AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ

ಬಸಯ್ಯ ಹಿರೇಮಠ್ ಎಂಬುವವರ ಮನೆಯಲ್ಲಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಲೇ ಕುಟುಂಬಸ್ಥರು ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಸಾವು ನೋವು ತಪ್ಪಿದೆ. ಸ್ಥಳಕ್ಕೆ ತಹಶೀಲ್ದಾರರು ಹಾಗೂ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ
ಧಾರವಾಡ: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on: Oct 18, 2023 | 5:22 PM

ಧಾರವಾಡ, ಅಕ್ಟೋಬರ್ 18: ಎಲೆಕ್ಟ್ರಿಕ್ ಬೈಕ್ (Electric Bike) ಬ್ಯಾಟರಿ ಸ್ಫೋಟಗೊಂಡು ಮನೆಯೊಂದು ಬೆಂಕಿಗೆ ಆಹುತಿಯಾದ ಘಟನೆ ಧಾರವಾಡ (Dharawad) ಜಿಲ್ಲೆ ಕಲಘಟಗಿ ತಾಲ್ಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಅದೃಷ್ಟವಶಾತ್, ಸಾವು ನೋವು ಸಂಭವಿಸಿಲ್ಲ. ಎಲೆಕ್ಟ್ರಿಕ್ ಬೈಕ್ ಚಾರ್ಜಿಂಗ್ ವೇಳೆ ಬ್ಯಾಟರಿ ಸ್ಫೋಟಗೊಂಡು ಬೈಕ್ ಸುಟ್ಟು ಕರಕಲಾಗಿದೆ. ಬೈಕ್‌ಗೆ ಹೊತ್ತಿದ ಬೆಂಕಿಯಿಂದ ಹಳೆಯ ಮಡಗಿ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿ ಬೈಕ್ ಬ್ಯಾಟರಿ ಚಾರ್ಜಿಂಗ್​ಗೆ ಹಾಕಿದ್ದ ವೇಳೆ ಘಟನೆ ಸಂಭವಿಸಿದೆ.

ಬಸಯ್ಯ ಹಿರೇಮಠ್ ಎಂಬುವವರ ಮನೆಯಲ್ಲಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಲೇ ಕುಟುಂಬಸ್ಥರು ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಸಾವು ನೋವು ತಪ್ಪಿದೆ. ಸ್ಥಳಕ್ಕೆ ತಹಶೀಲ್ದಾರರು ಹಾಗೂ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೆಟ್ಟಿಂಗ್ ಕುಳಗಳ ಬಂಧನ

ಹುಬ್ಬಳ್ಳಿ ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬೆಟ್ಟಿಂಗ್ ಕುಳಗಳನ್ನು ಬಂಧಿಸಲಾಗಿದೆ. ದಕ್ಷಿಣ ಆಫ್ರಿಕಾ ಹಾಗೂ ನೆದರ್​​ಲೆಂಡ್ ನಡುವಣ ವಿಶ್ವಕಪ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್​​​ನಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ರೂಪಾಯಿ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಧಾರವಾಡ ಕಾರಾಗೃಹದಲ್ಲಿ ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಹೊಡೆದಾಟ

ಹುಬ್ಬಳ್ಳಿಯ ಡಾಕಪ್ಪ ಸರ್ಕಲ್​​ನಲ್ಲಿ ಐವರು ಬೆಟ್ಟಿಂಗ್​​ನಲ್ಲಿ ತೊಡಗಿದ್ದರು. ನವೀನ್, ಮಹಮ್ಮದ್, ಪವನ್ ಬಂಧಿತ ಆರೋಪಿಗಳಾಗಿದ್ದಾರೆ. ಸಂತೋಷ್ ಹಾಗೂ ಗಿರೀಶ್ ಪರಾರಿಯಾಗಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಹುಬ್ಬಳ್ಳಿ ಕಮರಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ. ವಿಶ್ವಕಪ್ ಆರಂಭವಾಗುತ್ತಲೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ