ವಿಮೆ ತಿರಸ್ಕರಿಸಿದ ರಿಲೈನ್ಸ್ ಜನರಲ್ ಇನ್ಶುರೆನ್ಸ್ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

Dharwad News: ಅಪಘಾತ ಸಮಯದಲ್ಲಿ ಕಾರಿನಲ್ಲಿ ಹೆಚ್ಚುವರಿ ಪ್ರಯಾಣಿಕರು ಇದ್ದಿದ್ದರಿಂದ ದೂರುದಾರ ಪಾಲಸಿ ನಿಯಮಾವಳಿ ಉಲ್ಲಂಘಿಸಿದ್ದಾರೆ ಎಂದು ಕ್ಲೇಮ್ ಅರ್ಜಿಯನ್ನು ವಿಮಾ ಕಂಪನಿ ತಿರಸ್ಕರಿಸಿದ್ದರು. ಹಾಗಾಗಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ವಿಮೆ ತಿರಸ್ಕರಿಸಿದ ರಿಲೈನ್ಸ್ ಜನರಲ್ ಇನ್ಶುರೆನ್ಸ್ ಕಂಪನಿಗೆ ಗ್ರಾಹಕರ ಆಯೋಗ ದಂಡ ವಿಧಿಸಿದೆ.

ವಿಮೆ ತಿರಸ್ಕರಿಸಿದ ರಿಲೈನ್ಸ್ ಜನರಲ್ ಇನ್ಶುರೆನ್ಸ್ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ
ಪ್ರಾತಿನಿಧಿಕ ಚಿತ್ರ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 11, 2023 | 6:53 PM

ಧಾರವಾಡ ಆಗಸ್ಟ್​ 11: ಜಿಲ್ಲೆಯ ಹುಬ್ಬಳ್ಳಿ ನಗರದ ದತ್ತಾತ್ರೇಯ ಕಾಲನಿ ನಿವಾಸಿ ಲಕ್ಷ್ಮೀಕಾಂತ ಖಟವಟೆ ಎಂಬುವವರು ರಿಲೈನ್ಸ್ ವಿಮಾ ಕಂಪನಿಯಿಂದ (Reliance Insurance Company) ತನ್ನ ಮಾಲೀಕತ್ವದ ಹುಂಡೈ ಕಾರ್‌ಗೆ ರೂ.16,606 ಮೊತ್ತದ ಪ್ರೀಮಿಯಮ್ ಕೊಟ್ಟು ಪಾಲಸಿ ಮಾಡಿಸಿದ್ದರು. ಈ ಪಾಲಸಿ ಅವಧಿ 14 ಜೂನ್​ 2021 ರಿಂದ 13 ಜೂನ್​ 2022ರ ವರೆಗೆ ಚಾಲ್ತಿಯಲ್ಲಿತ್ತು. ಜನವರಿ 1, 2022 ರಂದು ಲಕ್ಷ್ಮೀಕಾಂತ ಅವರ ವಾಹನ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ಅಪಘಾತಕ್ಕೆ ಈಡಾಗಿ ಸಂಪೂರ್ಣವಾಗಿ ಜಖಂ ಆಗಿತ್ತು. ಲಕ್ಷ್ಮೀಕಾಂತ ವಿಮಾ ಕಂಪನಿಗೆ ಅಗತ್ಯ ದಾಖಲೆ ಸಮೇತ ಕ್ಲೇಮ್ ಅರ್ಜಿ ಸಲ್ಲಿಸಿದ್ದರು.

ಅಪಘಾತ ಸಮಯದಲ್ಲಿ ಕಾರಿನಲ್ಲಿ ಹೆಚ್ಚುವರಿ ಪ್ರಯಾಣಿಕರು ಇದ್ದಿದ್ದರಿಂದ ದೂರುದಾರ ಪಾಲಸಿ ನಿಯಮಾವಳಿ ಉಲ್ಲಂಘಿಸಿದ್ದಾರೆ ಅಂತಾ ಅವರ ಕ್ಲೇಮ್ ಅರ್ಜಿಯನ್ನು ವಿಮಾ ಕಂಪನಿಯವರು ತಿರಸ್ಕರಿಸಿದ್ದರು. ವಿಮಾ ಕಂಪನಿಯ ಈ ಕ್ರಮ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಲಕ್ಷ್ಮೀಕಾಂತ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿಯ ಬೆಂಗೇರಿಯಲ್ಲಿಯೇ ಅತಿ ಹೆಚ್ಚು ತ್ರಿವರ್ಣ ಧ್ವಜ ತಯಾರಿ; ಕಳೆದ ವರ್ಷ 28 ಸಾವಿರಕ್ಕೂ ಅಧಿಕ ರಾಷ್ಟ್ರಧ್ವಜ ಮಾರಾಟ

ಈ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಲಕ್ಷ್ಮೀಕಾಂತ ಪಡೆದ ವಿಮೆ ಪಾಲಸಿ ಚಾಲ್ತಿಯಲ್ಲಿದ್ದು ವಿಮಾ ಕಂಪನಿಯ ನಿಯಮಾವಳಿಯಂತೆ ವಿಮಾ ಹಣವನ್ನು ಅವರಿಗೆ ಕೊಡುವುದು ಕರ್ತವ್ಯವಾಗಿರುತ್ತದೆ.

ಆದರೆ ಅಂತಹ ಕರ್ತವ್ಯ ನಿರ್ವಹಣೆಯಲ್ಲಿ ವಿಮಾ ಕಂಪನಿ ವಿಫಲವಾಗಿದೆ. ಆದ್ದರಿಂದ ಕಂಪನಿ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದೆ ಅಂತಾ ಅಭಿಪ್ರಾಯಪಟ್ಟಿದ್ದಾರೆ. ವಿಮಾ ಕರಾರಿನಲ್ಲಿ ನಮೂದಿಸಿದ 5 ಕ್ಕಿಂತ ಹೆಚ್ಚು ಜನರು ಅಪಘಾತಕ್ಕೊಳಪಟ್ಟ ವಾಹನದಲ್ಲಿ ಇದ್ದರು ಅನ್ನೋ ಒಂದೇ ಕಾರಣದಿಂದ ಅರ್ಜಿಯನ್ನು ತಿರಸ್ಕರಿಸುವುದು ಸೂಕ್ತ ಮತ್ತು ನ್ಯಾಯಸಮ್ಮತವಲ್ಲ ಅಂತಾ ಆಯೋಗ ಹೇಳಿದೆ.‌

ಇದನ್ನೂ ಓದಿ: 77ರ ಇಳಿವಯಸ್ಸಿನಲ್ಲಿಯೂ ಜಿಗಿ ಜಿಗಿಯುತ್ತಾ ಓಡುವ ಕೆಎಸ್ಸಾರ್ಟಿಸಿ ನಿವೃತ್ತ ಅಧಿಕಾರಿ ಇಂದಿನ ಯುವಕರಿಗೆ ನೀಡುವ ಸಂದೇಶ ಏನು ಗೊತ್ತಾ!?

ನಾನ್ ಸ್ಟ್ಯಾಂಡರ್ಡ್ ಆಧಾರದ ಮೇಲೆ ವಿಮಾ ಹಣ ರೂ. 4,72,500/- ನ್ನು ಶೇ. 8 ಬಡ್ಡಿಯೊಂದಿಗೆ ದೂರುದಾರರಿಗೆ ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ಸಂದಾಯ ಮಾಡುವಂತೆ ಆಯೋಗ ಆದೇಶ ನೀಡಿದೆ. ದೂರುದಾರರಿಗೆ ಆಗಿರುವ ಮಾನಸಿಕ ತೊಂದರೆ ಹಾಗೂ ಅನಾನುಕೂಲಕ್ಕಾಗಿ ರೂ. 50 ಸಾವಿರ ಪರಿಹಾರ ಮತ್ತು ರೂ.10 ಸಾವಿರ ಪ್ರಕರಣದ ಖರ್ಚು ವೆಚ್ಚವನ್ನು ಲಕ್ಷ್ಮೀಕಾಂತ ಅವರಿಗೆ ಕೊಡುವಂತೆ ವಿಮಾ ಕಂಪನಿಗೆ ಆಯೋಗ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:51 pm, Fri, 11 August 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ