ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಭಾಷಣ; ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು

ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು  ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ ಸಿಎಂ ಗೆ ಅಗೌರವ ತೋರಿದ್ದಾರೆ ಎಂದು ಸಿ.ಟಿ.ರವಿ(CT Ravi) ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ.

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಭಾಷಣ; ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು
ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 18, 2024 | 3:29 PM

ಹುಬ್ಬಳ್ಳಿ, ಜೂ.18: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಅವಹೇಳನಕಾರಿ‌ ಭಾಷಣ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ(CT Ravi) ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ. ಹೌದು, ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು  ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಅಗೌರವ ತೋರಿದ್ದಾರೆ ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ಹೂಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತೈಲ ಬೆಲೆ ಏರಿಕೆ ವಿರುದ್ದ ಪ್ರತಿಭಟಿಸಿದ್ದ ಬಿಜೆಪಿ

ಹೌದು, ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಬೆಂಗಳೂರಿನ ಫ್ರೀಡಂ ಪಾರ್ಕ್‌​ನಲ್ಲಿ ಬಿಜೆಪಿ ನಾಯಕರು ಹೋರಾಟ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಸಿ‌.ಟಿ.ರವಿ, ‘ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು. ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದರು.

ಇದನ್ನೂ ಓದಿ:ಪೆಟ್ರೋಲ್, ಡೀಸೆಲ್​​​​ ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸರ್ಕಾರದ ವಿರುದ್ಧ ಸಿಟಿ ರವಿ ಪ್ರತಿಭಟನೆ

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿ.ಟಿ ರವಿ, ಅಶ್ವತ್ಥನಾರಾಯಣ್ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ