ಧಾರವಾಡ: ಕಾರು ಮತ್ತು ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ!

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಜಿತ್, ರಾಕೇಶ್, ಸಂದೀಪ್ ಮತ್ತು ಶೃತಿ ಸಾವನ್ನಪ್ಪಿದ ದುರ್ದೈವಿಗಳು. ಧಾರವಾಡದಿಂದ ಹುಬ್ಬಳ್ಳಿಗೆ ಹೊರಟಿದ್ದ ಕಾರು ಅಪಘಾತಕ್ಕೀಡಾಗಿದ್ದು, ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡ: ಕಾರು ಮತ್ತು ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ!
ಕಾರು ಮತ್ತು ಕ್ಯಾಂಟರ್ ನಡುವೆ ಡಿಕ್ಕಿ
Edited By:

Updated on: Oct 09, 2026 | 12:58 PM

ಮುಖ್ಯಾಂಶಗಳು

  • ಧಾರವಾಡದ ಅಮರಗೋಳ ಬಳಿ ಕಾರು-ಕ್ಯಾಂಟರ್ ಡಿಕ್ಕಿಯಾಗಿ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
  • ಮೃತರನ್ನು ಅಜಿತ್, ರಾಕೇಶ್, ಸಂದೀಪ್ ಮತ್ತು ಶೃತಿ ಎಂದು ಗುರುತಿಸಲಾಗಿದೆ.
  • ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧಾರವಾಡ, ಅಕ್ಟೋಬರ್ 09: ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಹಾಗೂ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ಸಾಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕ್ಯಾಂಟರ್ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಅಜಿತ್ (32), ರಾಕೇಶ(22), ಸಂದೀಪ್(33), ಶೃತಿ(28) ಸಾವನ್ನಪ್ಪಿದ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ನವಲಗುಂದ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಳಕಲ್ ಹೆದ್ದಾರಿಯಲ್ಲೂ ಭೀಕರ ಅಪಘಾತ

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಹೊರವಲಯದ ದರ್ಗಾ ಸಮೀಪದ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ಕಾರೊಂದು ಡಿವೈಡರ್‌ಗೆ ಬಲವಾಗಿ ಡಿಕ್ಕ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ಆಂಧ್ರಪ್ರದೇಶದ ಗುಂತಕಲ್ ಮೂಲದ ಇಮ್ರಾನ್ ದಾದಾಕಲೇದರ್ (35) ಮೃತಪಟ್ಟ ದುರ್ದೈವಿ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ರಭಸಕ್ಕೆ ಸ್ಕಾರ್ಪಿಯೋ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಇಳಕಲ್ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಇಳಕಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Fri, 9 October 26

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us