AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stanford University ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಐಐಟಿ ಡಾ. ಎಸ್. ಬಸವರಾಜಪ್ಪ ಹಾಗೂ ಡಾ. ಅಮರನಾಥ ಹೆಗಡೆಗೆ ಸ್ಥಾನ

ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಯ ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಅವರು ಸ್ಥಾನ ಪಡೆದಿದ್ದಾರೆ.

Stanford University ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಐಐಟಿ ಡಾ. ಎಸ್. ಬಸವರಾಜಪ್ಪ ಹಾಗೂ ಡಾ. ಅಮರನಾಥ ಹೆಗಡೆಗೆ ಸ್ಥಾನ
ಧಾರವಾಡ ಐಐಟಿ ಡಾ. ಅಮರನಾಥ ಹೆಗಡೆ ಹಾಗೂ ಡಾ. ಎಸ್. ಬಸವರಾಜಪ್ಪ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 12, 2023 | 6:12 PM

Share

ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ 150 ವರ್ಷಗಳ ಇತಿಹಾಸವಿರುವ ಪ್ರತಿಷ್ಠಿತ ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾನಿಲಯವು (Stanford University) ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಯ ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಅವರು ಸ್ಥಾನ ಪಡೆದಿದ್ದಾರೆ. ಅವರ ಮೌಲ್ಯಿಕ ಸಂಶೋಧನೆಗಳ ಸಾಧನೆಯಿಂದ ಧಾರವಾಡ ಐಐಟಿ ಗೆ ಕೀರ್ತಿ ಬಂದಿದ್ದು, ಅವರನ್ನು ಧಾರವಾಡ ಐಐಟಿ ಯ ಎಲ್ಲ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ ಪಬ್ಲಿಕೇಶನ್‍ನ ಸಹಯೋಗದೊಂದಿಗೆ ವಿಶ್ವದ ಅಗ್ರ ಶೇ.2 ರಷ್ಟು ವಿಜ್ಞಾನಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಶ್ರೇಯಾಂಕಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಎಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮತ್ತು ಇತರ ಸಂಯೋಜಿತ ಗ್ರಂಥಮಾಪಕ ಅಂಕಿ-ಸಂಖ್ಯೆಗಳ ಮಾಹಿತಿಯನ್ನು ಆಧರಿಸಿ ಸಿದ್ಧಪಡಿಸಲಾಗಿದೆ. ಇಂತಹ ಅಗ್ರಗಣ್ಯ ವಿಜ್ಞಾನಿಗಳ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡುವ ಪರಿಪಾಠ 2018 ರಿಂದ ಪ್ರಾರಂಭವಾಗಿದೆ.

Also Read: ಅ. 14 ಸೂರ್ಯಗ್ರಹಣದಂದು ಸೂರ್ಯನತ್ತ NASA ದಿಂದ ಒಂದೊಂದಾಗಿ ತ್ರಿವಳಿ ರಾಕೆಟ್‌ ಉಡಾವಣೆ, ಅದರ ಸಾರಥ್ಯ ಭಾರತೀಯ ಮೂಲದ ವಿಜ್ಞಾನಿ ಡಾ. ಆರೋಹ್ ಹೆಗಲಿಗೆ

ಡಾ. ಎಸ್. ಬಸವರಾಜಪ್ಪ :

ಡಾ. ಎಸ್. ಬಸವರಾಜಪ್ಪ ಅವರು ಐಐಟಿ ಧಾರವಾಡದ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿಯವರಿಗೆ ಅವರು 129 ಸಂಶೋಧನ ಲೇಖನಗಳನ್ನು ಪ್ರಕಟಿಸಿದ್ದಾರೆ. 2023 ರ ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾನಿಲಯದ ಅಗ್ರ ವಿಜ್ಞಾನಿಗಳಲ್ಲಿ ವಾರ್ಷಿಕ ಶ್ರೇಯಾಂಕದೊಂದಿಗೆ ವೃತ್ತಿ ಜೀವನದ ಸಾಧನೆಯಲ್ಲಿ ಶ್ರೇಯಾಂಕವನ್ನು ಪಡೆದಿರುವುದು ಗಮನಾರ್ಹವಾಗಿದೆ. ಡಾ.ಬಸವರಾಜಪ್ಪ ಅವರದು ವಸ್ತುಗಳು, ಯಾಂತ್ರಿಕ ಮತ್ತು ಸಾರಿಗೆ ಎಂಜಿನಿಯರಿಂಗ್ ವಿಷಯಗಳ ಸಂಶೋಧನಾ ಕ್ಷೇತ್ರಗಳಾಗಿವೆ. ಈ ಹಿಂದೆಯೂ ಕೂಡ 2020 ಮತ್ತು 2021 ನೇ ಸಾಲಿನಲ್ಲಿ ಬಿಡುಗಡೆಯಾದ ಪಟ್ಟಿಯಲ್ಲಿ ಅವರು ಸ್ಥಾನ ಪಡೆದಿದ್ದರು.

ಡಾ. ಅಮರನಾಥ ಹೆಗಡೆ :

ಡಾ. ಅಮರನಾಥ ಹೆಗಡೆ ಅವರು ಧಾರವಾಡ ಐಐಟಿ ಯ ಸಿವಿಲ್ ಮತ್ತು ಇನ್ಫಾಸ್ಟ್ರಕ್ಚರ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿದ್ದರೆ. ಇಲ್ಲಿಯವರೆಗೆ ಅವರು 46 ಸಂಶೋಧನೆ, ಲೇಖನಗಳನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ವರ್ಷದ ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯದ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಶ್ರೇಯಾಂಕ ಪಡೆದಿದ್ದಾರೆ. ಜಿಯೋಟೆಕ್ನಿಕಲ್ ಇಂಜಿನಿಯರಿಂಗ್, ಜಿಯೋಸಿಂಥೆಟಿಕ್ ಮತ್ತು ಗ್ರೌಂಡ್ ಇಂಪ್ರೂಮೆಂಟ್ಸ್, ಕಾಂಪ್ಯೂಟೇಶನಲ್ಲಿ ಟೆಕ್ನಿಕ್ಸ್ ವಿಷಯಗಳು ಇವರ ಅಧ್ಯಯನ ಆಸಕ್ತಿಯ ಕ್ಷೇತ್ರಗಳಾಗಿವೆ.

Also Read: ವಿಜಯಪುರದ ಮೂವರು ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ! ಯಾರವರು? ಏನವರ ಸಾಧನೆ?

ಐಐಟಿ ಧಾರವಾಡದ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಮತ್ತು ವಿವಿಧ ವಿಭಾಗಗಳ ಡೀನ್‍ರು, ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಇಬ್ಬರೂ ಸಂಶೋಧಕರನ್ನು ಧಾರವಾಡ ಐಐಟಿಗೆ ಕೀರ್ತಿ ತಂದ ಸಾಧನೆಗಾಗಿ ಅಭಿನಂದಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ