ದೀಪಾವಳಿ ಹಬ್ಬ: ನೈಋತ್ಯ ರೈಲ್ವೆಯಿಂದ ಈ ಊರುಗಳಿಗೆ ವಿಶೇಷ ರೈಲು!

Deepavali Special Train: ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಅಕ್ಟೋಬರ್ 17, 18, 19 ರಂದು ಹುಬ್ಬಳ್ಳಿ–ಮಂಗಳೂರು, ಯಶವಂತಪುರ–ಮಂಗಳೂರು ಮತ್ತು ಬೆಳಗಾವಿ–ಬೆಂಗಳೂರು ಮಾರ್ಗಗಳಲ್ಲಿ ಈ ವಿಶೇಷ ರೈಲುಗಳು ಸಂಚರಿಸಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ದೀಪಾವಳಿ ಹಬ್ಬ: ನೈಋತ್ಯ ರೈಲ್ವೆಯಿಂದ ಈ ಊರುಗಳಿಗೆ ವಿಶೇಷ ರೈಲು!
ಪ್ರಾತಿನಿಧಿಕ ಚಿತ್ರ
Edited By:

Updated on: Oct 13, 2025 | 10:06 PM

ಹುಬ್ಬಳ್ಳಿ, ಅಕ್ಟೋಬರ್​​ 13: ದೀಪಾವಳಿ ಹಬ್ಬದ (deepavali festival) ಪ್ರಯುಕ್ತ ಪ್ರಯಾಣಿಕರ ಅನುಕೂಲ ಹಾಗೂ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆ ವಿಶೇಷ ರೈಲು (Special Train) ಸೇವೆಯನ್ನು ಘೋಷಿಸಿದೆ. ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ, ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಹಾಗೂ ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.

ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ (ತಲಾ 1 ಟ್ರಿಪ್)

ರೈಲು ಸಂಖ್ಯೆ (07353) ಎಸ್ಎಸ್ಎಸ್ ಹುಬ್ಬಳ್ಳಿ ಟು ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್​ಪ್ರೆಸ್ ರೈಲು ಅ. 17 ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಂದರೆ ಅ. 18ರಂದು ಬೆಳಿಗ್ಗೆ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ.

ನೈಋತ್ಯ ರೈಲ್ವೆ ಟ್ವೀಟ್​

ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಇದನ್ನೂ ಓದಿ: Deepavali Special Train: ಪ್ರಯಾಣಿಕರಿಗೆ ಸಿಹಿ ಸುದ್ದಿ; ಬೆಂಗಳೂರಿನಿಂದ ತಾಳಗುಪ್ಪ, ಬೆಳಗಾವಿಗೆ ದೀಪಾವಳಿ ವಿಶೇಷ ರೈಲು

ರೈಲು ಸಂಖ್ಯೆ (07354) ಮಂಗಳೂರು ಜಂಕ್ಷನ್ ಟು ಯಶವಂತಪುರ ವಿಶೇಷ ಎಕ್ಸ್​ಪ್ರೆಸ್ ರೈಲು ಅ.18 ರಂದು ಮಧ್ಯಾಹ್ನ 02:35 ಗಂಟೆಗೆ ಮಂಗಳೂರು ಜಂಕ್ಷನ್​​ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸಂಖ್ಯೆ 06229/06230 ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ (ತಲಾ 1 ಟ್ರಿಪ್)

ರೈಲು ಸಂಖ್ಯೆ (06229) ಯಶವಂತಪುರ ಟು ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್​ಪ್ರೆಸ್ ಅ. 19ರಂದು 12:15 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ (06230) ಮಂಗಳೂರು ಜಂಕ್ಷನ್ ಟು ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್​ಪ್ರೆಸ್ ರೈಲು ಅ. 19 ರಂದು 02:35 ಗಂಟೆಗೆ ಮಂಗಳೂರು ಜಂಕ್ಷನ್​​ನಿಂದ ಹೊರಟು, ಮರುದಿನ 12:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ಎರಡೂ ವಿಶೇಷ ರೈಲುಗಳು (07353/07354 ಮತ್ತು 06229/06230) 20 ಬೋಗಿಗಳನ್ನು ಒಳಗೊಂಡಿರುತ್ತವೆ. ಅಂದರೆ 01 ಫಸ್ಟ್ ಕಮ್ ಸೆಕೆಂಡ್ ಎಸಿ, 01 ಎಸಿ 2-ಟೈರ್, 02 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್, ಡಿ ಬೋಗಿಗಳು ಒಳಗೊಂಡಿರುತ್ತವೆ.

ರೈಲು ಸಂಖ್ಯೆ 06507/06508 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ (ತಲಾ 1 ಟ್ರಿಪ್)

ರೈಲು ಸಂಖ್ಯೆ (06507) ಬೆಳಗಾವಿ ಟು ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು ಅ. 18 ರಂದು 8 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 07:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಅ. 18 ರಂದು 09 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅ. 19 ರಂದು 08:35 ಗಂಟೆಗೆ ಬೆಳಗಾವಿ ತಲುಪಲಿದೆ.

ಇದನ್ನೂ ಓದಿ: ಸಾಲು ಸಾಲು ಹಬ್ಬಗಳ ಹಿನ್ನಲೆ ಬೆಂಗಳೂರಿನಿಂದ ಈ ಸ್ಥಳಗಳಿಗೆ ವಿಶೇಷ ರೈಲು

ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿತ್ತದೆ. ಈ ರೈಲು 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್, ಡಿ ಬೋಗಿ ಸೇರಿ ಒಟ್ಟು 19 ಬೋಗಿಗಳನ್ನು ಒಳಗೊಂಡಿರುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us