AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳಿತಾಯ ಖಾತೆಯ ಹಣ ನೀಡದ ಸೊಸೈಟಿಗೆ ದಂಡ: ಹುಬ್ಬಳ್ಳಿ ಮಹಿಳೆಗೆ ಸಿಕ್ತು ನ್ಯಾಯ!

Dharwad Consumer Commission: ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಯು ಓರ್ವ ಗ್ರಾಹಕರಿಗೆ ಅವರ 2.4 ಲಕ್ಷ ರೂ ಉಳಿತಾಯ ಹಣವನ್ನು ನೀಡಲು ನಿರಾಕರಿಸಿದ ಹಿನ್ನೆಲೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಸೊಸೈಟಿಗೆ 60 ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ಮಾಡಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಪೀಠ ಈ ಮಹತ್ವದ ಆದೇಶ ನೀಡಿದೆ.

ಉಳಿತಾಯ ಖಾತೆಯ ಹಣ ನೀಡದ ಸೊಸೈಟಿಗೆ ದಂಡ: ಹುಬ್ಬಳ್ಳಿ ಮಹಿಳೆಗೆ ಸಿಕ್ತು ನ್ಯಾಯ!
ಪ್ರಾತಿನಿಧಿಕ ಚಿತ್ರImage Credit source: Getty images
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Jul 23, 2026 | 7:29 PM

Share

ಮುಖ್ಯಾಂಶಗಳು

  • ಗ್ರಾಹಕನಿಗೆ ಉಳಿತಾಯ ಖಾತೆಯಲ್ಲಿದ್ದ ಹಣ ನೀಡದ ಸೊಸೈಟಿಗೆ ದಂಡ
  • ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ಆದೇಶ
  • ಬಡಿ ಸಮೇತ ಖಾತೆಯಲ್ಲಿಟ್ಟ 2.4 ಲಕ್ಷ ರೂ ಮರಳಿಸುವಂತೆ ಆದೇಶ

ಧಾರವಾಡ, ಜುಲೈ 23: ಗ್ರಾಹಕರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣವನ್ನು ಹಿಂಪಡೆಯಲು ಹೋದಾಗ ಹಣ ನೀಡದೆ ನಿರಾಕರಿಸಿದ ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗವು (Dharwad Consumer Commission) ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಜೊತೆಗೆ ದಂಡ (fine) ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಪರಿಹಾರವಾಗಿ 50 ಸಾವಿರ ರೂ ಮತ್ತು ಪ್ರಕರಣದ ವೆಚ್ಚ 10 ಸಾವಿರ ರೂ ಸೇರಿ ಒಟ್ಟು 60 ಸಾವಿರ ರೂ ನೀಡುವಂತೆ ಖಡಕ್​ ಸೂಚನೆ ನೀಡಿದೆ.

ಏನಿದು ಪ್ರಕರಣ?

ಹುಬ್ಬಳ್ಳಿಯ ನಿವಾಸಿ ಕೋಮಲಾ ಜಾರತರಗರ್ ಎಂಬುವವರು ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಯ ತಮ್ಮ ಉಳಿತಾಯ ಖಾತೆಯಲ್ಲಿ 2.40 ಲಕ್ಷ ರೂ ಹಣ ಇಟ್ಟಿದ್ದರು. ಅಗತ್ಯವಿದ್ದಾಗ ತಮ್ಮ ಖಾತೆಯಲ್ಲಿದ್ದ ಹಣವನ್ನು ನೀಡುವಂತೆ ಕೋಮಲಾ ಸೊಸೈಟಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ, ಹಣ ನೀಡಲು ಆಡಳಿತ ಮಂಡಳಿ ನಿರಾಕರಿಸಿತ್ತು. ಇದರಿಂದ ಬೇಸತ್ತ ಕೋಮಲಾ 2026ರ ಫೆಬ್ರವರಿ 2ರಂದು ಸೊಸೈಟಿ ಮತ್ತು ಅದರ ಅಧ್ಯಕ್ಷ ವಿ.ಎಸ್. ಸಾಧುನವರ ವಿರುದ್ಧ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು?

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ ಅವರನ್ನೊಳಗೊಂಡ ಪೀಠವು ಗ್ರಾಹಕರ ಪರ ತೀರ್ಪು ನೀಡಿದೆ. ಕೋಮಲಾ ಖಾತೆಯಲ್ಲಿದ್ದ 2.40 ಲಕ್ಷ ರೂ ಹಣವನ್ನು ಬಡ್ಡಿ ಸಮೇತ ತಕ್ಷಣವೇ ಮರಳಿಸುವಂತೆ ಸೂಚಿಸಿದ್ದಾರೆ.

60 ಸಾವಿರ ರೂ ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶ

ಅಷ್ಟೇ ಅಲ್ಲದೆ ಗ್ರಾಹಕರಿಗೆ 50 ಸಾವಿರ ರೂ ಪರಿಹಾರ ಹಾಗೂ ಪ್ರಕರಣದ ಕಾನೂನು ವೆಚ್ಚವಾಗಿ 10 ಸಾವಿರ ರೂ ಸೇರಿದಂತೆ ಒಟ್ಟು 60 ಸಾವಿರ ರೂ ಹೆಚ್ಚುವರಿಯಾಗಿ ಪಾವತಿಸುವಂತೆ ವಿ.ಎಸ್.ಸಾಧುನವರ್ ಸೊಸೈಟಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:28 pm, Thu, 23 July 26

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ
ಮನೆಯವರ ನೆನದು ಕಣ್ಣೀರು ಹಾಕಿದ ಬಿಗ್ ಬಾಸ್ ಸ್ಪರ್ಧಿಗಳು
ಮನೆಯವರ ನೆನದು ಕಣ್ಣೀರು ಹಾಕಿದ ಬಿಗ್ ಬಾಸ್ ಸ್ಪರ್ಧಿಗಳು
ವಿಧಾನ ಪರಿಷತ್​​ ಅಧಿವೇಶನ; ಮೂರನೇ ದಿನದ ಕಲಾಪ ನೇರಪ್ರಸಾರ
ವಿಧಾನ ಪರಿಷತ್​​ ಅಧಿವೇಶನ; ಮೂರನೇ ದಿನದ ಕಲಾಪ ನೇರಪ್ರಸಾರ