ಧಾರವಾಡ: ಫೆ.15ರ ನಂತರ ಧಾರವಾಡ ಐಐಟಿ ಉದ್ಘಾಟನೆ ಆಗಬಹುದು. ಈ ಕುರಿತಾಗಿ ಪ್ರಧಾನಮಂತ್ರಿ ಮೋದಿ (Narendra Modi) ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಾನು ಒಮ್ಮೆ ಐಐಟಿಗೆ ಭೇಟಿ ನೀಡಿ ಕಟ್ಟಡ ಪರಿಶೀಲಿಸುತ್ತೇನೆ ಎಂದು ಹೇಳಿದರು. ಈ ಮುಂಚೆ ಫೆ. 6 ರಂದು ಧಾರವಾಡಕ್ಕೆ ಬರುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಆದರೆ ಇತರೆ ಕಾರ್ಯಗಳಿಂದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ಬಳಿಕ ಫೆಬ್ರವರಿ 27 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿರುವ ಮೋದಿ, ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಗುವ ಹಿನ್ನೆಲೆ ಪಕ್ಷದ ವತಿಯಿಂದ ಜನರನ್ನು ಸೇರಿಸುವ ಬಗ್ಗೆ ಬಿಜೆಪಿ ರಾಜ್ಯ ನಾಯಕರಿಗೆ ಬಿ.ಎಲ್. ಸಂತೋಷ್ ಸೂಚನೆ ನೀಡಿದ್ದಾರೆ.
ಇನ್ನು ನಾಳೆ(ಜ. 28) ಮಧ್ಯಾಹ್ನ 12 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ FSL ಕ್ಯಾಂಪಸ್ ಶಂಕುಸ್ಥಾಪನೆ ನೆರವೇರಿಸುತ್ತಾರೆ.
ಬಳಿಕ ಕೃಷಿ ವಿವಿಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರೈತ ಜ್ಞಾನಾಭಿವೃದ್ಧಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವೇಳೆಯ ಅಭಾವದಿಂದ ಸಣ್ಣ ಪ್ರಮಾಣದಲ್ಲಿ ಮಾಡಲು ನಿರ್ಧಾರ ಮಾಡಲಾಗಿದೆ. ಮೊದಲು ಕೃಷಿ ವಿವಿ ಮೈದಾನದಲ್ಲಿ ಮಾಡಲು ನಿರ್ಧರಿಸಲಾಗಿತ್ತು ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಇದನ್ನೂ ಓದಿ: ಶಿಕ್ಷಣ ಕಾಶಿ ಧಾರವಾಡದಲ್ಲಿ ಮತ್ತೊಂದು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ! ಜನವರಿ 28 ರಂದು ಅಮಿತ್ ಶಾ ಶಂಕುಸ್ಥಾಪನೆ
ಉದ್ಘಾಟನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು. ಏಕೆಂದರೆ ಪ್ರಧಾನಿ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್ ಇದೆ. ಶಂಕುಸ್ಥಾಪನೆ ಮಾಡಿದವರೇ ಉದ್ಘಾಟನೆ ಮಾಡಬೇಕು. ಆಗ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಾವು ಮಾಡುತ್ತೇವೆ. ಬಳಿಕ ಹೆಲಿಕಾಪ್ಟರ್ ಮೂಲಕ ಕುಂದಗೋಳಕ್ಕೆ ಹೋಗುತ್ತಾರೆ. ಕುಂದಗೋಳ ಕಾರ್ಯಕ್ರಮ ಮುಗಿಸಿ ಬೆಳಗಾವಿಗೆ ಹೋಗಲಿದ್ದಾರೆ ಎಂದರು.
ಕೇಂದ್ರ ಸರ್ಕಾರ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಕ್ಯಾಂಪಸ್ಸನ್ನು ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಆರಂಭಿಸೋಕೆ ಮುಂದಾಗಿದೆ. ದಕ್ಷಿಣ ಭಾರತದ ಮೊದಲ ಕ್ಯಾಂಪಸ್ ಇದಾಗುತ್ತಿದ್ದು, ಕರ್ನಾಟಕದ ವಿಷಯಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಸದ್ಯ ಗುಜರಾತ್‌ನ ಗಾಂಧಿ ನಗರದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಇದ್ದು, ಇದು ನೇರವಾಗಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿಯೇ ನಡೆಯುತ್ತದೆ.
ಈ ವಿವಿ ದೇಶದ ಒಟ್ಟು 8 ಕಡೆ ತನ್ನ ಕ್ಯಾಂಪಸ್ ಹೊಂದಿದೆ. ಆದರೆ ದಕ್ಷಿಣ ಭಾರತದಲ್ಲಿ ಇರಲೇ ಇಲ್ಲ. ಸದ್ಯ ಈಗ ದಕ್ಷಿಣ ಭಾರತದ ಮೊದಲ ಈ ಕ್ಯಾಂಪಸ್ ಧಾರವಾಡದಲ್ಲಿ ಆರಂಭ ಆಗೋಕೆ ಕಾರಣವಾಗಿದ್ದು, ಧಾರವಾಡ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ. ಇದೀಗ ಈ ಕ್ಯಾಂಪಸ್ ಗೆ ಶಂಕುಸ್ಥಾಪನೆಯನ್ನು ಜನವರಿ 28 ರಂದು ಕೇಂದ್ರ ಗೃಹಸಚಿವ ಅಮಿತ್ ಷಾ ನೆರವೇರಿಸಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.