AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಎಕರೆಯ ಧಾರವಾಡ ಕರ್ನಾಟಕ ವಿವಿ ಜಮೀನು ರಕ್ಷಣೆಗೆ ದಿಟ್ಟ ಹೆಜ್ಜೆ: ಕುಲಪತಿ ನಡೆಗೆ ಮೆಚ್ಚುಗೆ

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ನೂರಾರು ಎಕರೆ ಜಮೀನು ಅತಿಕ್ರಮಣಕ್ಕೊಳಗಾಗಿದೆ. ಹಿಂದಿನ ಪ್ರಯತ್ನಗಳು ವಿಫಲವಾಗಿದ್ದವು. ಈಗ ನೂತನ ಕುಲಪತಿ ಈ ಸಮಸ್ಯೆಯನ್ನು ಬಗೆಹರಿಸಲು ದೃಢ ನಿರ್ಧಾರ ಕೈಗೊಂಡಿದ್ದಾರೆ. ಡ್ರೋನ್ ತಂತ್ರಜ್ಞಾನ ಬಳಸಿ ವೈಜ್ಞಾನಿಕ ಸರ್ವೆ ನಡೆಸಿ, ಅತಿಕ್ರಮಣಗೊಂಡ ಭೂಮಿಯನ್ನು ಮರಳಿ ಪಡೆಯಲು ಮತ್ತು ಬೇಲಿ ಹಾಕಿ ರಕ್ಷಿಸಲು ಮುಂದಾಗಿದ್ದಾರೆ. ಇದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.

ನೂರಾರು ಎಕರೆಯ ಧಾರವಾಡ ಕರ್ನಾಟಕ ವಿವಿ ಜಮೀನು ರಕ್ಷಣೆಗೆ ದಿಟ್ಟ ಹೆಜ್ಜೆ: ಕುಲಪತಿ ನಡೆಗೆ ಮೆಚ್ಚುಗೆ
ಧಾರವಾಡ ಕರ್ನಾಟಕ ವಿವಿ, ಕುಲಪತಿ ಪ್ರೊ. ಎ.ಎಂ. ಖಾನ್
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Dec 18, 2025 | 8:08 PM

Share

ಧಾರವಾಡ, ಡಿಸೆಂಬರ್​​ 18: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪೈಕಿ ಧಾರವಾಡ ಕರ್ನಾಟಕ ವಿವಿ (Karnatak University) ಕೂಡ ಒಂದು. ಈ ವಿಶ್ವವಿದ್ಯಾಲಯಕ್ಕೆ ಸೇರಿದ ನೂರಾರು ಎಕರೆ ಜಮೀನಿದೆ (land). ಆದರೆ ಇತ್ತೀಚಿನ ವರ್ಷಗಳಲ್ಲಿ ಅದರ ನಿರ್ವಹಣೆ ಮಾಡಲಾಗದೆ ಅನೇಕರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಈ ಅತಿಕ್ರಮಣ ತೆರವು ಮಾಡಲು ಹೋದರೆ ಸಾಕಷ್ಟು ಸಮಸ್ಯೆಯಾಗುತ್ತಲೇ ಇದೆ. ಆದರೂ ಇದೀಗ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ವಿವಿಯ ಕುಲಪತಿ ಹೊಸ ರೀತಿಯ ಸರ್ವೆ ಮಾಡಿಸಿ, ತಮ್ಮ ಅವಧಿಯಲ್ಲಿ ಅದಕ್ಕೆ ಬೇಲಿ ಹಾಕಿ ರಕ್ಷಣೆ ಮಾಡಲು ಮುಂದಾಗಿದ್ಧಾರೆ.

ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯ. ಹಸಿರಿನಿಂದ ಕಂಗೊಳಿಸುವ ಈ ವಿಶ್ವವಿದ್ಯಾಲಯಕ್ಕೆ ಒಟ್ಟು 880 ಎಕರೆ ಜಮೀನಿದೆ. ಆದರೆ ಆ ಜಮೀನಿನ ರಕ್ಷಣೆಯೇ ವಿಶ್ವವಿದ್ಯಾಲಯಕ್ಕೆ ದೊಡ್ಡ ಸವಾಲಾಗಿದೆ. ಅನೇಕ ಕಡೆಗಳಲ್ಲಿ ವಿವಿಯ ಜಮೀನಿನ ಅತಿಕ್ರಮಣವಾಗಿ, ಅಲ್ಲಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅಂಥ ಜಾಗವನ್ನು ಮರಳಿ ತೆಗೆದುಕೊಳ್ಳಲು ವಿವಿಯ ಅಧಿಕಾರಿಗಳು ಹೋದರೆ ಸಾಕಷ್ಟು ಗಲಾಟೆಗಳು ನಡೆದಿವೆ.

ಇದನ್ನೂ ಓದಿ: Guest Lecturer Jobs: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವುದು ಹೇಗೆ?

ಹೀಗಾಗಿ ಯಾವೊಬ್ಬ ಕುಲಪತಿಯೂ ಇದರ ತಂಟೆಗೆ ಹೋಗದೇ, ತಾವಾಯಿತು ತಮ್ಮ ಅಧಿಕಾರವಾಯಿತು ಅಂತಾ ಇದ್ದುಬಿಟ್ಟಿದ್ದರು. ಆದರೆ ಇತ್ತೀಚಿಗೆ ಅಧಿಕಾರ ಸ್ವೀಕರಿಸಿರುವ ಕುಲಪತಿ ಪ್ರೊ. ಎ.ಎಂ. ಖಾನ್ ಅವರು ವಿಶ್ವವಿದ್ಯಾಲಯದ ಎಲ್ಲ ಆಸ್ತಿಗಳ ರಕ್ಷಣೆಗೆ ಮುಂದಾಗಿದ್ಧಾರೆ. ಮೂಲತಃ ಇದೇ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿರುವ ಪ್ರೊ. ಖಾನ್, ತಮ್ಮ ಅವಧಿಯಲ್ಲಿ ಈ ಕೆಲಸವನ್ನು ಮಾಡಿಯೇ ತೀರಬೇಕು ಅಂತಾ ನಿರ್ಧರಿಸಿದ್ದಾರೆ. ಇದಕ್ಕಾಗಿ ಹೊಸ ಬಗೆಯ ತಂತ್ರಜ್ಞಾನವನ್ನು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ.

ಧಾರವಾಡ ನಗರದ ಅನೇಕ ಕಡೆಗಳಲ್ಲಿ ಈ ವಿಶ್ವವಿದ್ಯಾಲಯದ ಆಸ್ತಿ ವಿಸ್ತರಿಸಿದೆ. ಒಂದೇ ಕಡೆಯಲ್ಲಿ ಜಮೀನು ಇದ್ದರೆ ರಕ್ಷಣೆ ಹಾಗೂ ನಿರ್ವಹಣೆ ತುಂಬಾನೇ ಸರಳ. ಆದರೆ ಅನೇಕ ಕಡೆಗಳಲ್ಲಿ ಆಸ್ತಿ ಇರುವುದರಿಂದ ಅವುಗಳನ್ನು ಗುರುತಿಸಿ, ಅವುಗಳ ಗಡಿ ಗುರುತಿಸಿ ಬೇಲಿಯನ್ನು ಅಳವಡಿಸುವುದು ತುಂಬಾನೇ ಕಷ್ಟ. ಅದಾಗಲೇ ಸ್ಥಳೀಯರು ಅದನ್ನು ಅತಿಕ್ರಮಣ ಮಾಡಿಕೊಂಡಿದ್ದರಿಂದ ಅವರನ್ನು ಅಲ್ಲಿಂದ ಒಕ್ಕಲೆಬ್ಬಿಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ಇದೀಗ ಡ್ರೋನ್ ಮೂಲಕ ವಿಶ್ವವಿದ್ಯಾಲಯದ ಸರ್ವೆ ನಡೆಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಸರ್ವೆ ಇಲಾಖೆಯೊಂದಿಗೆ ಸಂವಹನ ನಡೆಸಿ, ವೈಜ್ಞಾನಿಕವಾದ ಸರ್ವೆ ಮಾಡಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಅತಿಕ್ರಮಣ ಮಾಡಿದವರು ಕೂಡ ಹೆಚ್ಚಿಗೆ ಮಾತನಾಡಲು ಬರುವುದಿಲ್ಲ ಎನ್ನುವುದು ಇದರ ಹಿಂದಿರುವ ಉದ್ದೇಶ. ನಗರದ ಹೃದಯ ಭಾಗದಲ್ಲಿಯೂ ವಿಶ್ವವಿದ್ಯಾಲಯದ ಸಾಕಷ್ಟು ಆಸ್ತಿ ಇವೆ. ಸಣ್ಣ ಜಮೀನಿಗೆ ಅದಾಗಲೇ ಕಾಂಪೌಂಡ್ ಇಲ್ಲವೇ ತಂತಿ ಬೇಲಿಯ ರಕ್ಷಣೆ ಇದೆ. ಆದರೆ ದೊಡ್ಡ ಜಮೀನಿಗೆ ಈ ರಕ್ಷಣೆ ನೀಡಲು ವಿಶ್ವವಿದ್ಯಾಲಯಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಅಂಥ ಜಮೀನುಗಳು ಅತಿಕ್ರಮಣಗೊಂಡಿವೆ. ಇನ್ನು ನೂತನ ಕುಲಪತಿಗಳ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಒಂದು ವಿಶ್ವವಿದ್ಯಾಲಯಕ್ಕೆ ಎಷ್ಟು ಜಮೀನಿದ್ದರೂ ಕಡಿಮೆಯೇ. ಅದು ನಿರಂತರವಾಗಿ ವಿಸ್ತರಣೆಯಾಗುತ್ತಾ ಹೋಗುವ ಜ್ಞಾನ ಕೇಂದ್ರ. ಹೀಗಾಗಿ ಇರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಯಾರಿಗೂ ಬಿಟ್ಟುಕೊಡಬಾರದು ಅನ್ನೋದು ಸ್ಥಳೀಯರ ಅಭಿಪ್ರಾಯ.

ಇದನ್ನೂ ಓದಿ: ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ

ವಿವಿ ಭೂಮಿಯ ಅತಿಕ್ರಮಣದ ಅನೇಕ ಪ್ರಕರಣಗಳು ಅದಾಗಲೇ ನ್ಯಾಯಾಲಯದ ಮೆಟ್ಟಿಲೇರಿವೆ. ಇದಕ್ಕೆ ಕಾರಣ ಹಿಂದೆ ಕಾರ್ಯನಿರ್ವಹಿಸಿದ ವಿವಿ ಕುಲಪತಿಗಳು ಹಾಗೂ ಸಿಬ್ಬಂದಿ. ಅತಿಕ್ರಮಣ ತೆರವು ವೇಳೆ ರಾಜಕೀಯ ನಾಯಕರು ಕೂಡ ಪ್ರಭಾವ ಬೀರುತ್ತಾರೆ. ಹೀಗಾಗಿ ಅಧಿಕಾರಿಗಳಿಗೂ ಕೂಡ ಇದನ್ನು ತಡೆಯುವುದು ತುಂಬಾನೇ ಕಷ್ಟ. ಆದರೆ ಇದೀಗ ನೂತನ ಕುಲಪತಿಗಳ ಗಟ್ಟಿ ನಿರ್ಧಾರದಿಂದಾಗಿ ಕೈಬಿಟ್ಟು ಹೋಗಿರುವ ಆಸ್ತಿ ಮರಳಿ ಬರುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ