AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ವಿವಾದ: ಸಿದ್ದರಾಮಯ್ಯ ಸಂಪುಟ ತೀರ್ಮಾನಕ್ಕೆ ಕೋರ್ಟ್​​ ತಡೆ

ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ತಡೆ ನೀಡಿದೆ. ಈ ಜಾಗವನ್ನು ಮೂಲತಃ ಕುಡಿಯುವ ನೀರಿನ ಸಂಗ್ರಹಕ್ಕಾಗಿ ಮೀಸಲಿಡಲಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಪರಿಗಣಿಸಿ ಈ ತೀರ್ಪು ನೀಡಿದೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ವಿವಾದ: ಸಿದ್ದರಾಮಯ್ಯ ಸಂಪುಟ ತೀರ್ಮಾನಕ್ಕೆ ಕೋರ್ಟ್​​ ತಡೆ
ಹೈಕೋರ್ಟ್​, ಸಿಎಂ ಸಿದ್ದರಾಮಯ್ಯ
ಶಿವಕುಮಾರ್ ಪತ್ತಾರ್
| Edited By: |

Updated on:Mar 26, 2025 | 4:57 PM

Share

ಹುಬ್ಬಳ್ಳಿ, ಮಾರ್ಚ್​ 26: ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (Hubballi-Dharwad Municipal Corporation) ಜಾಗದಲ್ಲಿ ಕಾಂಗ್ರೆಸ್ (Congress) ಕಚೇರಿ ನಿರ್ಮಿಸಲು ಅನುಮತಿ ನೀಡಿದ್ದ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತಡೆ ನೀಡಿದೆ. ಈ ಮೂಲಕ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸ್ಥಳ ಮಂಜೂರು ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆರಂಭಿಕ ಹಿನ್ನಡೆಯಾಗಿದೆ.

ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ 25ಗುಂಟೆಗಿಂತಲೂ ಅಧಿಕ ಜಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿತ್ತು. ಈ ಜಾಗದಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶೇಕಡಾ 5 ರಷ್ಟು ಹಣವನ್ನು ಪಾಲಿಕೆಗೆ ನೀಡಿ, 25ಗುಂಟೆಗಿಂತಲೂ ಅಧಿಕ ಭೂಮಿಯ ಹಕ್ಕುನ್ನು ಪಡೆಯಲು ಕ್ಯಾಬಿನೆಟ್ ತೀರ್ಮಾನ ಮಾಡಿತ್ತು.

ಸಂಪುಟದ ಈ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಮಹಾನಗರ ಪಾಲಿಕೆಯ ಭೂಮಿಯನ್ನು ಅತ್ಯಂತ ಕಡಿಮೆ ಬೆಲೆ ಖರೀದಿಸಿ, ಅಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಮುಂದಾಗಿದೆ. ಈ ಭೂಮಿಯಲ್ಲಿ ಸದ್ಯ ಹುಬ್ಬಳ್ಳಿ ನಗರಕ್ಕೆ ನೀರು ಪೂರೈಸುವ ಜಲ ಸಂಗ್ರಹ ಬೃಹತ್ ಟ್ಯಾಂಕ್​ಗಳಿವೆ. ಈ ಸ್ಥಳಕ್ಕೆ ಸಾರ್ವಜನಿಕರಿಗೆ ನಿರ್ಬಂಧಿತ ಪ್ರದೇಶವಾಗಿದೆ. ನಿರ್ಬಂಧಿತ ಪ್ರದೇಶ ಜಾಗವನ್ನು ಪಕ್ಷದ ಕಚೇರಿ ಕೊಟ್ಟಿದ್ದು ಸರಿಯಾದ ಕ್ರಮವಲ್ಲ ಎಂದು ಪಾಲಿಕೆ ಬಿಜೆಪಿ ಸದಸ್ಯರು ಅಸಮಾಧಾನ ಹೊರ ಹಾಕಿದ್ದರು.

ಇದನ್ನೂ ಓದಿ
Image
ಹುಬ್ಬಳ್ಳಿ: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ ಜಪ್ತಿ
Image
ಹಳೇ ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್​​​: ಸರ್ಕಾರಕ್ಕೆ ನೋಟಿಸ್
Image
ಹುಬ್ಬಳ್ಳಿ: ಕೋಟಿ ‌ಕೋಟಿ ರೂ. ಬೆಲೆಬಾಳುವ ಸ್ಥಳಕ್ಕಾಗಿ 3 ಪಕ್ಷಗಳ ಗುದ್ದಾಟ!
Image
ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​

ಇದನ್ನೂ ಓದಿ: ಧಾರವಾಡಲ್ಲಿವೆ ಪ್ಲಾಸ್ಟಿಕ್ ಮುಕ್ತ ಗ್ರಾಮಗಳು: ಕ್ಯಾನ್ಸರ್ ತಡೆಗೆ ಒಂದು ದಿಟ್ಟ ಹೆಜ್ಜೆ

ಅಲ್ಲದೇ, ಇದನ್ನು ಪ್ರಶ್ನಿಸಿ ಬಿಜೆಪಿ ಸದಸ್ಯರಾದ ಸಂತೋಷ ಚವ್ಹಾಣ್ ಹಾಗೂ ಬೀರಪ್ಪ ನ್ಯಾಯಾಲಯದ ಮೋರೆ ಹೋಗಿದ್ದರು. ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Wed, 26 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್