AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಕೇಂದ್ರದ ಮಂತಿವರೆಗೆ ಪ್ರಲ್ಹಾದ್​ ಜೋಶಿ ನಡೆದುಬಂದ ಹಾದಿ

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರ ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್​ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ. ಇಂದು ದೇವರ ಹೆಸರಿನಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಕೂಡ ಮಾಡಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತರ ಮತಗಳೇ ಹೆಚ್ಚಾಗಿದ್ದರೂ ಬ್ರಾಹ್ಮಣ ಸಮಾಜಕ್ಕೆ ಸೇರಿದ ಪ್ರಲ್ಹಾದ್​ ಜೋಶಿ ಸತತ 5ನೇ ಬಾರಿಗೆ ಗೆಲ್ಲುತ್ತಿರುವುದು ಮಾತ್ರ ಇತಿಹಾಸ.

ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಕೇಂದ್ರದ ಮಂತಿವರೆಗೆ ಪ್ರಲ್ಹಾದ್​ ಜೋಶಿ ನಡೆದುಬಂದ ಹಾದಿ
ಸಂಸದ ಪ್ರಲ್ಹಾದ್​ ಜೋಶಿ
ವಿವೇಕ ಬಿರಾದಾರ
| Edited By: |

Updated on:Jun 09, 2024 | 9:06 PM

Share

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರ ಈ ಬಾರಿಯೂ ಬಿಜೆಪಿಯ ತೆಕ್ಕೆಗೆ ಬಿದ್ದಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್​ ಜೋಶಿ (Pralhad Joshi) ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಇಂದು ದೇವರ ಹೆಸರಿನಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಕೂಡ ಮಾಡಿದ್ದಾರೆ. ಆ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಐದನೇ ಬಾರಿಗೆ ಗೆದ್ದ ಏಕೈಕ ನಾಯಕರಾಗಿ ಹೊರಹೊಮ್ಮಿದ್ದಾರೆ.

ಸಂಸದ ಪ್ರಲ್ಹಾದ್ ಜೋಶಿ ಅವರು ಮೂಲತಃ ಆರ್​ಎಸ್​ಎಸ್​ ಕಾರ್ಯಕರ್ತರು. 1992-94ರ ವರೆಗೆ ನಡೆದ ಈದ್ಗಾ (ಕಿತ್ತೂರು ರಾಣಿ ಚೆನ್ನಮ್ಮ) ಮೈದಾನ ತ್ರಿವರ್ಣ ಧ್ವಜ ಹೋರಾಟ ಸಂಸದ ಪ್ರಲ್ಹಾದ್​ ಜೋಶಿ ಅವರ ರಾಜಕೀಯ ಪ್ರವೇಶಕ್ಕೆ ನಾಂದಿಯಿತು. ಹರ್​ ಘರ್​ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿಯೇ ತೀರುತ್ತೇವೆ ಎಂದು ಆರ್​ಎಸ್​ಎಸ್​ ಮತ್ತು ಬಿಜೆಪಿಯ ಮುಖಂಡರು ಪಣ ತೊಟ್ಟಿದ್ದರು. ಈ ಹೋರಾಟದ ಮುಂದಾಳತ್ವವನ್ನು ಪ್ರಲ್ಹಾದ್​ ಜೋಶಿ, ಬಿಸ್​ ಯಡಿಯೂರಪ್ಪ ವಹಿಸಿಕೊಂಡಿದ್ದರು. ದಿಟ್ಟ ಹೋರಾಟದ ಮೂಲಕ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿಯೇ ಬಿಟ್ಟರು. ಈ ಹೋರಾಟ ಪ್ರಲ್ಹಾದ್​ ಜೋಶಿ ಅವರಿಗೆ ರಾಜಕೀಯ ದಿಕ್ಕು ತೋರಿಸಿತ್ತು.

ಇದನ್ನೂ ಓದಿ: Pralhad Joshi Oath: ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಪ್ರಲ್ಹಾದ್​ ಜೋಶಿ

ಸಂಸದ ಪ್ರಲ್ಹಾದ್​ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಥಮ ಬಾರಿಗೆ 2004ರಲ್ಲಿ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮತ್ತೆ 2009ರಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಕಣಕ್ಕೆ ಇಳಿದು ವಿಜಯಪತಾಕೆ ಹಾರಿಸಿದ್ದರು. ಸಂಸದ ಪ್ರಲ್ಹಾದ್​ ಜೋಶಿ ಅವರು 2014 ರಿಂದ 2016 ರವರೆಗೆ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು.

ಇದನ್ನೂ ಓದಿ: Dharwad Constituency Result 2024: ಧಾರವಾಡ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

ನಂತರ ಮೂರನೇ ಬಾರಿಗೆ 2014ರಲ್ಲಿ ಮತ್ತೊಮ್ಮೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೇ ಕ್ಷೇತ್ರದಿಂದ 2019 ರಲ್ಲಿ ಗೆದ್ದು ನಾಲ್ಕನೇ ಬಾರಿಗೆ ಸಂಸತ್ತು ಪ್ರವೇಶಿಸಿದ ಪ್ರಲ್ಹಾದ್​ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದಾರೆ. ಇದೀಗ 2024ರಲ್ಲೂ ಗೆಲ್ಲುವ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:02 am, Wed, 5 June 24

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು