AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi News: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ 36 ವಿದ್ಯಾರ್ಥಿಗಳು ಅಸ್ವಸ್ಥ

ಸರ್ಕಾರಿ ಪ್ರಾಥಮಿಕ ಶಾಲೆಯ 36 ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥಯಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

Hubballi News: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ 36 ವಿದ್ಯಾರ್ಥಿಗಳು ಅಸ್ವಸ್ಥ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
| Updated By: Digi Tech Desk|

Updated on:Mar 29, 2023 | 5:14 PM

Share

ನವಲಗುಂದ: ಸರ್ಕಾರಿ ಪ್ರಾಥಮಿಕ ಶಾಲೆಯ 36 ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥಯಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 36 ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥತೆ ಮತ್ತು ವಾಂತಿಭೇದಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿಕ್ಷಕರು ತಿಳಿಸಿರುವಂತೆ ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಮಕ್ಕಳು ಹೊಟ್ಟೆ ನೋವು ಎಂದು ತಿಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ವಿದ್ಯಾರ್ಥಿಗಳು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಮೂಲಗಳ ಪ್ರಕಾರ ಮಕ್ಕಳಿಗೆ ಬಡಿಸಿದ ಅನ್ನದಲ್ಲಿ ಹುಳಗಳು ಕಂಡು ಬಂದಿದೆ. ನಂತರದಲ್ಲಿ ಮಕ್ಕಳು ಅಸ್ವಸ್ಥವಾಗಿದ್ದಾರೆ. ಘಟನೆ ಬೆಳಕಿಗೆ ಬಂದ ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳು ಶಲವಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಳೀಯ ಆರೋಗ್ಯಾಧಿಕಾರಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ, ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಸಮೀಪದ ತಾಲೂಕು ಆಸ್ಪತ್ರೆಗೆ ರವಾನಿಸುವಂತೆ ಸೂಚಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಸಿಬ್ಬಂದಿಗಳ ಮೇಲೆ ಆರೋಗ್ಯಾಧಿಕಾರಿಗಳು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಶಿ ಪಾಟೀಲ ಮಾಹಿತಿ ನೀಡಿದ್ದಾರೆ. ಇದೀಗ ಎಲ್ಲ ಮಕ್ಕಳು ಗುಣಮುಖರಾಗಿದ್ದಾರೆ. ಶಲವಡಿ ಪಿಎಚ್‌ಸಿಯ ಡಾ.ಅಶೋಕ್ ಅಗರ್ವಾಲ್ ಸ್ಥಳಕ್ಕೆ ಭೇಟಿ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಇದನ್ನೂ ಓದಿ: Shocking News: ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು ಪತ್ತೆ; ಶಾಲಾ ಮಕ್ಕಳು ಅಸ್ವಸ್ಥ

36 ಮಕ್ಕಳನ್ನು ನವಲಗುಂದದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ವಿದ್ಯಾ ಹಾಗೂ ಡಾ.ಮಹೇಶ್ ಹಾಗೂ ಸಿಬ್ಬಂದಿ ಮಕ್ಕಳಿಗೆ ಚಿಕಿತ್ಸೆ ನೀಡಿದ್ದಾರೆ. ಇದೀಗ ಇದರಲ್ಲಿ ಹೆಚ್ಚಿನವರು ಚೇತರಿಸಿಕೊಂಡಿದ್ದಾರೆ. ಕೇವಲ ಆರು ಮಕ್ಕಳಿಗೆ ಮಾತ್ರ ಐವಿ ದ್ರವವನ್ನು ನೀಡಲಾಗಿದ್ದು, ಅವರೂ ಈಗ ಚೇತರಿಸಿಕೊಂಡಿದ್ದಾರೆ ಎಂದು ಡಾ. ಶಶಿ ಪಾಟೀಲ್ ಹೇಳಿದ್ದಾರೆ.

Published On - 5:07 pm, Wed, 29 March 23

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು