Dharwad: ನೇಣು ಬಿಗಿದುಕೊಂಡು ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ

ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಡಿಮ್ಹಾನ್ಸ್‌ನಲ್ಲಿ ಸೈಕಿಯಾಟ್ರಿಕ್ ಪಿಜಿ ಮಾಡುತ್ತಿದ್ದ 24 ವರ್ಷದ ಯುವತಿ ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಇಲ್ಲಿ ವ್ಯಾಸಂಗ ಮಾಡಲು ಆಸಕ್ತಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಘಟನೆಯ ಸತ್ಯಾಸತ್ಯತೆ ಹೊರಬರಬೇಕಿದೆ.

Dharwad: ನೇಣು ಬಿಗಿದುಕೊಂಡು ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ
ಸಾಂದರ್ಭಿಕ ಚಿತ್ರ
Edited By:

Updated on: Jan 28, 2026 | 10:32 AM

ಧಾರವಾಡ, ಜನವರಿ 28: ಮೆಡಿಕಲ್​​ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶಿವಮೊಗ್ಗ ಮೂಲದ ಯುವತಿ ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ ಆಕೆಯ ತಂದೆ-ತಾಯಿ ಕೂಡ ಬಂದು ಹೋಗಿದ್ದರು ಎನ್ನಲಾಗಿದೆ.

ಇನ್ನು ಡಾ. ಪ್ರಿಯಾ ಪಾಟೀಲ್ ಜೊತೆ ಪ್ರಜ್ಞಾ ಹಾಸ್ಟೆಲ್​​ ರೂಮ್​​ ಶೇರ್​​ ಮಾಡಿಕೊಂಡಿದ್ದಳು, ಆದರೆ ನಿನ್ನೆ ಈಕೆಯ ಪೋಷಕರು ಬಂದಿರುವ ಕಾರಣ ಪ್ರಿಯಾ ಹೊರಗಡೆಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ರಾತ್ರಿ ಒಬ್ಬಳೇ ರೂಮಿನಲ್ಲಿದ್ದ ಡಾ. ಪ್ರಜ್ಞಾ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಿಗ್ಗೆ ಪ್ರಿಯಾ ರೂಮಿಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿ ವ್ಯಾಸಾಂಗ ಮಾಡಲು ಮನಸ್ಸಿಲ್ಲದ ಹಿನ್ನೆಲೆಯಲ್ಲಿ ಪ್ರಜ್ಞಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,  ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನರಸಾಪುರ ಗ್ರಾಮದ ನಿವಾಸಿ ಯಲ್ಲೇಶ್(42) ಮೃತ ವ್ಯಕ್ತವಾಗಿದ್ದು, ಅಕ್ರಮ ಸಂಬಂಧದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್​ಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.