ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆ 9ರಿಂದ ನಾಲ್ಕು ದಿನ ಕೃಷಿ ಮೇಳ

ಧಾರವಾಡದ ಕೃಷಿ ವಿಶ್ವವಿದ್ಯಾಲಯವು ವಾರ್ಷಿಕ ಕೃಷಿ ಮೇಳವನ್ನು ಸೆಪ್ಟಂಬರ್ 09ರಿಂದ 12ರವರೆಗೆ ಅಂದರೆ ಒಟ್ಟು 4 ದಿನಗಳ ಕಾಲ ಆಯೋಜನೆ ಮಾಡಿದೆ. ಈ ಕುರಿತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಪ್ರಕಟಣೆ ಹೊರಡಿಸಿದೆ. ಈ ವರ್ಷದ ಕೃಷಿ ಮೇಳದಲ್ಲಿ ಸಾವಯವ ಕೃಷಿ ಬೆಳೆಗಳು, ಸಿರಿಧಾನ್ಯ ಉತ್ಪಾದನೆ, ಪೌಷ್ಠಿಕ ಧಾನ್ಯಗಳ ಉತ್ಪಾದನೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗುತ್ತೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆ 9ರಿಂದ ನಾಲ್ಕು ದಿನ ಕೃಷಿ ಮೇಳ
ಕೃಷಿ ಮೇಳ ಹಳೆಯ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Aug 28, 2023 | 11:54 AM

ಧಾರವಾಡ, ಆ.28: ಪ್ರತಿ ವರ್ಷ ಆಚರಿಸುವಂತೆ ಈ ವರ್ಷವು ಧಾರವಾಡದ ಕೃಷಿ ವಿಶ್ವವಿದ್ಯಾಲಯವು ವಾರ್ಷಿಕ ಕೃಷಿ ಮೇಳವನ್ನು(Dharwad Krishi Mela) ಸೆಪ್ಟಂಬರ್ 09ರಿಂದ 12ರವರೆಗೆ ಅಂದರೆ ಒಟ್ಟು 4 ದಿನಗಳ ಕಾಲ ಆಯೋಜನೆ ಮಾಡಿದೆ. ಈ ಕುರಿತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಪ್ರಕಟಣೆ ಹೊರಡಿಸಿದೆ. ಇನ್ನು ಭತ್ತ ಬಿತ್ತನೆಗಾಗಿ ರೈತರಿಗೆ ಗುಣಮಟ್ಟದ ಬೀಜಗಳನ್ನು ಪಡೆಯಲು ಅನುಕೂಲವಾಗುವಂತೆ ಬೀಜಗಳ ಮೇಳವನ್ನು ಸಹ ನಡೆಸಲಾಗುವುದು.

ಈ ಭಾರಿಯ ಕೃಷಿ ಮೇಳವನ್ನು ಸುಸ್ಥಿರ ಕೃಷಿಗೆ ಸಿರಿದಾನ್ಯ ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ತಯಾರಿ ನಡೆಸಲಾಗುತ್ತಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ರೈತರು, ರೈತ ಮಹಿಳೆಯರು, ಗ್ರಾಮೀಣ ಯುವಕರು ಹಾಗೂ ವಿಸ್ತರಣಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದೆ.

ಈ ವರ್ಷದ ಕೃಷಿ ಮೇಳದಲ್ಲಿ ಸಾವಯವ ಕೃಷಿ ಬೆಳೆಗಳು, ಸಿರಿಧಾನ್ಯ ಉತ್ಪಾದನೆ, ಪೌಷ್ಠಿಕ ಧಾನ್ಯಗಳ ಉತ್ಪಾದನೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ, ಸಾವಯವವಾಗಿ ಬೆಳೆದ ಬೆಳೆಗಳ ಮೌಲ್ಯವರ್ಧನೆ ಮತ್ತು ಮಾರುಕಟ್ಟೆಗೆ ಒತ್ತು ನೀಡಲಿದೆ. ಜೊತೆಗೆ ಸಂಶೋಧನೆ ಮಾಡಿದ ವಿವಿಧ ತಳಿಗಳ ಹಾಗೂ ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ಕೂಡ ರೈತರಿಗೆ ಸಿಗಲಿದೆ.

ಇದನ್ನೂ ಓದಿ: ಧಾರವಾಡದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ಡರ್ಟ್ ಟ್ರ್ಯಾಕ್ ಚಾಂಪಿಯನ್ ಶಿಪ್; ಇಲ್ಲಿವೆ ರೋಮಾಂಚನಕಾರಿ ರೇಸ್​ನ ಫೋಟೋಗಳು

ಜೈವಿಕ ಗೊಬ್ಬರಗಳು ಮತ್ತು ಜೈವಿಕ ಕೀಟನಾಶಕಗಳು, ಸಮಗ್ರ ಬೆಳೆಗಳು, ಪೋಷಕಾಂಶಗಳು, ಕೀಟ ಮತ್ತು ರೋಗ ನಿರ್ವಹಣೆ, ನೈಸರ್ಗಿಕ ಮತ್ತು ಸಾವಯವ ಕೃಷಿ, ಮಣ್ಣಿನ ಫಲವತ್ತತೆ ಮತ್ತು ಮಣ್ಣಿನ ಆರೋಗ್ಯದ ಸಂರಕ್ಷಣೆ, ಮಳೆನೀರು ಕೊಯ್ಲು ಮತ್ತು ಅಂತರ್ಜಲ ಮರುಪೂರಣ ಕೃಷಿ ಮೇಳದ ಪ್ರಮುಖ ಆಕರ್ಷಣೆ.

ಕೃಷಿ ಮೇಳದಲ್ಲಿ ತೋಟಗಾರಿಕೆ, ಹಣ್ಣುಗಳು ಮತ್ತು ಹೂವುಗಳ ಪ್ರದರ್ಶನ, ಬೆಳೆಗಳ ತಾಂತ್ರಿಕತೆಗಳು, ಕಿಸಾನ್ ಡ್ರೋನ್ ಬಳಕೆ, ಬರ ನಿರ್ವಹಣಾ ತಾಂತ್ರಿಕತೆಗಳು, ಒಣ ಬೇಸಾಯ, ಜಲಾನಯನ ಅಭಿವೃದ್ಧಿ, ನೀರು ನಿರ್ವಹಣಾ ಅಭ್ಯಾಸಗಳು, ಭತ್ತ ಬೆಳೆ ತಂತ್ರಜ್ಞಾನಗಳು, ಸಮಗ್ರ ಜಲಾನಯನ ಅಭಿವೃದ್ಧಿ, ಸುಧಾರಿತ ಕೃಷಿ ಉಪಕರಣಗಳು ಮತ್ತು ಕಿಸಾನ್ ಡ್ರೋನ್ ಬಳಕೆ, ರೈತರ ಆವಿಷ್ಕಾರಗಳು, ಪ್ರಗತಿಪರ ರೈತರು ಮತ್ತು ಕೃಷಿ ಮಹಿಳೆಯರೊಂದಿಗೆ ಸಂವಾದ, ತಜ್ಞರು ಮತ್ತು ಕೃಷಿ ಸ್ಟಾರ್ಟ್‌ಅಪ್‌ಗಳಿಂದ ಕೃಷಿ ಸಲಹಾ ಸೇವೆಗಳು, ಕೃಷಿ ಅರಣ್ಯ, ಪಶುಸಂಗೋಪನೆ, ತಳಿಗಳ ಪ್ರದರ್ಶನ ಮತ್ತು ಮೇವು ಬೆಳೆಗಳ ತಂತ್ರಜ್ಞಾನಗಳು ಮತ್ತು ಸಮುದಾಯದ ಮೂಲಕ ಸಂಪನ್ಮೂಲಗಳು ಮಹಿಳಾ ಸಬಲೀಕರಣಕ್ಕಾಗಿ ವಿಜ್ಞಾನ ತಂತ್ರಜ್ಞಾನಗಳು, ಕೃಷಿ ಅರಣ್ಯ ಪದ್ಧತಿಗಳು, ಪರಿಸರ ಸಂರಕ್ಷಣೆ, ಕೃಷಿ ಯಂತ್ರೋಪಕರಣಗಳು, ವಿವಿಧ ಜಾನುವಾರುಗಳ ಪ್ರದರ್ಶನ, ಹುಟ್ಟುವಳಿಗಳ ಮೌಲ್ಯವರ್ಧನೆಗಾಗಿ ಅನುಷ್ಟಾನಗೊಂಡಿರುವ ವಿವಿಧ ಪ್ರಾತ್ಯಕ್ಷಿಕೆಗಳ ವೀಕ್ಷಣೆ ಮತ್ತು ಪ್ರದರ್ಶನ, ವಸ್ತ್ರವಿನ್ಯಾಸ, ವಿವಿಧ ಸಂಘ-ಸಂಸ್ಥೆಗಳಿಂದ ಉತ್ಪನ್ನಗಳ ಮಾರಾಟ ಮಾಹಿತಿ ಸಿಗಲಿದೆ.

ಕೃಷಿ ಮೇಳದಲ್ಲಿ ಮಳಿಗೆಗಳನ್ನು ಕಾಯ್ದಿರಿಸಲು 8277478507, 0836-2214468, ಅಥವಾ 0836-2214497 ಅನ್ನು ಸಂಪರ್ಕಿಸಬಹುದು.

ಧಾರವಾಡಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ