ಕರ್ನಾಟಕಕ್ಕೆ 2ನೆಯ ವಂದೇ ಭಾರತ್‌ ರೈಲು! ಜುಲೈಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ಸಂಚಾರ ಆರಂಭ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಧಾರವಾಡ ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ ಆರಂಭಿಸಿದರೆ ರಾಜ್ಯದ ಎರಡನೆಯ ವಂದೇ ಭಾರತ್‌ ರೈಲು ಇದಾಗಲಿದೆ. ದೇಶದ ಅತಿ ವೇಗದ ರೈಲು ಇದಾಗಿದ್ದು ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ.

ಕರ್ನಾಟಕಕ್ಕೆ 2ನೆಯ ವಂದೇ ಭಾರತ್‌ ರೈಲು! ಜುಲೈಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ಸಂಚಾರ ಆರಂಭ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಜುಲೈ ತಿಂಗಳೊಳಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us
ಸಾಧು ಶ್ರೀನಾಥ್​
|

Updated on:Jun 01, 2023 | 2:57 PM

ವಂದೇ ಭಾರತ್‌  ಸ್ಪೀಡ್‌ ರೈಲಿನಲ್ಲಿ ಓಡಾಡಬೇಕು ಎಂಬ ಉತ್ತರ ಕರ್ನಾಟಕ ಜನರ ಕನಸು ಶೀಘ್ರದಲ್ಲಿಯೇ ನನಸಾಗಲಿದ್ದು, ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸಂಚಾರ (Dharwad-Bangalore Vande Bharat train) ಆರಂಭವಾಗುವ ನಿಟ್ಟಿನಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬರುವ ಎರಡು ತಿಂಗಳೊಳಗೆ ಧಾರವಾಡ ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೇ ಸಚಿವ (Minister of Railways) ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಮ್ಮ ಸಹೋದ್ಯೋಗಿ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ (Pralhad Joshi) ಭರವಸೆ ನೀಡಿದ್ದಾರೆ.

ಈ ಕುರಿತಂತೆ ತಮ್ಮ ಫೇಸ್​​ ಬುಕ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರೈಲು ಸೇವೆಯ ಆರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್‌ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ರೈಲ್ವೇ ಸಚಿವರು ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ. ಧಾರವಾಡ ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ ಆರಂಭಿಸಿದರೆ ರಾಜ್ಯದ ಎರಡನೆಯ ವಂದೇ ಭಾರತ್‌ ರೈಲು ಇದಾಗಲಿದೆ. ಕರ್ನಾಟಕಕ್ಕೆ ದಕ್ಕಿದ ಮೊದಲ ವಂದೇ ಭಾರತ್‌ ರೈಲು ಬೆಂಗಳೂರು ಮತ್ತು ಚೆನ್ನೈ ಮಹಾನಗರಗಳ (Vande Bharat Express from Bengaluru to Chennai) ನಡುವಣ ಸಂಚಾರವಾಗಿದೆ.

ದೇಶದ ಅತಿ ವೇಗದ ರೈಲು ಇದಾಗಿದ್ದು, ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಅತ್ಯುತ್ತಮ ದರ್ಜೆಯ ಆಸನಗಳೊಂದಿಗೆ ಐಷಾರಾಮಿ ವ್ಯವಸ್ಥೆಗಳನ್ನು ಈ ರೈಲಿನಲ್ಲಿ ವಿಮಾನದ ರೀತಿ ನಿರ್ಮಿಸಲಾಗಿದೆ. ಇದು ವಿಶ್ವದರ್ಜೆಯ ಸೌಕರ್ಯಗಳನ್ನು ಹೊಂದಿದ್ದು, ಹವಾನಿಯಂತ್ರಿತ, ಎಕಾನಮಿ ಮತ್ತು ಪ್ರಿಮಿಯಂ ಕ್ಲಾಸ್‌ಗಳನ್ನು ಈ ರೈಲು ಹೊಂದಿದೆ.

ವಂದೇ ಭಾರತ್‌ ರೈಲಿನಲ್ಲಿ ಆನ್‌ಬೋರ್ಡ್‌ ಉಪಾಹಾರದ ವ್ಯವಸ್ಥೆ ಇದೆ. ರೀಡಿಂಗ್‌ ಲೈಟ್‌ ವ್ಯವಸ್ಥೆ, ಸ್ವಯಂಚಾಲಿತ ಬಾಗಿಲು, ವೈ ಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್‌ ಪಾಯಿಂಟ್‌, ಸಿಸಿಕ್ಯಾಮೆರಾ, ಬಯೋ ಶೌಚಾಲಯ ವ್ಯವಸ್ಥೆಯೂ ಇದೆ ಎಂದು ಸಚಿವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಿವರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರದ ಜನರ ಬಹು ನಿರೀಕ್ಷಿತ ಈ ಉತ್ಕೃಷ್ಟ ರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದು ಎಂದು ಪ್ರಲ್ಹಾದ ಜೋಶಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 11:57 am, Thu, 1 June 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್