AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್

ಬೆಳಗಾವಿಯಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಸಾರ್ವಜನಿಕವಾಗಿ ಸಿಎಂ ನಡೆದುಕೊಂಡ ರೀತಿ, ವರ್ತನೆಯನ್ನು ವಿಪಕ್ಷಗಳು ಸೇರಿದಂತೆ ಸಾರ್ವಜನಿಕರು ಖಂಡಿಸಿದ್ದರು. ಆದ್ರೆ, ಸಾರ್ವಜನಿಕವಾಗಿಯೇ ಅವಮಾನಕ್ಕೀಡಾದ ಹೆಚ್ಚುವರಿ ಎಸ್​​ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ.

ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್
Dharwad Asp Narayana Bharamani
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Jul 02, 2025 | 4:21 PM

Share

ಧಾರವಾಡ, (ಜುಲೈ 02): ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ (Siddaramaiah) ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್​​ಪಿ ನಾರಾಯಣ ಭರಮನಿ (Dharwad ASP Narayana bharamani) ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಎರಡು ಪುಟಗಳ ಪತ್ರ ಬರೆದಿದಿದ್ದಾರೆ. ಆದರೆ, ಇದರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆ ಇರುವುದರಿಂದ ಹಿರಿಯ ಅಧಿಕಾರಿಗಳು ನಾರಾಯಣ ಭರಮನಿ ಅವರ ಮನವೊಲಿಕೆ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹೌದು…ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದು, ಈ ಸಂಬಂಧ ಈಗಾಗಲೇ ರಾಜೀನಾಮೆ ಪತ್ರ ಸಹ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪತ್ರದಲ್ಲಿ ತಮಗಾದ ಅವಮಾನದ ಬಗ್ಗೆ ಹೇಳಿಕೊಂಡಿದ್ದಾರೆ. ಆದ್ರೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ನಾರಾಯಣ ಭರಮನಿ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆ ಹಿನ್ನೆಲೆ ಮನವೊಲಿಕೆ ಯತ್ನ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದು ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಸರ್ಕಾರ

ಇನ್ನು ಎಎಸ್​​ಪಿ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿರುವ ಬ್ಗಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸಿಎಂ ಬಹಿರಂಗವಾಗಿ ಅಧಿಕಾರಿ ಜತೆ ಈ ರೀತಿ ನಡೆದುಕೊಂಡಿದ್ದಾರೆ. ಇನ್ನೂ ಆಂತರಿಕವಾಗಿ ಅವರು ಯಾವ ರೀತಿ ನಡೆದುಕೊಳ್ಳಬಹುದು? ಎಂದು ಕಿಡಿಕಾರಿದರು.

ಅಂದು ಬೆಳಗಾವಿಯಲ್ಲಿ ಆಗಿದ್ದೇನು?

ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆ ವೇಳೆ ಸಿಎಂ ಭಾಷಣ ಮಾಡುತ್ತಿರುವಾಗಲೇ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಸಿದ್ದರಾಮಯ್ಯ, “ಏಯ್‌.. ಯಾರಿಲ್ಲಿ ಎಸ್‌ಪಿ?” ಬಾರಯ್ಯ ಇಲ್ಲಿ ಎಂದು ವೇದಿ ಮೇಲೆ ಕರೆದು ನಾರಾಯಣ ಭರಮನಿ ಅವರ ಮೇಲೆ ಕೈ ಎತ್ತಿದ್ದರು. ಸಿದ್ದರಾಮಯ್ಯ ಅವರ ಈ ವರ್ತನೆಗೆ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯನವರ ವರ್ತನೆಗೆ ಸಾಕಷ್ಟು ಟೀಕೆ ಟಿಪ್ಪಣಿಗಳು ವ್ಯಕ್ತವಾಗಿದ್ದವು. ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯನ್ನು ಅವಮಾನಿಸುವುದು, ಅವಹೇಳನ ಮಾಡುವುದು ಸರಿಯಲ್ಲ ಟೀಕಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Wed, 2 July 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ