ದೀಪಾವಳಿ ಹಬ್ಬ: ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹುಬ್ಬಳ್ಳಿ, ಮಂಗಳೂರು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ವಲಯ ಗುಡ್ ನ್ಯೂಸ್ ನೀಡಿದೆ. ಹಬ್ಬದ ನಿಮಿತ್ಯ ಊರುಗಳಿಗೆ ತೆರಳುವವರ ಅನುಕೂಲಕ್ಕಾಗಿ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ರೈಲಿನ ವೇಳಾಪಟ್ಟಿ, ನಿಲ್ದಾಣಗಳ ಮಾಹಿತಿ ಹಾಗೂ ಇತರ ಮಾಹಿತಿ ಇಲ್ಲಿದೆ.
ಹುಬ್ಬಳ್ಳಿ, ಅಕ್ಟೋಬರ್ 22: ದೀಪಾವಳಿ ಹಬ್ಬ (Deepavali Festival) ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ರೈಲುಗಳಲ್ಲಿ (Train) ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ (Hubballi-Mangaluru Specail Train) ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ರೈಲು ಸಂಖ್ಯೆ 07311: ನವೆಂಬರ್ 2 ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25ಕ್ಕೆ ಮಂಗಳೂರು ಜಂಕ್ಷೆನ್ ತಲುಪಲಿದೆ.
ರೈಲು ಸಂಖ್ಯೆ 07312: ನವೆಂಬರ್ 3 ರಂದು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ನವೆಂಬರ್ 4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಈ ರೈಲು 1 ಎಸಿ ಟು ಟೈಯರ್ ಬೋಗಿಗಳು, 2 ಫಸ್ಟ್ ಎಸಿ ಕಮ್ ತ್ರಿ ಟೈಯರ್ ಬೋಗಿಗಳು, 3 ಎಸಿ ತ್ರಿ ಟೈಯರ್ ಬೋಗಿಗಳು, 5 ಸ್ವೀಪರ್ ಕ್ಲಾಸ್ ಬೋಗಿಗಳು, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳನ್ನು ಹೊಂದಿದೆ.
ಇದನ್ನೂ ಓದಿ: ಬೆಂಗಳೂರು ಎಸ್ಎಂವಿಟಿ ಕಾರವಾರ, ಯಶವಂತಪುರ ಮಂಗಳೂರು ಮಧ್ಯೆ ವಿಶೇಷ ರೈಲು: ವೇಳಾಪಟ್ಟಿ, ಇತರ ವಿವರ ಇಲ್ಲಿದೆ
ಬೆಂಗಳೂರು-ಚೆನ್ನೈ ನಡುವೆ ವಿಶೇಷ ರೈಲು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ (06209/06210) ರೈಲು ಸಂಚಾರ
ರೈಲು ಸಂಖ್ಯೆ 06209 ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಬೆಳಿಗ್ಗೆ 8:05ಕ್ಕೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2:30ಕ್ಕೆ ಚೆನ್ನ ಎನ್ನೋರ್ ನಿಲ್ದಾಣವನ್ನು ತಲುಪಲಿದೆ.
ರೈಲು ಸಂಖ್ಯೆ 06210 ಚಿನ್ನೆ ಎಗೋರ್ ನಿಲ್ದಾಣದಿಂದ ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಮಧ್ಯಾಹ್ನ 3:55ಕ್ಕೆ ಹೊರಟು, ಅದೇ ದಿನ ರಾತ್ರಿ 10:50ಕ್ಕೆ ಕೆಎಸ್‌ಆರ್ ಬೆಂಗಳೂರು ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ರೈಲು ಎರಡೂ ದಿಕ್ಕುಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟಿ, ಕಟ್ಟಾಡಿ, ಅರಕ್ಕೋಣಂ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ಣಣಗಳಲ್ಲಿ ನಿಲ್ಲುತ್ತದೆ.
ಈ ರೈಲು 1 ಎಸಿ ಟು ಟೈಯರ್, 1 ಎಸಿ ತ್ರಿ ಟೈಯರ್, 11 ಸ್ವೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.
ಟ್ವಿಟರ್ ಪೋಸ್ಟ್
Kindly note: To cater to the increased passenger demand during the #Deepavali festival, SWR will operate special trains between KSR #Bengaluru – #Chennai Egmore stations (two trips) and SSS #Hubballi – #Mangaluru Jn stations (one trip). ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ… pic.twitter.com/S5YH5shJMK
— South Western Railway (@SWRRLY) October 21, 2024
ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳೆ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:52 am, Tue, 22 October 24