ಧಾರವಾಡದಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್; ದೇವಸ್ಥಾನಗಳಲ್ಲಿ ಅನ್ಯ ಧರ್ಮದವರ ವ್ಯಾಪಾರ ನಿಷೇಧಕ್ಕೆ ಆಗ್ರಹ

ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಧರ್ಮ ದಂಗಲ್ ವಿಚಾರ ಹಿಂದೆ ಸರಿದಿತ್ತು. ಆದರೆ, ಇದೀಗ ಕಳೆದ ವರ್ಷ ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ನಡೆದಿದ್ದ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಒಡೆದ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಇದಕ್ಕೆ ಕಾರಣ, ಹಿಂದೂ ದೇವಸ್ಥಾನಗಳಲ್ಲಿ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎನ್ನುವ ಹಿಂದೂಪರ ಸಂಘಟನೆಗಳ ಆಗ್ರಹ.

ಧಾರವಾಡದಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್; ದೇವಸ್ಥಾನಗಳಲ್ಲಿ ಅನ್ಯ ಧರ್ಮದವರ ವ್ಯಾಪಾರ ನಿಷೇಧಕ್ಕೆ ಆಗ್ರಹ
ಧಾರವಾಡ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 10, 2023 | 4:49 PM

ಧಾರವಾಡ, ಡಿ.10: ಕಳೆದ ವರ್ಷ ಏಪ್ರಿಲ್ 9 ರಂದು ಧಾರವಾಡ(Dharwad)ತಾಲೂಕಿನ ಪ್ರಸಿದ್ಧ ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಘಟನೆಯೊಂದು ಜರುಗಿತ್ತು. ಯಾವುದೇ ಕಾರಣಕ್ಕೂ ಹಿಂದೂ ದೇವಸ್ಥಾನಗಳ ಬಳಿಕ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಈ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಗಲಾಟೆ ಮಾಡಿದ್ದರು. ಇದೀಗ ಅದೇ ದೇವಸ್ಥಾನದಲ್ಲಿ ಮತ್ತೆ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಅಂತಾ ಸಂಘಟನೆ ಕಾರ್ಯಕರ್ತರು ಆಗ್ರಹಿಸಿ, ಮತ್ತೊಮ್ಮೆ ಹೋರಾಟ ಆರಂಭಿಸಿದ್ದಾರೆ.

ಇನ್ನು ಕಲ್ಲಂಗಡಿ ಹಣ್ಣುಗಳನ್ನು ಒಡೆದ ಗಲಾಟೆಗೆ ಸಂಬಂಧಪಟ್ಟಂತೆ, ಇದು ರಾಷ್ಟ್ರಾದ್ಯಂತ ಸಾಕಷ್ಟು ಸುದ್ದಿ ಮಾಡಿತ್ತು. ಅದಾದ ಬಳಿಕ ಶ್ರೀರಾಮ ಸೇನೆ ಕಾರ್ಯಕರ್ತರ ಬಂಧನವೂ ಆಗಿತ್ತು, ನಂತರ ಜಾಮೀನಿನ ಮೇಲೆ ಅವರು ಬಿಡುಗಡೆ ಕೂಡ ಆಗಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನೇತ್ರತ್ವದ ಸರಕಾರ ಅಸ್ತಿತ್ವಕ್ಕೆ ಬಂದಿತು. ಯಾವಾಗ ಹೊಸ ಸರಕಾರ ಅಸ್ತಿತ್ವಕ್ಕೆ ಬಂತೋ ಆಗ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೊಂಚ ಸೈಲೆಂಟ್ ಆಗಿದ್ದರು. ಆದರೆ, ಇದೀಗ ಮತ್ತೆ ಬಜರಂಗದಳ ಕಾರ್ಯಕರ್ತರು ಹೋರಾಟವನ್ನು ಶುರು ಮಾಡಿದ್ದಾರೆ.

ಇದನ್ನೂ ಓದಿ:ಮಂಗಳೂರಿನಲ್ಲಿ ಮುಂದುವರಿದ ಧರ್ಮ ದಂಗಲ್: ಕುಡುಪು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

ದೇವಾಲಯಗಳ ಬಳಿ ಹಿಂದೂಗಳನ್ನು ಹೊರತುಪಡಿಸಿ ಬೇರೆಯವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎನ್ನುವ ಹೋರಾಟ ಮತ್ತೆ ಶುರು ಮಾಡಿದ್ದು, ರಾಷ್ಟ್ರಾದ್ಯಂತ ಸುದ್ದಿಗೆ ಕಾರಣವಾಗಿದ್ದ ನುಗ್ಗಿಕೇರಿ ಆಂಜನೇಯ ದೇವಸ್ಥಾನದಿಂದಲೇ ಇದೀಗ ಹೋರಾಟ ಆರಂಭಿಸಿದ್ದಾರೆ. ಯಾವುದೇ ಕಾರಣಕ್ಕೂ ಹಿಂದೂಯೇತರರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಆಡಳಿತ ಮಂಡಳಿಯವರು ರಿಸ್ಕ್ ತೆಗೆದುಕೊಳ್ಳಲು ಕೂಡ ತಯಾರಿಲ್ಲ, ಕಳೆದ ವರ್ಷ ಕಲ್ಲಂಗಡಿ ಒಡೆದ ಪ್ರಕರಣ ನಡೆದ ಬಳಿಕ ಎಲ್ಲ ಅಂಗಡಿ ತೆರವುಗೊಳಿಸಿ, ಮತ್ಯಾರಿಗೂ ಅವಕಾಶವನ್ನೇ ಕಲ್ಪಿಸಿರಲಿಲ್ಲ. ಇದೀಗ ಅದೇ ನೀತಿಯನ್ನು ಮುಂದುವರೆಸಲು ಪ್ಲ್ಯಾನ್ ಮಾಡಲಾಗಿದೆಯಂತೆ. ಒಟ್ಟಿನಲ್ಲಿ ಹಲವಾರು ತಿಂಗಳುಗಳ ಬಳಿಕ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಈ ಬಾರಿ ಇದು ಎಲ್ಲಿಗೆ ಹೋಗಿ ಮುಟ್ಟುತ್ತೆ ಎನ್ನುವುದನ್ನ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್