AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ಹೆಕ್ಟೇರ್ ಪ್ರದೇಶದ 'ಆಲ್ಪಾನ್ಸೋ' ಮಾವು ಸಂಪೂರ್ಣ ನಾಶವಾಗಿದ್ದು, ಕಾಯಿಗಳು ನೆಲಪಾಲಾಗಿವೆ. ರೈತರು ಮಾಡಿದ ಖರ್ಚು ಕೂಡ ಕೈಗೆ ಬಾರದೆ ಕಂಗಾಲಾಗಿದ್ದಾರೆ. ಕೂಡಲೇ ಸರ್ಕಾರ ವೈಜ್ಞಾನಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ಮಾವು ಬೆಳೆಗಾರರು ಆಗ್ರಹಿಸಿದ್ದಾರೆ.

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!
ಆಲಿಕಲ್ಲು ಮಳೆ
ಸಂಜಯ್ಯಾ ಚಿಕ್ಕಮಠ
| Edited By: |

Updated on:Mar 29, 2026 | 8:26 AM

Share

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ.

ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ ರೈತರು, ಈ ಬಾರಿ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಆಲಿಕಲ್ಲು ಮಳೆ ರೈತರ ಆಸೆಯ ಮೇಲೆ ತಣ್ಣೀರು ಎರಚಿದೆ.

ಬಿರುಗಾಳಿಯ ಹೊಡೆತಕ್ಕೆ ಮಾವಿನ ಕಾಯಿಗಳು ಉದುರಿ ಬಿದ್ದಿದ್ದರೆ, ಆಲಿಕಲ್ಲು ಬಿದ್ದಿದ್ದರಿಂದ ಗಿಡದಲ್ಲಿ ಉಳಿದಿರುವ ಕಾಯಿಗಳೂ ಕಲೆಗಳಾಗಿ ಹಾಳಾಗುತ್ತಿವೆ. ಮಾಚಾಪುರ ಗ್ರಾಮದಂತಹ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯ ತೀವ್ರತೆ ಎಷ್ಟಿತ್ತೆಂದರೆ, ಮರದಲ್ಲಿ ಕಾಯಿ ಹೋಗಲಿ, ಒಂದೇ ಒಂದು ಎಲೆಯೂ ಉಳಿಯದಂತೆ ಮರಗಳು ಬೋಳಾಗಿವೆ.

ಇದನ್ನೂ ಓದಿ: ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಹೂ ಬಿಡುವ ಹಂತದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಔಷಧ ಸಿಂಪಡಿಸಿದ್ದ ರೈತರಿಗೆ ಈಗ ಮಾಡಿದ ಖರ್ಚು ಕೂಡ ಕೈಗೆ ಬರದಂತಾಗಿದೆ. ಜಿಲ್ಲೆಯ ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಸಂಕಷ್ಟದಲ್ಲಿರುವ ತಮಗೆ ಸರ್ಕಾರ ಕೂಡಲೇ ವೈಜ್ಞಾನಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಮಾವು ಬೆಳೆಗಾರರು ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Sat, 28 March 26

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು