ಫೆ.15ರ ನಂತರ ಧಾರವಾಡ IIT ಉದ್ಘಾಟನೆ, ಪ್ರಧಾನಮಂತ್ರಿ ಕಚೇರಿಯಿಂದ ಮಾಹಿತಿ: ಪ್ರಲ್ಹಾದ್​ ಜೋಶಿ

ಫೆ.15ರ ನಂತರ ಧಾರವಾಡ ಐಐಟಿ ಉದ್ಘಾಟನೆ ಆಗಬಹುದು. ಈ ಕುರಿತಾಗಿ ಪ್ರಧಾನಮಂತ್ರಿ ಮೋದಿ ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದರು.

ಫೆ.15ರ ನಂತರ ಧಾರವಾಡ IIT ಉದ್ಘಾಟನೆ, ಪ್ರಧಾನಮಂತ್ರಿ ಕಚೇರಿಯಿಂದ ಮಾಹಿತಿ: ಪ್ರಲ್ಹಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Image Credit source: ndtv.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 27, 2023 | 9:14 PM

ಧಾರವಾಡ: ಫೆ.15ರ ನಂತರ ಧಾರವಾಡ ಐಐಟಿ ಉದ್ಘಾಟನೆ ಆಗಬಹುದು. ಈ ಕುರಿತಾಗಿ ಪ್ರಧಾನಮಂತ್ರಿ ಮೋದಿ (Narendra Modi) ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದರು. ನಾನು ಒಮ್ಮೆ ಐಐಟಿಗೆ ಭೇಟಿ ನೀಡಿ ಕಟ್ಟಡ ಪರಿಶೀಲಿಸುತ್ತೇನೆ ಎಂದು ಹೇಳಿದರು. ಈ ಮುಂಚೆ ಫೆ. 6 ರಂದು ಧಾರವಾಡಕ್ಕೆ ಬರುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಆದರೆ ಇತರೆ ಕಾರ್ಯಗಳಿಂದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ಬಳಿಕ ಫೆಬ್ರವರಿ 27 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿರುವ ಮೋದಿ, ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಗುವ ಹಿನ್ನೆಲೆ ಪಕ್ಷದ ವತಿಯಿಂದ ಜನರನ್ನು ಸೇರಿಸುವ ಬಗ್ಗೆ ಬಿಜೆಪಿ ರಾಜ್ಯ ನಾಯಕರಿಗೆ ಬಿ.ಎಲ್. ಸಂತೋಷ್ ಸೂಚನೆ ನೀಡಿದ್ದಾರೆ.

FSL ಕ್ಯಾಂಪಸ್​ ಶಂಕುಸ್ಥಾಪನೆ

ಇನ್ನು ನಾಳೆ(ಜ. 28) ಮಧ್ಯಾಹ್ನ 12 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ FSL ಕ್ಯಾಂಪಸ್​ ಶಂಕುಸ್ಥಾಪನೆ ನೆರವೇರಿಸುತ್ತಾರೆ. ಬಳಿಕ ಕೃಷಿ ವಿವಿಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರೈತ ಜ್ಞಾನಾಭಿವೃದ್ಧಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವೇಳೆಯ ಅಭಾವದಿಂದ ಸಣ್ಣ ಪ್ರಮಾಣದಲ್ಲಿ ಮಾಡಲು ನಿರ್ಧಾರ ಮಾಡಲಾಗಿದೆ. ಮೊದಲು ಕೃಷಿ ವಿವಿ ಮೈದಾನದಲ್ಲಿ ಮಾಡಲು ನಿರ್ಧರಿಸಲಾಗಿತ್ತು ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಇದನ್ನೂ ಓದಿ: ಶಿಕ್ಷಣ ಕಾಶಿ ಧಾರವಾಡದಲ್ಲಿ ಮತ್ತೊಂದು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ! ಜನವರಿ 28 ರಂದು ಅಮಿತ್ ಶಾ ಶಂಕುಸ್ಥಾಪನೆ

ಪ್ರಧಾನಿ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್ ಇದೆ

ಉದ್ಘಾಟನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು. ಏಕೆಂದರೆ ಪ್ರಧಾನಿ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್ ಇದೆ. ಶಂಕುಸ್ಥಾಪನೆ ಮಾಡಿದವರೇ ಉದ್ಘಾಟನೆ ಮಾಡಬೇಕು. ಆಗ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಾವು ಮಾಡುತ್ತೇವೆ. ಬಳಿಕ ಹೆಲಿಕಾಪ್ಟರ್​ ಮೂಲಕ ಕುಂದಗೋಳಕ್ಕೆ ಹೋಗುತ್ತಾರೆ. ಕುಂದಗೋಳ ಕಾರ್ಯಕ್ರಮ ಮುಗಿಸಿ ಬೆಳಗಾವಿಗೆ ಹೋಗಲಿದ್ದಾರೆ ಎಂದರು.

ವಿಧಿ ವಿಜ್ಞಾನ ವಿಶ್ವವಿದ್ಯಾಲಯ ದಕ್ಷಿಣ ಭಾರತದಲ್ಲಿಯೇ ಮೊದಲು

ಕೇಂದ್ರ ಸರ್ಕಾರ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಕ್ಯಾಂಪಸ್ಸನ್ನು ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಆರಂಭಿಸೋಕೆ ಮುಂದಾಗಿದೆ. ದಕ್ಷಿಣ ಭಾರತದ ಮೊದಲ ಕ್ಯಾಂಪಸ್ ಇದಾಗುತ್ತಿದ್ದು, ಕರ್ನಾಟಕದ ವಿಷಯಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಸದ್ಯ ಗುಜರಾತ್‌ನ ಗಾಂಧಿ ನಗರದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಇದ್ದು, ಇದು ನೇರವಾಗಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿಯೇ ನಡೆಯುತ್ತದೆ.

ಇದನ್ನೂ ಓದಿ: Amit Shah Hubballi Visit: ಧಾರವಾಡ ಜಿಲ್ಲೆಯಲ್ಲಿ ಅಮಿತ್ ಶಾ ಪ್ರವಾಸ, ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್​ಗೆ ಶಂಕುಸ್ಥಾಪನೆ

ಈ ವಿವಿ ದೇಶದ ಒಟ್ಟು 8 ಕಡೆ ತನ್ನ ಕ್ಯಾಂಪಸ್ ಹೊಂದಿದೆ. ಆದರೆ ದಕ್ಷಿಣ ಭಾರತದಲ್ಲಿ ಇರಲೇ ಇಲ್ಲ. ಸದ್ಯ ಈಗ ದಕ್ಷಿಣ ಭಾರತದ ಮೊದಲ ಈ ಕ್ಯಾಂಪಸ್ ಧಾರವಾಡದಲ್ಲಿ ಆರಂಭ ಆಗೋಕೆ ಕಾರಣವಾಗಿದ್ದು, ಧಾರವಾಡ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ. ಇದೀಗ ಈ ಕ್ಯಾಂಪಸ್ ಗೆ ಶಂಕುಸ್ಥಾಪನೆಯನ್ನು ಜನವರಿ 28 ರಂದು ಕೇಂದ್ರ ಗೃಹಸಚಿವ ಅಮಿತ್ ಷಾ ನೆರವೇರಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ