ಧಾರವಾಡ: ವೀರ್​ ಸಾವರ್ಕರ್ ಫೋಟೋಗೆ ಮೊಟ್ಟೆ ಹೊಡೆದು, ಕಾಲಿನಲ್ಲಿ ತುಳಿದು, ಬೆಂಕಿ ಹಚ್ಚಿ ಕಾಂಗ್ರೆಸ್​ ಕಾರ್ಯಕರ್ತರಿಂದ ಆಕ್ರೋಶ

ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ.

ಧಾರವಾಡ: ವೀರ್​ ಸಾವರ್ಕರ್ ಫೋಟೋಗೆ ಮೊಟ್ಟೆ ಹೊಡೆದು, ಕಾಲಿನಲ್ಲಿ ತುಳಿದು, ಬೆಂಕಿ ಹಚ್ಚಿ ಕಾಂಗ್ರೆಸ್​ ಕಾರ್ಯಕರ್ತರಿಂದ ಆಕ್ರೋಶ
ವೀರ್​ ಸಾವರ್ಕರ್ ಫೋಟೋಗೆ ಮೊಟ್ಟೆ ಹೊಡೆದು, ಕಾಲಿನಲ್ಲಿ ತುಳಿದು, ಬೆಂಕಿ ಹಚ್ಚಿ ಕಾಂಗ್ರೆಸ್​ ಕಾರ್ಯಕರ್ತರಿಂದ ಆಕ್ರೋಶ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 19, 2022 | 8:40 PM

ಧಾರವಾಡ: ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ ದಹಿಸಿರುವ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನದ ವೇಳೆ ಕಾರ್ಯಕರ್ತರು ಏಕಾಏಕಿ ಸಾವರ್ಕರ್ ಭಾವಚಿತ್ರ ತಂದಿದ್ದಾರೆ. ಕಾರ್ಯಕರ್ತರು ಪೂರ್ವ ನಿಯೋಜಿತವಾಗಿ ಐದಾರು ಭಾವಚಿತ್ರ ತಂದಿದ್ದರು. ಪೊಲೀಸ್ ಬಂದೋಬಸ್ತ್ ಮಧ್ಯೆಯೇ ಸಾವರ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರತಿಭಟನೆ ನೇತೃತ್ವ ವಹಿಸಿದ್ದ ಎಐಸಿಸಿ ಸದಸ್ಯ ದೀಪಕ ಚಿಂಚೋರೆ  ನಾನು ಅದನ್ನು ನೋಡಿಲ್ಲ. ಅದು ಪೂರ್ವನಿಯೋಜಿತವೂ ಅಲ್ಲ. ಯಾರಾದರೂ ಬಿಜೆಪಿಯವರೇ ಮಾಡಿಸಿರಬಹುದು. ನಮ್ಮಲ್ಲಿ ಅಂತಹ ಸಂಸ್ಕೃತಿ ಇಲ್ಲ. ಬಿಜೆಪಿಯಲ್ಲಿ ಆ ಸಂಸ್ಕೃತಿ ಇದೆ ಎಂದು ಹೇಳಿದರು.

ನಮ್ಮ ಕಾರ್ಯಕರ್ತರು ಅಂಥವರಲ್ಲ. ಶಾಂತಿಯುತವಾದ ಪ್ರತಿಭಟನೆ ಮಾಡಿದ್ದೇವೆ. ಕೇವಲ ಅರಗ ಜ್ಞಾನೇಂದ್ರ ಪ್ರತಿಕೃತಿ ಮಾತ್ರ ದಹಿಸಿದ್ದೇವೆ. ಅಂಥದ್ದನ್ನು ಮಾಡಲು ಸಾಧ್ಯವಿಲ್ಲ. ಅದನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ವಿದ್ಯಾಕಾಶಿ ಧಾರವಾಡಕ್ಕೂ-ವೀರ್​ ಸಾವರ್ಕರ್ ಗೂ ಏನು ನಂಟು?

ಸ್ವಾತಂತ್ರ್ಯ ವೀರ್ ಸಾವರ್ಕರ್​ ಪುಣೆಯ ಫಾರ್ಗಿಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಇವರ ಸಹಪಾಠಿಯಾಗಿದ್ದ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು ವೀರ್ ಸಾವರ್ಕರರನ್ನು ಧಾರವಾಡಕ್ಕೆ ಆಹ್ವಾನ ನೀಡುತ್ತಾರೆ. ಆಲೂರು ವೆಂಕಟರಾಯರ ಆಹ್ವಾನದ ಮೇರೆಗೆ 37 ವರ್ಷದ ಅಂಡಮಾನನ ಕಾಲಾಪಾನಿಯ ಸೆರೆಮನೆವಾಸ ಅನುಭವಿಸಿದ ನಂತರ ಧಾರವಾಡಕ್ಕೆ ಬಂದು ಮರಾಠಿಯಲ್ಲಿ ಭಾಷಣ ಮಾಡುತ್ತಾರೆ. ಭಾಷಣ ಮಧ್ಯೆ ಅವರು ಕನ್ನಡ ಕಲಿಯುವ ಇಂಗಿತವನ್ನು ವ್ಯಕ್ತಪಡಿಸುತ್ತಾರೆ.

ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಧಾರವಾಡ: ಕಾಂಗ್ರೆಸ್ ಕಾರ್ಯಕರ್ತರಿಂದ ವೀರ್ ಸಾವರ್ಕರ್ ಫೋಟೋ ಸುಟ್ಟ ಹಿನ್ನೆಲೆ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಧಾರವಾಡದ ಉಪ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ. ಸಾವರ್ಕರ್ ಫೋಟೋ ಸುಟ್ಟವರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.  ಧಾರವಾಡ-ಬೆಳಗಾವಿ ರಸ್ತೆ ತಡೆದು ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ, ಮೊಟ್ಟೆ ಎಸೆತ

ಚಿತ್ರದುರ್ಗ: ವಿಪಕ್ಷ ನಾಯಕ ಸಿದ್ಧರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡಸಿದ್ದು, ಕೆಳಗೋಟೆ ಬಡಾವಣೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಿ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದ ಗಾಂಧಿ ವೃತ್ತದ ಬಳಿ ಸಿಎಂ ಬೊಮ್ಮಾಯಿ, ಗೃಹ ಸಚಿವರ ಭಾವಚಿತ್ರಕ್ಕೆ ಮೊಟ್ಟೆ ಹೊಡೆದು ಕಿಡಿಕಾರಿದ್ದಾರೆ.

ನಾನು ಸಾವರ್ಕರ್ ಅವರನ್ನು ಒಬ್ಬ ಮಾನವನಾಗಿ ಗೌರವಿಸುತ್ತೇನೆ: ಸಿದ್ದರಾಮಯ್ಯ

ಚಿಕ್ಕಮಗಳೂರು: ವೀರ್ ಸಾವರ್ಕರ್  ಅವರ ಬಗ್ಗೆ ಗೌರವವಿದೆ, ಅವರೂ ನಮ್ಮಂತೆ ನರಮಾನವರಾಗಿದ್ದರು, ನಾವು ಯಾರನ್ನೂ ದ್ವೇಷಿಸುವುದಿಲ್ಲ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು ನಾವು ಪ್ರತಿಪಾದಿಸೋದೇ ಅದು, ಮಾನವರಾಗಿ ಹುಟ್ಟಿದ್ದೀರಿ, ಮಾನವರನ್ನು ಪ್ರೀತಿಸಿರಿ ಅನ್ನೋದು. ನಾವು ಯಾರನ್ನೂ ಜಾತಿ ಮತ ಕೇಳಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ, ನಮ್ಮಲ್ಲಿ ಎಲ್ಲರೂ ಸಮಾನರು, ನನಗೆ ರೋಗ ಬಂದಾಗ ಕುರುಬ ಸಮದಾಯದ ವೈದ್ಯರನ್ನೇ ಅರಸಿಕೊಂಡು ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Published On - 5:20 pm, Fri, 19 August 22

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ