಮ ಉಲ್ಲಂಘಿಸಿ ಕ್ರಿಕೆಟ್ ಪಂದ್ಯ ಆಯೋಜಿಸಿದ ಬಿಜೆಪಿ ಶಾಸಕ; ವಿಡಿಯೋ ವೈರಲ್