ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು
ನಿಂತಿದ್ದ ಲಾರಿಗೆ ಕಾರು ಡಿಕ್ಕಿ
Edited By:

Updated on: May 30, 2025 | 10:10 AM

ಧಾರವಾಡ, ಮೇ 30: ನಿಂತಿದ್ದ ಲಾರಿಗೆ ಕಾರು ಡಿಕ್ಕಿ (accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಗದಗ-ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ 63ರಲ್ಲಿ ನಡೆದಿದೆ. ಸದ್ಯ ಅಪಘಾತ ನಡೆದ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಕಾರಿನಲ್ಲಿದ್ದವರು ಹುಬ್ಬಳ್ಳಿಗೆ ಹೊರಟಿದ್ದ ವೇಳೆ ದುರಂತ ಸಂಭವಿಸಿದೆ.

ನೀರಿನ ಗುಂಡಿಗೆ ಬಿದ್ದ ಕಾರು: ಓರ್ವ ಸಾವು, ಮೂವರು ಬಚಾವ್

ಅತಿವೇಗವಾಗಿ ಬಂದು ನೀರಿನ ಗುಂಡಿಗೆ ಕಾರು ಬಿದ್ದು ಓರ್ವ ಸಾವನ್ನಪ್ಪಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಬಳಿ ನಡೆದಿದೆ.

ಇದನ್ನೂ ಓದಿ: ಜಿಮ್ ಡಂಬಲ್​​ನಿಂದ ಹೆಂಡತಿಯ ತಲೆ ಜಜ್ಜಿದ ಗಂಡ: ಪಾಪ ಪ್ರಜ್ಞೆಯಿಂದ ತಾನೂ ಆತ್ಮಹತ್ಯೆಗೆ ಶರಣು

ಇದನ್ನೂ ಓದಿ
ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು
ಮಂಗಳೂರು: ಬಾವಿಯಲ್ಲಿ ಪ್ರಿಯಕರನ ಜೊತೆ ವಿವಾಹಿತೆಯ ಶವಪತ್ತೆ
ಜಿಮ್ ಡಂಬಲ್​​ನಿಂದ ಹೆಂಡತಿಯ ತಲೆ ಜಜ್ಜಿದ ಗಂಡ: ತಾನೂ ಆತ್ಮಹತ್ಯೆಗೆ ಶರಣು
ಪ್ರೀತಿಸಿ ಮದ್ವೆಯಾಗಿದ್ದವಳನ್ನ 10 ಬಾರಿ ಇರಿದು ಕೊಂದ ಪತಿ!

ಶ್ರೀನಿವಾಸಪುರ ಮೂಲದ ಎಸ್.ಆದರ್ಶ ಮೃತ ದುರ್ದೈವಿ. ಟಿ.ಎನ್ ಶರತ್, ಭರತ್ ಮತ್ತು ರಿಯಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವಿಗೀಡಾದ ಗಂಡು ಕರಡಿ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಜಾಪುರ ಗೇಟ್ ಬಳಿ ಕರಡಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕೆಲಹೊತ್ತು ನರಳಾಡಿ ಗಂಡು ಕರಡಿ ಸಾವಿಗೀಡಾಗಿರುವಂತಹ ಘಟನೆ ನಡೆದಿದೆ. ರಸ್ತೆ ದಾಟುವ ವೇಳೆ ಕರಡಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ವಾಹನ ಸಮೇತ ಚಾಲಕ ಪರಾರಿ ಆಗಿದ್ದಾನೆ.

ಇದನ್ನೂ ಓದಿ: ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರ ರಕ್ಷಣೆಗೆ ಕಾರ್ಯಾಚರಣೆ

ಇನ್ನು ಡಿಕ್ಕಿಯಿಂದ ಗಾಯಗೊಂಡ ಕರಡಿ ರಸ್ತೆ ದಾಟಲು ಯತ್ನಿಸಿದೆ. ಆದರೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ರಸ್ತೆ ಬಳಿಯೇ ಸಾವಿಗೀಡಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:50 am, Fri, 30 May 25