AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ಆದಿತ್ಯ ನೇಣಿಗೆ ಶರಣಾಗಿದ್ದ ಪ್ರಕರಣ ಸಂಬಂಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷ ನಾಯಕರು ಸರ್ಕಾರ ವಿರುದ್ಧ ಮುಗಿಬಿದ್ದಿದ್ದಾರೆ. ಇದೀಗ ವಿದ್ಯಾಗಿರಿ ಠಾಣೆಯ ಇನ್ಸ್​​ಪೆಕ್ಟರ್​​ ನನ್ನು ಅಮಾನತು ಮಾಡಲಾಗಿದೆ.

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ
ಆದಿತ್ಯಾ, ರಫೀಕ್ (ಇನ್ಸ್​​ಪೆಕ್ಟರ್)
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Apr 30, 2026 | 6:40 PM

Share

ಧಾರವಾಡ, (ಏಪ್ರಿಲ್ 30): ವಿದ್ಯಾರ್ಥಿ  ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ (Dharwad Aditya Suicide Case) ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​ನನ್ಜು ಅಮಾನತು ಮಾಡಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್‌ ನನ್ನು ಅಮಾನತು ಮಾಡಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ನನ್ನು ನಿನ್ನೆ (ಏಪ್ರಿಲ್ 29) ಅಮಾನತು ಮಾಡಲಾಗಿತ್ತು. ಆದ್ರೆ, ಪ್ರಕರಣ ಗಂಭೀರ ಪಡೆದುಕೊಳ್ಳುತ್ತಿದ್ದಂತೆಯೇ ಇಂದು (ಏಪ್ರಿಲ್ 30) ಇನ್ಸ್​ಪೆಕ್ಟರ್​​ನನ್ನು ಸಹ ಸಸ್ಪೆಂಡ್​ ಮಾಡಲಾಗಿದೆ.

ಗಾಂಜಾ ಸೇವನೆ ಆರೋಪದಡಿ ವಿದ್ಯಾರ್ಥಿ ಆದಿತ್ಯನನ್ನು ವಶಕ್ಕೆ ಪಡೆಯಲಾಗಿತ್ತು. ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ಆದಿತ್ಯನಿಂದ 2,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಾಯಿಯಿಂದ ಹಣ ಕೊಡಿಸಲು ಆದಿತ್ಯ ಯತ್ನಿಸಿದ್ದು, ಆದ್ರೆ, ತಾಯಿ ನಿರಾಕರಿಸಿದ ಕಾರಣ ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ ಆದಿತ್ಯ ಮಗ್ಯಾಗೇರಿ ಮಂಗಳವಾರ (ಏ.28) ನೇಣಿಗೆ ಶರಣಾಗಿದ್ದ.

ಇದನ್ನೂ ನೋಡಿ: ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸ್​ ಸಿಬ್ಬಂದಿಗೆ ಬಿಗ್​​ ಶಾಕ್​​

ಸೋಮವಾರ ರಾತ್ರಿ ಆದಿತ್ಯ ತನ್ನ ಬಾಡಿಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಪೊಲೀಸರ ಕಿರುಕುಳ ಮತ್ತು ಹಣದ ಬೇಡಿಕೆಯ ಒತ್ತಡವೇ ಈ ಭೀಕರ ಘಟನೆಗೆ ಕಾರಣ ಎಂದು ಅವರ ಕುಟುಂಬ ಆರೋಪಿಸಿದ್ದರು.

ಇನ್ನು, ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪೊಲೀಸರ ಮೇಲೆ ದೂರು ದಾಖಲಿಸಿಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಆ ವೇಳೆ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡಲ್ಲ ಎಂದಿದ್ದರು. ಇದರ ಬೆನ್ನಲ್ಲೇ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳನ್ನು ಸಸ್ಪೆಂಡ್​​ ಮಾಡಲಾಗಿತ್ತು. ಆದರೂ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದು,ಗೃಹ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು, ಇದರ ಬೆನ್ನಲ್ಲೇ ಇದೀಗ ಇನ್ಸ್​​ಪೆಕ್ಟರ್​​ ರಫೀಕ್ ನನ್ನು ಸಹ ಅಮಾನತು ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Thu, 30 April 26

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್