AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಮನೆಯಲ್ಲಿಯೇ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿದ ಶಾಸಕ: ಕಾಂಗ್ರೆಸ್ ಶಾಸಕನ ನಡೆಗೆ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಮನೆಗೆ ಸ್ಲಂ ಬೋರ್ಡ್ ಅಧಿಕಾರಿಗಳನ್ನ ಕರೆಯಿಸಿಕೊಂಡು ಹಕ್ಕುಪತ್ರ ನೀಡಿದ್ದ ಕಾಂಗ್ರೆಸ್​ ಶಾಸಕನ ವಿರುದ್ದ ಇಂದು(ಫೆ.7) ಬಿಜೆಪಿ ಕಾರ್ಯಕರ್ತರು ಸ್ಲಂ ಬೋರ್ಡ್​ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಧಾರವಾಡ: ಮನೆಯಲ್ಲಿಯೇ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿದ ಶಾಸಕ: ಕಾಂಗ್ರೆಸ್ ಶಾಸಕನ ನಡೆಗೆ ಬಿಜೆಪಿ ಕಾರ್ಯಕರ್ತರ ಆಕ್ರೋಶ
ಕಾಂಗ್ರೆಸ್​ ಶಾಸಕನ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 07, 2023 | 4:34 PM

Share

ಧಾರವಾಡ: ಫೆಬ್ರವರಿ 3 ರಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ(Abbayya Prasad) ತಮ್ಮ ಕ್ಷೇತ್ರದ ಫಲಾನುಭವಿಗಳಿಗೆ ತಮ್ಮ ಮನೆಯಲ್ಲಿಯೇ ಕುಳಿತು ಹಕ್ಕುಪತ್ರ ವಿತರಿಸಿದ್ದರು. ಅಧಿಕಾರಿಗಳನ್ನು ಮನೆಗೆ ಕರೆಯಿಸಿಕೊಂಡು, ಹಕ್ಕುಪತ್ರ ವಿತರಿಸಿದ್ದ ಕಾಂಗ್ರೆಸ್ ಶಾಸಕನ ವಿರುದ್ಧ ಇವತ್ತು ಕಮಲ ಪಡೆ ಗರಂ ಆಗಿತ್ತು. ಸಾರ್ವಜನಿಕವಾಗಿ ನೀಡಬೇಕಾಗಿದ್ದ ದಾಖಲೆಗಳನ್ನು ಹೀಗೇಕೆ ಮನೆಯಲ್ಲಿಯೇ ಕುಳಿತುಕೊಂಡು ನೀಡಿದರು. ಅಲ್ಲದೇ ಉಳಿದ ಯಾವ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಪಾಲಿಕೆ ಸದಸ್ಯರಿಗೂ ಮಾಹಿತಿ ನೀಡದೇ ಇರೋದು ಕೂಡ ಬಿಜೆಪಿಗರನ್ನು ಕೆರಳಿಸಿದೆ. ಇದೇ ಕಾರಣಕ್ಕೆ ಇಂದು ಸ್ಲಮ್ ಬೋರ್ಡ್ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಈ ವೇಳೆ ಹಲವಾರು ಬಾರಿ ಕಾರ್ಯಕರ್ತರು ಕಚೇರಿಯೊಳಗೆ ನುಗ್ಗಲು ಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಪ್ರತಿಭಟನಾಕಾರರಿಗೆ ಪೊಲೀಸರು ಹಲವಾರು ಬಾರಿ ಮನವಿ ಮಾಡಿದರೂ ಕೇಳಲಿಲ್ಲ. ಕೊನೆಗೆ ಸ್ಲಮ್ ಬೋರ್ಡ್ ಕಾರ್ಯನಿರ್ವಾಹಕ ಇಂಜಿನೀಯರ್ ತಪ್ಪೊಪ್ಪಿಗೆ ಪತ್ರ ಬರೆದುಕೊಡಬೇಕೆಂದು ಪಟ್ಟು ಹಿಡಿದರು. ಅಲ್ಲದೇ ಅವರು ಹೊರಗೆ ಬಂದು ಕ್ಷಮೆ ಕೇಳಬೇಕು. ಬಳಿಕ ಈಗಾಗಲೇ ವಿತರಿಸಲಾಗಿರೋ ಹಕ್ಕುಪತ್ರಗಳನ್ನು ಮರಳಿ ಪಡೆದು, ಸಾರ್ವಜನಿಕವಾಗಿ ನೀಡಬೇಕೆಂದು ಪಟ್ಟು ಹಿಡಿದರು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕಾರ್ಯನಿರ್ವಾಹಕ ಇಂಜಿನೀಯರ್ ಎಸ್. ವಿ. ಹಿರೇಮಠ, ಹೊರಗೆ ಬಂದು ನಡೆದ ಘಟನೆಯನ್ನು ಎಲ್ಲರ ಎದುರು ಹೇಳಿದರು. ಅಲ್ಲದೇ 15 ದಿನಗಳೊಳಗಾಗಿ ಹಕ್ಕುಪತ್ರಗಳನ್ನು ಮರಳಿ ಪಡೆಯೋದಾಗಿ ಲಿಖಿತವಾಗಿ ಭರವಸೆ ನೀಡಿದರು.

ಒಂದು ವೇಳೆ ಭರವಸೆ ಸುಳ್ಳಾದರೆ ಮತ್ತೆ ಹೋರಾಟಕ್ಕೆ ಇಳಿಯೋದಾಗಿಯೂ ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ಇದೀಗ ಅಧಿಕಾರಿಗಳಿಗೆ ಈ ಪ್ರಕರಣ ಬಿಸಿ ತುಪ್ಪ ಕುಡಿದಂತಾಗಿದೆ. ಏಕೆಂದರೆ ಅತ್ತ ಶಾಸಕರ ವಿರುದ್ಧವೂ ಮಾತಾಡೋ ಹಾಗಿಲ್ಲ. ಇತ್ತ ಬಿಜೆಪಿ ಕಾರ್ಯಕರ್ತರನ್ನೂ ಕಡೆಗಣಿಸುವಂತಿಲ್ಲ. ಇದೀಗ ಹಕ್ಕುಪತ್ರಗಳನ್ನು ಮರಳಿ ಪಡೆಯೋದೇ ಅಧಿಕಾರಿಗಳ ಪಾಲಿಗೆ ದೊಡ್ಡ ಸಮಸ್ಯೆಯಾಗಲಿದೆ. ಇದನ್ನು ಅವರು ಹೇಗೆ ನಿರ್ವಹಿಸಲಿದ್ದಾರೆ ಅನ್ನೋದನ್ನು ಕಾದು ನೋಡಬೇಕಿದೆ.

ವರದಿ: ನರಸಿಂಹಮೂರ್ತಿ ಪ್ಯಾಟಿ ಟಿವಿ9 ಧಾರವಾಡ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್