AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಮತ್ತೆ ಹೋರಾಟಕ್ಕೆ ಮುಂದಾದ ಉದ್ಯೋಗಾಕಾಂಕ್ಷಿಗಳು; ಅನುಮತಿ ನಿರಾಕರಿಸಿದ ಖಾಕಿ

Dharwad job aspirants protest: ಧಾರವಾಡದಲ್ಲಿ ಆಗಸ್ಟ್ 18ರಂದು ಆಕ್ಸಾ ಸಂಘಟನೆ ನಡೆಸಲು ಉದ್ದೇಶಿಸಿದ್ದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಹು-ಧಾ ಕಮಿಷನರ್ ಎನ್. ಶಶಿಕುಮಾರ್ ಅನುಮತಿ ನಿರಾಕರಿಸಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ದೊಡ್ಡಮಟ್ಟದ ಪ್ರತಿಭಟನೆಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳನ್ನು ಕಾರಣವಾಗಿ ನೀಡಿ, ಇದೀಗ ಅನುಮತಿ ನಿರಾಕರಿಸಲಾಗಿದೆ.

ಧಾರವಾಡದಲ್ಲಿ ಮತ್ತೆ ಹೋರಾಟಕ್ಕೆ ಮುಂದಾದ ಉದ್ಯೋಗಾಕಾಂಕ್ಷಿಗಳು; ಅನುಮತಿ ನಿರಾಕರಿಸಿದ ಖಾಕಿ
ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ (ಸಂಗ್ರಹ ಚಿತ್ರ)Image Credit source: tv9 kannada
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 16, 2026 | 5:50 PM

Share

ಮುಖ್ಯಾಂಶಗಳು

  • ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಅನುಮತಿ ನಿರಾಕರಣೆ
  • ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಹು-ಧಾ ಕಮಿಷನರ್ ಶಶಿಕುಮಾರ್
  • ಆಗಸ್ಟ್ 18ರಂದು ಪ್ರತಿಭಟನೆಗೆ ಅನುಮತಿ ಕೇಳಿದ್ದ ಆಕ್ಸಾ ಸಂಘಟನೆ

ಧಾರವಾಡ, ಆಗಸ್ಟ್​ 16: ಉದ್ಯೋಗಕ್ಕಾಗಿ ಹಕ್ಕೊತ್ತಾಯ ಮಂಡಿಸಲು ಸಜ್ಜಾಗುತ್ತಿದ್ದ ಸಾವಿರಾರು ನಿರುದ್ಯೋಗಿ ಯುವಜನರ ಹೋರಾಟಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಆಗಸ್ಟ್ 18ರಂದು ಧಾರವಾಡದಲ್ಲಿ (dharwad) ಪ್ರತಿಭಟನೆ ನಡೆಸಲು ಅನುಮತಿ ಕೋರಿದ್ದ ಉದ್ಯೋಗಾಕಾಂಕ್ಷಿಗಳ (job aspirants) ‘ಆಕ್ಸಾ’ ಸಂಘಟನೆಯ ಮನವಿಯನ್ನು ಪೊಲೀಸ್ ಇಲಾಖೆ ತಿರಸ್ಕರಿಸಿದೆ. ಹಳೆಯ ಘಟನೆ ಉಲ್ಲೇಖಿಸಿ ಉಪನಗರ ಠಾಣೆಯ ಪೊಲೀಸರು​ ಪ್ರತಿಭಟನೆಗೆ (protest) ಅವಕಾಶ ನಿರಾಕರಿಸಿದ್ದಾರೆ.

ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಆಕ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಕಾಂತಕುಮಾರ್ ನೇತೃತ್ವದಲ್ಲಿ ಧಾರವಾಡದ ಮಿಚಿಗನ್ ಕಾಂಪೌಂಡ್ ಬಳಿ ಹೋರಾಟ ನಡೆಸಲು ಅನುಮತಿ ಕೋರಲಾಗಿತ್ತು. ಆದರೆ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್​ ನಿರ್ದೇಶನದಂತೆ ಉಪನಗರ ಠಾಣೆಯ ಪೊಲೀಸರು ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ.

ಇದನ್ನೂ ಓದಿ: ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್

ಈ ಹಿಂದೆ ಧಾರವಾಡ ಹೈಕೋರ್ಟ್ ಪೀಠವು ನಗರದ ನೆಹರು ಮೈದಾನದಲ್ಲಿ ಗರಿಷ್ಠ 100 ಜನರಿಗೆ ಸೀಮಿತವಾಗಿ ಶಾಂತಿಯುತ ಪ್ರತಿಭಟನೆ ನಡೆಸಲು ಷರತ್ತುಬದ್ಧ ಅವಕಾಶ ಕಲ್ಪಿಸಿತ್ತು. ಆದರೆ, ಸಂಘಟಕರು ನ್ಯಾಯಾಲಯ ಸೂಚಿಸಿದ ಸ್ಥಳದಲ್ಲಿ ಪ್ರತಿಭಟನೆ ಮಾಡಿರಲಿಲ್ಲ. ಇದೀಗ ಮಿಚಿಗನ್ ಕಾಂಪೌಂಡ್ ಬಳಿ ಧರಣಿಗೆ ಅನುಮತಿ ಕೇಳಿದ್ದಾರೆ. ಹೀಗಾಗಿ ಉಪನಗರ ಠಾಣೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಹಿಂದೊಮ್ಮೆ ಅನುಮತಿ ನಿರಾಕರಣೆ

ಇನ್ನು ಉದ್ಯೋಗಾಕಾಂಕ್ಷಿಗಳು ಮತ್ತು ಧಾರವಾಡ ಪೊಲೀಸರ ನಡುವಿನ ಈ ತಿಕ್ಕಾಟ ಇಂದು ನಿನ್ನೆಯದಲ್ಲ. ಕಳೆದ ವರ್ಷದ ಸೆಪ್ಟೆಂಬರ್​​ನಲ್ಲಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಹೋರಾಟ ನಡೆದಿತ್ತು. ಮೊದಲ ಬಾರಿಗೆ ಭಾರೀ ಪ್ರಮಾಣದಲ್ಲಿ ನಡೆದಿದ್ದ ಹೋರಾಟ ರಾಜ್ಯದ ಜನರು ಸೇರಿದಂತೆ ಸರ್ಕಾರದ ಗಮನವನ್ನು ಸೆಳೆದಿತ್ತು. ಸರ್ಕಾರ ಕೆಲ ಭರವಸೆಗಳನ್ನು ನೀಡಿ ಸಮಾಧಾನ ಮಾಡಿತ್ತು.

ಇದನ್ನೂ ಓದಿ: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಆದರೆ ಅಷ್ಟಕ್ಕೆ ಸುಮ್ಮನಾಗದ ಉದ್ಯೋಗಾಕಾಂಕ್ಷಿಗಳು, ಸ್ವಲ್ಪ ದಿನಗಳ ನಂತರ ಮತ್ತೆ ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಆ ವೇಳೆ ಪೊಲೀಸರು ಅನುಮತಿ ಕೊಟ್ಟಿರಲಿಲ್ಲ. ಬಳಿಕ ಕೋರ್ಟ್​​​​​ ಮೆಟ್ಟಿಲೇರಿದ ಉದ್ಯೋಗಾಕಾಂಕ್ಷಿಗಳಿಗೆ ಷರತ್ತುಬದ್ಧ ಹೋರಾಟಕ್ಕೆ ಗ್ರೀನ್​​ ಸಿಗ್ನಲ್ ನೀಡಲಾಗಿತ್ತು. ಆದರೆ ವೇಳೆ ಕೆಲ ಅಹಿತಕರ ಘಟನೆಗಳು ಸಂಭವಿಸಿದ್ದವು. ಆ ಕಹಿ ಘಟನೆಗಳನ್ನು ಉಲ್ಲೇಖಿಸಿರುವ ಪೊಲೀಸರು, ಸಾರ್ವಜನಿಕ ಶಾಂತಿಗೆ ಭಂಗ ಬರಬಾರದೆಂಬ ಕಾರಣಕ್ಕೆ ಸದ್ಯದ ಹೋರಾಟಕ್ಕೆ ಅನುಮತಿ ನಿರಾಕರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು