AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಜಾನುವಾರುಗಳ ಬಹಿರಂಗ ಹರಾಜಿಗೆ ನಿರ್ಧಾರ; ಹಿಂದೂಪರ ಸಂಘಟನೆಗಳಿಂದ ವಿರೋಧ

ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಗೋವುಗಳಿಗೆ ಸಂಬಂಧಿಸಿದ ರಗಳೆಗಳು ಹೆಚ್ಚಾಗುತ್ತಲೇ ಇವೆ. ಇದೇ ವೇಳೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ತನ್ನ ಅಧೀನದಲ್ಲಿರುವ ಹೈನುಗಾರಿಕಾ ವಿಭಾಗದಲ್ಲಿನ ಜಾನುವಾರುಗಳನ್ನು ಬಹಿರಂಗ ಹರಾಜು ಹಾಕಲು ನಿರ್ಧರಿಸಿದೆ. ಇದಕ್ಕೆ ಇದೀಗ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ನಿರ್ಧಾರವನ್ನು ಹಿಂಪಡೆದುಕೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿವೆ.

ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಜಾನುವಾರುಗಳ ಬಹಿರಂಗ ಹರಾಜಿಗೆ ನಿರ್ಧಾರ; ಹಿಂದೂಪರ ಸಂಘಟನೆಗಳಿಂದ ವಿರೋಧ
ಧಾರವಾಡ ಕೃಷಿ ವಿದ್ಯಾಲಯದಿಂದ ಜಾನುವಾರುಗಳ ಮಾರಾಟ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 05, 2023 | 3:34 PM

Share

ಧಾರವಾಡ, ನ.05: ರಾಜ್ಯದಲ್ಲಿಯೇ ಮೇಲ್ದರ್ಜೆಯಲ್ಲಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯ(College Of Agriculture, Dharwad),ಕೃಷಿ ಸಂಶೋಧನೆಯ ಜೊತೆಗೆ ಕೃಷಿ ಉಪ ಕಸುಬುಗಳಲ್ಲಿಯೂ ತೊಡಗಿಸಿಕೊಂಡಿದೆ. ಅದರಲ್ಲಿ ಹೈನುಗಾರಿಕೆ ಘಟಕವೂ ಪ್ರಮುಖವಾಗಿದೆ. ಧಾರವಾಡಿ ಎಮ್ಮೆ ತಳಿಯಿಂದ ಹಿಡಿದು ವಿವಿಧ ತಳಿಯ ರಾಸು ಸೇರಿದಂತೆ ಎಲ್ಲ ಬಗೆಯ ನೂರಾರು ಜಾನುವಾರುಗಳು ಇಲ್ಲಿವೆ. ಆ ಪೈಕಿ ಈ ಹೈನುಗಾರಿಕೆ ಘಟಕದಲ್ಲಿ ಹೆಚ್ಚುವರಿಯಾಗಿರುವ 56 ಜಾನುವಾರುಗಳನ್ನು ಇದೇ ನವೆಂಬರ್ 6ರಂದು ಬಹಿರಂಗ ಹರಾಜಿನ ಮೂಲಕ ಮಾರಾಟ ಮಾಡಲು ಮುಂದಾಗಿದೆ.

ಹರಾಜು ಪ್ರಕ್ರಿಯೆಗೆ ವಿರೋಧಿಸಿದ ಬಜರಂಗದಳ

ಹೌದು, ಈ ಸಂಬಂಧ ಜಾಹೀರಾತು ಪ್ರಕಟಣೆ ಕೂಡ ನೀಡಲಾಗಿದೆ. ಆದರೆ, ಇಲ್ಲಿ ಗೋವುಗಳು ಸೇರಿದಂತೆ ಎಲ್ಲ ಜಾನುವಾರುಗಳು ಹರಾಜಿನ ಮೂಲಕ‌ ಕಸಾಯಿ ಖಾನೆಯನ್ನೇ ಸೇರುತ್ತವೆ. ಹೀಗಾಗಿ ಈ ಹರಾಜು ಯಾವುದೇ ಕಾರಣಕ್ಕೂ ನಡೆಯಬಾರದು ಎಂದು ಬಜರಂಗದಳ ಆಗ್ರಹಿಸಿದೆ. ವಿವಿಗೆ ಈ ಜಾನುವಾರುಗಳು ಹೆಚ್ಚುವರಿ ಆಗಿದ್ದು, ಪಾಲನೆ ಮಾಡುವುದಕ್ಕೆ ಆಗದೇ ಹೋದಲ್ಲಿ ಸರ್ಕಾರಿ ಗೋ ಶಾಲೆಗಳಿಗೆ ನೀಡಲಿ. ಆದರೆ, ಹೀಗೆ ಮಾರಾಟ ಮಾಡುವ ಮೂಲಕ ಕಸಾಯಿ ಖಾನೆಗೆ ಸೇರಿಸುವುದು ಬೇಡ. ಈ ಕೂಡಲೇ ಹರಾಜು ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕೃಷಿ ವಿವಿ ಕುಲಪತಿಗೆ ಬಜರಂಗದಳ ಮನವಿ ಸಲ್ಲಿಸಿದೆ.

ಇದನ್ನೂ ಓದಿ:ಉತ್ತರ ಕನ್ನಡ: ಪಶು ವೈದ್ಯರ ಕೊರತೆ; ಸೂಕ್ತ ಚಿಕಿತ್ಸೆಯಿಲ್ಲದೆ ಸಾವನ್ನಪ್ಪುತ್ತಿರುವ ಜಾನುವಾರುಗಳು

ಸದ್ಯ ನಡೆಯಲಿರುವ ಹರಾಜಿನಲ್ಲಿ ರೈತರು ಮತ್ತು ಹಾಲು ಉತ್ಪಾದಕರೇ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎನ್ನುವ ನಿಯಮವನ್ನು ಕೃಷಿ ವಿವಿ ಹಾಕಿದೆ. ರೈತರ ಕೃಷಿ ಜಮೀನಿನ ಪಹಣಿ ಪತ್ರ ಇಲ್ಲವೇ, ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯರಾಗಿದ್ದಲ್ಲಿ ಸದಸ್ಯತ್ವದ ಪ್ರಮಾಣ ಪತ್ರ ನೀಡಬೇಕು ಎಂದು ಷರತ್ತು ವಿಧಿಸಿದ್ದಾರೆ. ಆದರೆ, ರೈತರು ಎಂದು ಹೇಳಿಕೊಂಡು ಬಂದು ಹರಾಜಿನಲ್ಲಿ ಪಾಲ್ಗೊಳ್ಳುವ ಯಾರೂ ಕೂಡ ತಮ್ಮ ಮನೆಗೆ ಹಾಗೂ ಕೊಟ್ಟಿಗೆಗೆ ತೆಗೆದುಕೊಂಡು ಹೋಗುವುದಿಲ್ಲ. ಅಲ್ಲಿಂದ‌ ಇವು ನೇರವಾಗಿ ಕಸಾಯಿಖಾನೆಗೆ ಸೇರುತ್ತವೆ. ಕಸಾಯಿಖಾನೆಯವರು ರೈತರನ್ನು ಮುಂದೆ ಬಿಟ್ಟು ಖರೀದಿ ಮಾಡಿಸುತ್ತಾರೆ ಎಂದು ಬಜರಂಗದಳದ ವಾದ ಮಾಡುತ್ತಿದೆ. ಹೀಗಾಗಿ ಈ ಹರಾಜು ರದ್ದು ಮಾಡಿ ಹೆಚ್ಚುವರಿ ಜಾನುವಾರುಗಳನ್ನು ಮಾರಾಟ ಮಾಡದೇ ಸರ್ಕಾರಿ ಗೋಶಾಲೆಗಳಿಗೆ ನೀಡಬೇಕು. ಒಂದು ವೇಳೆ ಹರಾಜು ಹಾಕಿದರೆ ನಾವು ಮುತ್ತಿಗೆ ಹಾಕಿ ತಡೆಯುತ್ತೇವೆ ಎನ್ನುವ ಎಚ್ಚರಿಕೆ ನೀಡಿದ್ದಾರೆ.

ಇನ್ನು ಕೃಷಿ ವಿವಿ ವಿಸಿ ಪ್ರೊ. ಪಿ. ಎಲ್. ಪಾಟೀಲ್ ಅವರನ್ನು ಈ ಬಗ್ಗೆ ಮಾಹಿತಿ ಕೇಳಲು ಪ್ರಯತ್ನಿಸಿದರೆ, ‘ಅವರು ಫೋನ್ ಸ್ವೀಕರಿಸುತ್ತಲೇ ಇಲ್ಲ. ಹೀಗಾಗಿ ಈ ಜಾನುವಾರು ಹರಾಜು ವಿವಾದ ಈಗ ತೀವ್ರ ಸ್ಬರೂಪ ಪಡೆದುಕೊಳ್ಳುವ ಲಕ್ಷಣಗಳಿವೆ. ಒಂದು ವೇಳೆ ಹರಾಜು ಪ್ರಕ್ರಿಯೆ ನಡೆದರೆ ಗಲಾಟೆ ಆಗುವ ಲಕ್ಷಣಗಳಿದ್ದು, ಪೊಲೀಸರು ಈಗಾಗಲೇ ಈ ಬಗ್ಗೆ ಅರ್ಲಟ್ ಕೂಡ ಆಗಿದ್ದಾರೆ. ಒಟ್ಟಿನಲ್ಲಿ ನವೆಂಬರ್ 6 ರಂದು ಏನಾಗುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ