AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಪೊಲೀಸ್ ಅಧಿಕಾರಿಗೆ ಜಾಕ್‌ಪಾಟ್

ಸಿಎಂ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದ ಧಾರವಾಡ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ, ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಿಎಂ ಮತ್ತು ಗೃಹ ಸಚಿವರ ಮನವೊಲಿಕೆಯ ನಂತರ ಅವರು ತಮ್ಮ ನಿರ್ಧಾರವನ್ನು ಬದಲಾಯಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ನಾರಾಯಣ ಬರಮನಿ ಅವರು ಜಾಕ್‌ಪಾಟ್ ಹೊಡೆದಿದ್ದಾರೆ.

ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಪೊಲೀಸ್ ಅಧಿಕಾರಿಗೆ ಜಾಕ್‌ಪಾಟ್
Dharwad Asp Narayana Bharamani
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ರಮೇಶ್ ಬಿ. ಜವಳಗೇರಾ|

Updated on:Jul 17, 2025 | 3:27 PM

Share

ಧಾರವಾಡ, (ಜುಲೈ 17): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಅವಮಾನಕ್ಕೊಳಗಾದ ಧಾರವಾಡ ಎಎಸ್ಪಿ ನಾರಾಯಣ ಬರಮನಿ (Narayana bharamani ) ಲಾಟರಿ ಹೊಡೆದಿದ್ದಾರೆ. ಹೌದು… ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿದೆ.  ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.

ಬೆಳಗಾವಿಯಲ್ಲಿ (Belagavi) ನಡೆದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ನಾರಾಯಣ ಬರಮನಿ ಅವರನ್ನು ವೇದಿಕೆಗೆ ಕರೆಸಿದ್ದ ಸಿಎಂ ಅಡ್ಡಿಪಡಿಸಲು ಪ್ರತಿಭಟನಾಕಾರರಿಗೆ ಯಾಕೆ ಅವಕಾಶ ನೀಡಿದ್ದೀರಿ ಎಂದು ಪ್ರಶ್ನಿಸಿ ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದರು. ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾದ ನಂತರ ಬರಮನಿ ಅವರು ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ರಾಜ್ಯ ಸರ್ಕಾರ ಭಾರೀ ಟೀಕೆ ಗುರಿಯಾಗಿತ್ತು. ಕೊನೆಗೆ ನಾರಾಯಣ ಬರಮನಿ ಅವರನ್ನು ಹಿರಿಯ ಅಧಿಕಾರಿಗಳು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ನಾರಾಯಣ ಬರಮನಿ ಅವರು ಕೆಲಸಕ್ಕೆ ಹಾಜರಾಗಿದ್ದರು. ಇದರ ಬೆನ್ನಲ್ಲೇ ಇದೀಗ ನಾರಾಯಣ ಬರಮನಿ ಅವರಿಗೆ ಮುಂಬಡ್ತಿ ನೀಡಿರುವು ಅಚ್ಚರಿಕೆ ಕಾರಣವಾಗಿದೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್

ಅಂದು ಬೆಳಗಾವಿಯಲ್ಲಿ ಆಗಿದ್ದೇನು?

ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆ ವೇಳೆ ಸಿಎಂ ಭಾಷಣ ಮಾಡುತ್ತಿರುವಾಗಲೇ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಸಿದ್ದರಾಮಯ್ಯ, “ಏಯ್‌.. ಯಾರಿಲ್ಲಿ ಎಸ್‌ಪಿ?” ಬಾರಯ್ಯ ಇಲ್ಲಿ ಎಂದು ವೇದಿ ಮೇಲೆ ಕರೆದು ನಾರಾಯಣ ಭರಮನಿ ಅವರ ಮೇಲೆ ಕೈ ಎತ್ತಿದ್ದರು. ಸಿದ್ದರಾಮಯ್ಯ ಅವರ ಈ ವರ್ತನೆಗೆ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯನವರ ವರ್ತನೆಗೆ ಸಾಕಷ್ಟು ಟೀಕೆ ಟಿಪ್ಪಣಿಗಳು ವ್ಯಕ್ತವಾಗಿದ್ದವು. ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯನ್ನು ಅವಮಾನಿಸುವುದು, ಅವಹೇಳನ ಮಾಡುವುದು ಸರಿಯಲ್ಲ ಟೀಕಿಸಿದ್ದರು.

ಇದನ್ನೂ ಓದಿ
Image
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
Image
ಎಎಸ್​ಪಿ ಭರಮನಿ ಸ್ವಯಂ ನಿವೃತ್ತಿ ಪತ್ರದ ಭಾವುಕ ಸಾಲುಗಳು ಇಲ್ಲಿವೆ
Image
ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ: ಅಶೋಕ್
Image
ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್

ಅವಮಾನದಿಂದ ಬರಮನಿ ಅವರು ಸ್ವಯಂ ನಿವೃತ್ತಿ ಬಯಸಿ ಪತ್ರ ಬರೆದಿದ್ದರು.  ಇದರಿಂದ ಮುಜುರಕ್ಕೊಳಗಾಗಿದ್ದ ರಾಜ್ಯ ಸರ್ಕಾರ,  ಬರಮನಿ ಅವರಿಗೆ ಮುಂಬಡ್ತಿ ಹುದ್ದೆ ಆಫರ್ ನೀಡಿ ಮನವೊಲಿಸಿತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Thu, 17 July 25