Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಒಳ್ಳೆ ಕೆಲಸಕ್ಕೆ ಪ್ರಶಸ್ತಿ, ತಪ್ಪು ಮಾಡಿದ್ರೆ ಅಮಾನತು; ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಂದಾಯ ಸಚಿವ ಕೃಷ್ಣಬೈರೆಗೌಡ

ಒಳ್ಳೆ ಮಾತಿಗೆ ಬಗ್ಗದೇ ತಪ್ಪು ಮಾಡುವವರೂ ಇದ್ದಾರೆ. ಅವರಿಗೆ ಅವರದೇ ಮಾತಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ವಂಚನೆ ಮಾಡಿದ ಅಧಿಕಾರಿಗಳನ್ನು ಅಮಾನತ್ತು ಮಾಡುತ್ತೇವೆ. ಅಷ್ಟೇ ಅಲ್ಲ, ಅದರ ಜೊತೆಗೆ ಕ್ರಿಮಿನಲ್ ಕೇಸ್ ಸಹ ಹಾಕುತ್ತೇವೆ. ಕೆಲವರ ಉದ್ದೇಶವೇ ಭ್ರಷ್ಟಾಚಾರ ಆಗಿರುತ್ತದೆ. ಅದು ಕ್ರಿಮಿನಲ್ ಪ್ರಕರಣ ಸಹ ಆಗುತ್ತದೆ ಎಂದು ಸಚಿವ ಕೃಷ್ಣಬೈರೆಗೌಡ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಧಾರವಾಡ: ಒಳ್ಳೆ ಕೆಲಸಕ್ಕೆ ಪ್ರಶಸ್ತಿ, ತಪ್ಪು ಮಾಡಿದ್ರೆ ಅಮಾನತು; ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಂದಾಯ ಸಚಿವ ಕೃಷ್ಣಬೈರೆಗೌಡ
ಕೃಷ್ಣಬೈರೆಗೌಡ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 14, 2023 | 8:11 PM

ಧಾರವಾಡ, ಸೆ.14: ಒಳ್ಳೆ ಕೆಲಸಕ್ಕೆ ಪ್ರಶಸ್ತಿ, ತಪ್ಪು ಮಾಡಿದ್ರೆ ಅಮಾನತು ಜೊತೆಗೆ ಕ್ರಿಮಿನಲ್ ಕೇಸ್ ಸಹ ಹಾಕುತ್ತೇವೆ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಬೈರೆಗೌಡ (Krishna Byre Gowda) ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಧಾರವಾಡ (Dharwad) ದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಬಳಿಕ ಮಾತನಾಡಿದ ಅವರು ‘ಸರ್ಕಾರದ ಆಡಳಿತ ಸುಧಾರಣೆ ಕಂದಾಯ ಇಲಾಖೆ ಮೂಲಕವೇ ಆಗಬೇಕು. ಹೀಗಾಗಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಒಳ್ಳೆ ಕೆಲಸ ಮಾಡಿದವರಿಗೆ ಸರ್ವೋತ್ತಮ ಅಧಿಕಾರಿ ಪ್ರಶಸ್ತಿ ಕೊಡುತ್ತೇವೆ ಎಂದರು.

ವಂಚನೆ ಮಾಡಿದ ಅಧಿಕಾರಿಗಳನ್ನ ಅಮಾನತ್ತು

ಹೌದು, ಒಳ್ಳೆ ಮಾತಿಗೆ ಬಗ್ಗದೇ ತಪ್ಪು ಮಾಡುವವರೂ ಇದ್ದಾರೆ. ಅವರಿಗೆ ಅವರದೇ ಮಾತಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ವಂಚನೆ ಮಾಡಿದ ಅಧಿಕಾರಿಗಳನ್ನು ಅಮಾನತ್ತು ಮಾಡುತ್ತೇವೆ. ಅಷ್ಟೇ ಅಲ್ಲ, ಅದರ ಜೊತೆಗೆ ಕ್ರಿಮಿನಲ್ ಕೇಸ್ ಸಹ ಹಾಕುತ್ತೇವೆ. ಕೆಲವರ ಉದ್ದೇಶವೇ ಭ್ರಷ್ಟಾಚಾರ ಆಗಿರುತ್ತದೆ. ಅದು ಕ್ರಿಮಿನಲ್ ಪ್ರಕರಣ ಸಹ ಆಗುತ್ತದೆ. ಈಗಾಗಲೇ ಇಬ್ಬರು ಎಸಿಗಳ ಮೇಲೆ ಕ್ರಿಮಿನಲ್ ಕೇಸ್ ಆಗಿದೆ. ಇಲ್ಲಿವರೆಗೆ ಬಡಪಾಯಿ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಕ್ರಮ ಆಗುತ್ತಿತ್ತು. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಅಂತಾ ಹೇಳುತ್ತಿದ್ದರು. ಈಗ ತಪ್ಪು ಮಾಡಿದ ಎಸಿಗಳ ಮೇಲೆಯೇ ಕ್ರಮ ತೆಗೆದುಕೊಂಡಿದ್ದೇವೆ. ಹಿಂದೆ ಹೇಗೆ ಕೆಲಸ ಮಾಡಿದ್ದೀರಿ ಎಂದು ನಾವು ಕೇಳುವುದಿಲ್ಲ. ಆದರೆ, ಈಗ ಜನ ಪರವಾಗಿ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ರಾಜಕೀಯ ಮೇಲಾಟದಲ್ಲಿ ನೆನೆಗುದಿಗೆ ಬಿದ್ದ ಅಂತರಾಷ್ಟ್ರೀಯ ಹೂವು ಮಾರುಕಟ್ಟೆ; ಇಲ್ಲಿದೆ ಮಾಹಿತಿ

ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯ ಆರ್‌ಟಿಒ ಕಚೇರಿ ಬಳಿ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮುತ್ತಪ್ಪ ಸವದಿ(28), ಬಸವರಾಜ ಗಲಗಲಿ(18) ಮೃತ ದುರ್ದೈವಿಗಳು. ಇಬ್ಬರೂ ಮುಧೋಳ ತಾಲೂಕಿನ ಪಿ.ಎಂ.ಬುದ್ನಿ ಗ್ರಾಮದ ನಿವಾಸಿಗಳಾಗಿದ್ದು, ಇವರು ಜಮಖಂಡಿ ‌ನಗರದಿಂದ ಮುಧೋಳ ಕಡೆ ಹೊರಟಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಜಮಖಂಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್