AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ: ದಾವಣಗೆರೆಯ ಮೂವರು ಸಾವು!

ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಪಲ್ಟಿಯಾಗಿ ದಾವಣಗೆರೆ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದ್ದು, ಗಾಯಗೊಂಡ ಮತ್ತೂ ಮೂವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗರಗ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ: ದಾವಣಗೆರೆಯ ಮೂವರು ಸಾವು!
ಅಪಘಾತಕ್ಕೊಳಗಾದ ಕಾರು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Sep 01, 2026 | 10:06 AM

Share

ಮುಖ್ಯಾಂಶಗಳು

  • ಧಾರವಾಡದ ವೆಂಕಟಾಪುರ ಬಳಿ ಕಾರು ಪಲ್ಟಿಯಾಗಿ ದಾವಣಗೆರೆಯ ಮೂವರು ದುರ್ಮರಣ
  • ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿಯಿಂದ ಧಾರವಾಡಕ್ಕೆ ಬರುವಾಗ ನಡೆದ ದುರಂತ
  • ಗಂಭೀರವಾಗಿ ಗಾಯಗೊಂಡ ಮೂವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಸಲ್ಲಿಕೆ

ಧಾರವಾಡ, ಸೆಪ್ಟೆಂಬರ್ 01: ಜಿಲ್ಲೆಯ (Dharwad) ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಮತ್ತೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಊಟ ಮುಗಿಸಿಕೊಂಡು ಮರಳುತ್ತಿದ್ದಾಗ ಎದುರಿಗೆ ದಿಢೀರನೆ ಲಾರಿ ಬಂದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕೇಟರಿಂಗ್ ಕೆಲಸಕ್ಕಾಗಿ ಬಂದಿದ್ರು

ಮೃತಪಟ್ಟ ದಾವಣಗೆರೆ ಮೂಲದ ಯುವಕರಾದ ವಿನಾಯಕ ಕೆ. ಯು. (25), ಮಂಜುನಾಥ (29) ಹಾಗೂ ಬಸವರಾಜ (34) ಕೇಟರಿಂಗ್ ಕೆಲಸಕ್ಕಾಗಿ ಧಾರವಾಡಕ್ಕೆ ಆಗಮಿಸಿದ್ದರು. ನಿನ್ನೆ ಮಧ್ಯರಾತ್ರಿ 2:30ರ ಸುಮಾರಿಗೆ ಕೆಲಸ ಮುಗಿಸಿ, ಧಾರವಾಡ ಹೊರವಲಯದ ಡಾಬಾಕ್ಕೆ ಊಟಕ್ಕಾಗಿ ತೆರಳಿದ್ದರು. ಊಟ ಮುಗಿಸಿಕೊಂಡು ಕಾರಿನಲ್ಲಿ ನಗರಕ್ಕೆ ಮರಳುವಾಗ ಎದುರಿನಿಂದ ಬಂದ ಲಾರಿಯನ್ನು ತಪ್ಪಿಸಲು ಚಾಲಕ ಬಸವನಗೌಡ ಒಮ್ಮೆಲೆ ಬ್ರೇಕ್ ಹಾಕಿದ್ದಾರೆ.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ (ಡಿವೈಡರ್) ಪ್ರಚಂಡ ವೇಗದಲ್ಲಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಚಾಲಕ ಸೇರಿ ಮತ್ತೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಚಾಲಕ ಬಸವನಗೌಡ ಕಣ್ಣೀರು

“ಆ್ಯಂಬುಲೆನ್ಸ್‌ನಲ್ಲಿ ನಮ್ಮನ್ನು ಆಸ್ಪತ್ರೆಗೆ ಕರೆ ತರಲಾಯಿತು. ಇಲ್ಲಿಗೆ ಬಂದ ಮೇಲೆಯೇ ಸಹೋದ್ಯೋಗಿಗಳು ಮೃತಪಟ್ಟ ವಿಷಯ ಗೊತ್ತಾಯಿತು” ಎಂದು ಕಾರು ಚಾಲಕ ಬಸವನಗೌಡ ಕಣ್ಣೀರು ಹಾಕಿದ್ದಾರೆ. ಗಾಯಾಳುಗಳಿಗೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಗರಗ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 am, Tue, 1 September 26

Follow Us
ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ
ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ
ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ
ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ
ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ
ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ
ಕಾರು ತೆಗೆಸಿದ್ದಕ್ಕೆ ಡಿಸಿಪಿ ಯೋಗೇಶ್ ವಿರುದ್ಧ ಸಿದ್ಧರಾಮಯ್ಯ ಗರಂ
ಕಾರು ತೆಗೆಸಿದ್ದಕ್ಕೆ ಡಿಸಿಪಿ ಯೋಗೇಶ್ ವಿರುದ್ಧ ಸಿದ್ಧರಾಮಯ್ಯ ಗರಂ
ಕೆಪಿಎಸ್​ಸಿಯನ್ನೆ ಮುಚ್ಚಿದರೆ ಹೇಗೆಂದು ಚಿಂತನೆ ಮಾಡುತ್ತಿದ್ದೇವೆ: ಸಿಎಂ
ಕೆಪಿಎಸ್​ಸಿಯನ್ನೆ ಮುಚ್ಚಿದರೆ ಹೇಗೆಂದು ಚಿಂತನೆ ಮಾಡುತ್ತಿದ್ದೇವೆ: ಸಿಎಂ
ಇನ್ಸ್‌ಪೆಕ್ಟರ್ ಧನಂಜಯ್​ಗೆ ಮತ್ತೊಂದು ಪ್ರಕರಣದಲ್ಲಿ ಸಂಕಷ್ಟ
ಇನ್ಸ್‌ಪೆಕ್ಟರ್ ಧನಂಜಯ್​ಗೆ ಮತ್ತೊಂದು ಪ್ರಕರಣದಲ್ಲಿ ಸಂಕಷ್ಟ
ಕೆಪಿಎಸ್​ಸಿ ಅಕ್ರಮ ನೇಮಕಾತಿ ಕೇಸ್ ತನಿಖೆ ಎಸ್​ಐಟಿ ಹೆಗಲಿಗೆ!
ಕೆಪಿಎಸ್​ಸಿ ಅಕ್ರಮ ನೇಮಕಾತಿ ಕೇಸ್ ತನಿಖೆ ಎಸ್​ಐಟಿ ಹೆಗಲಿಗೆ!
ಮಹಿಳಾ PSI ಮೇಲೆ ಹಲ್ಲೆ ಪ್ರಕರಣ: ಕ್ಷಮೆ ಕೇಳಿದ ಶಾಸಕ ಸುರೇಶ್​ ಗೌಡ ಪುತ್ರಿ
ಮಹಿಳಾ PSI ಮೇಲೆ ಹಲ್ಲೆ ಪ್ರಕರಣ: ಕ್ಷಮೆ ಕೇಳಿದ ಶಾಸಕ ಸುರೇಶ್​ ಗೌಡ ಪುತ್ರಿ