10 ವರ್ಷದ ನಂತರ, ಭವಿಷ್ಯದ ದೃಷ್ಟಿಯಿಂದ ಒಂದಾದ ದಂಪತಿ! ಇದು ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕ್ರಮ

ಒಂದಾದ ದಂಪತಿಯನ್ನು ನ್ಯಾಯಧೀಶರಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಪಿ. ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರುಗಳು ದಂಪತಿ ಮತ್ತೆ ಒಂದಾಗಿರುವುದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.

10 ವರ್ಷದ ನಂತರ, ಭವಿಷ್ಯದ ದೃಷ್ಟಿಯಿಂದ ಒಂದಾದ ದಂಪತಿ! ಇದು ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕ್ರಮ
10 ವರ್ಷದ ನಂತರ, ಭವಿಷ್ಯದ ದೃಷ್ಟಿಯಿಂದ ಒಂದಾದ ದಂಪತಿ! ಇದು ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕ್ರಮ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 18, 2022 | 10:48 PM

ಧಾರವಾಡ: ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು 10 ವರ್ಷಗಳಿಂದ ದೂರವಾಗಿದ್ದ ದಂಪತಿಯನ್ನು (Couple) ಪರಸ್ಪರ ಒಂದುಗೂಡಿಸಿದೆ. ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ದಂಪತಿ ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು. ಪತಿ ದೀಪಕ್ ಅವರು ವಿಚ್ಛೇದನ (Divorce) ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ‌ ಅರ್ಜಿ ಸಲ್ಲಿಸಿದ್ದರು.

ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಯನ್ನು ನ್ಯಾಯಮೂರ್ತಿಗಳ ಸಲಹೆ ಮೇರೆಗೆ ಮಧ್ಯಸ್ಥಿಕೆಗಾರರ ಎದುರು ಹಾಜರು ಪಡಿಸಲಾಯಿತು. ಉಭಯ ಪಕ್ಷಗಾರರ ಸಂಬಂಧಿಕರು, ಉಭಯ ಪಕ್ಷಗಾರರ ವಕೀಲರಾದ ಎಸ್.ಆರ್ . ಹೆಗಡೆ ಮತ್ತು ಗಿರೀಶ ಹಿರೇಮಠ ಹಾಗೂ ಮಧ್ಯಸ್ಥಗಾರರಾದ ಹನುಮಂತರೆಡ್ಡಿ ಸಾವ್ಕಾರ ಅವರ ಹಿತವಚನದ ಮೇರೆಗೆ ಮುಂದಿನ ದಾಂಪತ್ಯ ಜೀವನ, ಭವಿಷ್ಯ ಹಾಗೂ ಮಗಳ ಜೀವನದ ನಿರ್ವಹಣೆಯ ಸದುದ್ದೇಶವನ್ನು ಗಮನದಲ್ಲಿಟ್ಟುಕೊಂಡು ರಾಜಿ ಮಾಡಿಕೊಂಡರು.

ಒಂದಾದ ದಂಪತಿಯನ್ನು ನ್ಯಾಯಧೀಶರಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಪಿ. ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರುಗಳು ದಂಪತಿ ಮತ್ತೆ ಒಂದಾಗಿರುವುದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು. ದಂಪತಿ ಇಂದು ಜೊತೆಯಾಗಿ ಶಿವಮೊಗ್ಗದಲ್ಲಿರುವ ಪತಿಯ ಮನೆಗೆ ತೆರಳಿದರು ಎಂದು ಹೈಕೋರ್ಟ್ ಪೀಠದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್. ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On - 8:00 pm, Mon, 18 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು