ಧಾರವಾಡ ರೈತರಿಗೂ ಶುರುವಾಯ್ತು ವಕ್ಫ್‌ ನಡುಕ: ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ಉಲ್ಲೇಖ

ವಿಜಯಪುರ ಜಿಲ್ಲೆ ಹೊನವಾಡ ಗ್ರಾಮದ 12000 ಎಕರೆ ವಕ್ಫ್‌ಬೋರ್ಡ್‌ ಹೆಸರಿನಲ್ಲಿದೆ ಎಂಬ ಆರೋಪ ಕೇಳಿಬಂದಿತ್ತು. ಒಬ್ಬರ ಬಳಿಕ ಒಬ್ಬರಿಗೆ ನೋಟಿಸ್‌ ಬರುತ್ತಿದ್ದಂತೆ ರೈತರು ಆತಂಕಗೊಂಡಿದ್ದಾರೆ. ಇದೀಗ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ರೈತರಿಗೂ ವಕ್ಫ್‌ ಭಯ ಶುರುವಾಗಿದೆ. ಧಾರವಾಡ ರೈತರ ವಕ್ಫ್ ಭೀತಿ ಕುರಿತ ವಿವರ ಇಲ್ಲಿದೆ.

ಧಾರವಾಡ ರೈತರಿಗೂ ಶುರುವಾಯ್ತು ವಕ್ಫ್‌ ನಡುಕ: ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ಉಲ್ಲೇಖ
ಧಾರವಾಡ ರೈತರಿಗೂ ಶುರುವಾಯ್ತು ವಕ್ಫ್‌ ನಡುಕ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma

Updated on:Oct 31, 2024 | 7:11 AM

ಧಾರವಾಡ, ಅಕ್ಟೋಬರ್ 29: ದೇಶಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಕಾಯ್ದೆಯ ಬಿಸಿ ಇದೀಗ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮಕ್ಕೂ ತಟ್ಟಿದೆ. ಇಲ್ಲಿನ ಕೆಲ ರೈತರ ಜಮೀನಿನ ಪಹಣಿಯಲ್ಲಿ ಕೆಲವು ವರ್ಷಗಳ ಹಿಂದೆಯೇ ವಕ್ಫ್ ಹೆಸರು ದಾಖಲಾಗಿರುವುದು ಬೆಳಕಿಗೆ ಬಂದಿದೆ. ನೂರಾರು ವರ್ಷಗಳಿಂದ ಪಿತ್ರಾರ್ಜಿತವಾಗಿ ಬಂದಿರುವ ರೈತರ ಹೊಲಗಳ ಪಹಣಿಯ 11ನೇ ಇತರ ಹಕ್ಕುಗಳು ಮತ್ತು ಋಣಗಳು ಕಾಲಂನಲ್ಲಿ ‘ಸದರಿ ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿರುತ್ತದೆ’ ಎಂದು ದಾಖಲಾಗಿದೆ. ತಮ್ಮ ಪಿತ್ರಾರ್ಜಿತ ಆಸ್ತಿಯಾದ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ದಾಖಲಾಗಿರುವುದು ಸಂಬಂಧಪಟ್ಟ ರೈತರಿಗೆ ದಿಗಿಲು ಹುಟ್ಟಿಸಿದೆ.

ಉಪ್ಪಿನಬೆಟಗೇರಿ ಗ್ರಾಮದ ಸರ್ವೆ ನಂಬರ್ 20 ರಲ್ಲಿ ರೈತರಾದ ಮರಬಸಪ್ಪ ತಂದೆ ಮಲ್ಲಪ್ಪ ಮಸೂತಿ ಹಾಗೂ ಶ್ರೀಶೈಲ ತಂದೆ ಮಲ್ಲಪ್ಪ ಮಸೂತಿ ಇವರ ಜಮೀನಿನ 3 ಎಕರೆ 13 ಗುಂಟೆಯ ಜಂಟಿ ಪಹಣಿಯಲ್ಲಿ ಹಾಗೂ ಸರ್ವೆ ನಂಬರ್ 141 ರ ಹಿಸ್ಸಾ 2 ರಲ್ಲಿ ಜವಳಗಿ ಬಾಳಪ್ಪ ರುದ್ರಪ್ಪ ಇವರ ಹೆಸರಿನ 26 ಗುಂಟೆ, ಇದೇ ಸರ್ವೆ ನಂಬರಿನ ಹಿಸ್ಸಾ 3 ರಲ್ಲಿ ಜವಳಗಿ ಸರೋಜಾ ಕರಬಸಪ್ಪ ಇವರ ಹೆಸರಿನ 2 ಎಕರೆ 12 ಗುಂಟೆ ಮತ್ತು ಹಿಸ್ಸಾ 4 ರಲ್ಲಿ ಜವಳಗಿ ಗಂಗಪ್ಪ ರುದ್ರಪ್ಪ ಇವರ ಹೆಸರಿನ 3 ಎಕರೆ 21 ಗುಂಟೆ ಜಮೀನಿನ ಪಹಣಿಯಲ್ಲಿ ‘ವಕ್ಫ್ ಆಸ್ತಿ’ ಎಂದು ದಾಖಲಾಗಿದೆ. ಇದನ್ನು ನೋಡಿದ ರೈತರು ಮುಂದೇನು ಮಾಡಬೇಕು ಎಂದು ತೋಚದೇ ತೊಳಲಾಡುತ್ತಿದ್ದಾರೆ. ವಕ್ಫ್ ಎಂದರೇನು? ಅದೆಲ್ಲಿದೆ? ನಮ್ಮ ಜಮೀನಿನ ಪಹಣಿಯಲ್ಲಿ ಅದರ ಹೆಸರೇಕಿದೆ? ಎಂದು ಮುಗ್ಧ ರೈತರು ತಿಳಿದವರನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಈ ಅವಾಂತರವನ್ನು ಸರಿಪಡಿಸುವ ಕುರಿತು ಈಗಾಗಲೇ ರೈತರು ತಹಶೀಲ್ದಾರ್ ಹಾಗೂ ಧಾರವಾಡ ಜಿಲ್ಲಾ ವಕ್ಫ್ ಅಧಿಕಾರಿಗಳಿಗೆ ಲಿಖಿತವಾಗಿ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ತಹಶೀಲ್ದಾರ್ ಕಚೇರಿ ಸಂಪರ್ಕಿಸಿದರೆ ವಕ್ಫ್ ಕಚೇರಿಯಲ್ಲಿ ಕೇಳಿ ಎನ್ನುತ್ತಿದ್ದಾರೆ. ಇನ್ನು ಜಿಲ್ಲಾ ವಕ್ಫ್ ಕಚೇರಿ ಸಂಪರ್ಕಿಸಿದರೆ ತಹಶೀಲ್ದಾರ್ ಕಚೇರಿಯಲ್ಲಿ ವಿಚಾರಿಸಿ ಎನ್ನುತ್ತಿದ್ದಾರೆ. ಅವರನ್ನು ಕೇಳಿದರೆ ಇವರು, ಇವರನ್ನು ಕೇಳಿದರೆ ಅವರು ಎಂದು ತಮ್ಮನ್ನು ಅಲೆದಾಡಿಸುತ್ತಿದ್ದಾರೆ ಎಂಬುದು ರೈತರ ಆರೋಪ. ಪಿತ್ರಾರ್ಜಿತವಾಗಿ ಬಂದಿರುವ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದರೆ ಮುಂದೇನು ಮಾಡಬೇಕೆಂದು ತಿಳಿಯದೇ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಸಮಸ್ಯೆಯಷ್ಟೇ ಅಲ್ಲ!

ಇದು ಕೇವಲ ಈ ರೈತರದ್ದಷ್ಟೇ ಸಮಸ್ಯೆಯಲ್ಲ. ಬದಲಿಗೆ ಜಿಲ್ಲೆಯಲ್ಲಿ ಇಂಥ ಅನೇಕ ಪ್ರಕರಣಗಳು ನಡೆದಿದ್ದು, ಬಹುತೇಕ ಪ್ರಕರಣಗಳು ರೈತರ ಗಮನಕ್ಕೆ ಬಂದಿಲ್ಲ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಆತಂಕಗೊಂಡಿರುವ ರೈತರು ಇದೀಗ ತಮ್ಮ ಪಹಣಿಗಳನ್ನು ಪರಿಶೀಲಿಸಲು ಸಂಬಂಧಿಸಿದ ಕಚೇರಿಗಳತ್ತ ದೌಡಾಯಿಸುತ್ತಿದ್ದಾರೆ. ಒಟ್ಟಿನಲ್ಲಿ ತಮ್ಮದಲ್ಲದ ತಪ್ಪಿಗೆ ರೈತರು ಪರದಾಡುವಂತಾಗಿದೆ.

ಪರಿಶೀಲನೆ ಹೆಸರಲ್ಲೇ ಬಿಜೆಪಿ ಬಿಗ್‌ ಹೈಡ್ರಾಮಾ

ಪಹಣಿಯಲ್ಲಿ ವಕ್ಫ್‌ ಹೆಸರು ಬಂದಿರುವುದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ, ಪರಿಶೀಲನೆಗೆಂದೇ ಒಂದು ತಂಡ ರಚಿಸಿದೆ. ಆ ತಂಡ ಇಂದು ವಿಜಯಪುರಕ್ಕೆ ಆಗಮಿಸಲಿದೆ. ತಂಡದಲ್ಲಿ ಸಂಸದ ರಮೇಶ್‌ ಜಿಗಜಿಣಗಿ ಹಾಗೂ ಶಾಸಕ ಯತ್ನಾಳ್‌ ಹೆಸರಿಲ್ಲ. ಇದರಿಂದ ಕೆರಳಿರುವ ಯತ್ನಾಳ್‌, ಇದು ವಿಜಯೇಂದ್ರ ಟೀಂ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ

ಯತ್ನಾಳ್ ಆಕ್ರೋಶದ ಬೆನ್ನಲ್ಲೇ ಪರಿಶೀಲನಾ ತಂಡವನ್ನ ಪುನರ್‌ ರಚಿಸಲಾಗಿದ್ದು, ಗೋವಿಂದ್ ಕಾರಜೋಳ, ಶಾಸಕ ಹರೀಶ್ ಪೂಂಜಾ, ಶಾಸಕ ಮಹೇಶ ಟೆಂಗಿನಕಾಯಿ ಹೆಸರಿನ ಜತೆಗೆ ಜಿಗಜಿಣಗಿ ಹಾಗೂ ಯತ್ನಾಳ್‌ ಹೆಸರು ಸೇರ್ಪಡೆ ಮಾಡಲಾಗಿದೆ.

ನೋಟಿಸ್‌ ವಾಪಸ್‌ ಪಡೆಯುತ್ತೇವೆ ಎಂದ ಸಚಿವ

ವಕ್ಫ್‌ ವಿವಾದ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದ್ದಂತೆಯೇ ಸರ್ಕಾರ ಎಚ್ಚೆತ್ತುಕೊಂಡಿದೆ. ಕಂದಾಯ ಸಚಿವ ಕೃಷ್ಣೇಭೈರೇಗೌಡ, ಜಮೀರ್‌ ಅಹ್ಮದ್, ಎಂಬಿ ಪಾಟೀಲ್‌ ಸೋಮವಾರ ಸುದ್ದಿಗೋಷ್ಠಿ ನಡೆಸಿದರು. 121 ನೋಟಿಸ್​ಗಳನ್ನು ನೀಡಿರುವುದು ನಿಜ. ಇದನ್ನು ವಾಪಸ್ ಪಡೆಯುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:56 am, Tue, 29 October 24

ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP