AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ

ಇತ್ತೀಚಿನ ದಿನಗಳಲ್ಲಿ ಗ್ರಾಮ ಪಂಚಾಯತ್​ಗಳಿಗೆ ಅನುದಾನವೇ ಬರುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಲೇ ಇದೆ. ಅದು ಕೇಂದ್ರದ್ದೇ ಇರಬಹುದು ಅಥವಾ ರಾಜ್ಯದ್ದೇ ಇರಬಹುದು. ಅನುದಾನ ಸರಿಯಾಗಿ ಬಾರದೇ ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳೇ ನಡೆಯುತ್ತಿಲ್ಲ ಎಂಬುದು ಗ್ರಾಮ ಪಂಚಾಯತ್ ಸದಸ್ಯರ ಮಾತು. ಆದರೆ ಧಾರವಾಡದ ಗ್ರಾಮ ಪಂಚಾಯತ್ ವೊಂದರಲ್ಲಿ ಲಕ್ಷ ಲಕ್ಷ ತೆರಿಗೆ ಸಂಗ್ರಹಿಸಿದ್ದಲ್ಲದೇ ಗ್ರಾಮವನ್ನು ಸಂಪೂರ್ಣ ಸಿಸಿ ಟಿವಿ ಕಣ್ಗಾವಲಿಗೆ ತಂದು ಬಿಡಲಾಗಿದೆ. ಇದರಿಂದಾಗಿ ಗ್ರಾಮದಲ್ಲಿ ಅಕ್ರಮಗಳಿಗೆ, ಅಪರಾಧ ಕೃತ್ಯಗಳಿಗೆ ಕಡಿವಾಣ ಬಿದ್ದಿದೆ.

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ
ಇಡೀ ಮುಮ್ಮಿಗಟ್ಟಿ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು!Image Credit source: tv9
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Feb 03, 2026 | 12:54 PM

Share

ಧಾರವಾಡ, ಫೆಬ್ರವರಿ 3: ಧಾರವಾಡ (Dharawad) ತಾಲೂಕಿನ ಮುಮ್ಮಿಗಟ್ಟಿ ಗ್ರಾಮ ಸುಮಾರು 12 ಸಾವಿರ ಜನಸಂಖ್ಯೆ ಹೊಂದಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡೇ ಇದೆ. ಈ ಗ್ರಾಮದ ಪಕ್ಕ ಹೋಗುವ ವಾಹನಗಳ ಮೂಲಕ ಹೊರಗಿನ ಜನರು ಅಕ್ರಮಗಳನ್ನು ಎಸಗುವುದು ಸಾಮಾನ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್​ನಲ್ಲಿ ಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಗ್ರಾಮ ಪಂಚಾಯತ್​​ಗಳ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡಬೇಕೆಂದರೂ ಅನುದಾನದ ಕೊರತೆ ಎದ್ದು ಕಾಣುತ್ತೆ. ಆದರೆ ಈ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವರ್ಷಕ್ಕೆ 50 ಲಕ್ಷ ರೂಪಾಯಿ ತೆರಿಗೆ ಸಂಗ್ರಹಿಸಿದ ಸಾಧನೆ ಒಂದು ಕಡೆಯಾದರೆ, ಇದೀಗ ಇಡೀ ಗ್ರಾಮದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿರುವುದು ಮತ್ತೊಂದು ಸಾಧನೆ.

ಬಹುತೇಕ ಗ್ರಾಮ ಪಂಚಾಯತ್​ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೆರವೇರಿಸಲು ಅನುದಾನ ಕೊರತೆ ಇರುತ್ತದೆ. ಆದರೆ, ಈ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಿದ ಮೇಲೂ ಉಳಿದ ಹಣದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದರಿಂದಾಗಿ ಗ್ರಾಮದಲ್ಲಿ ಅಹಿತರ ಘಟನೆಗಳು ನಡೆಯುವುದು ನಿಂತು ಹೋಗಿವೆ.

7.5 ಲಕ್ಷ ರೂ.ನಲ್ಲಿ ಹೆಚ್​ಡಿ ಸಿಸಿಟಿವಿ ಕ್ಯಾಮರಾ ಅಳವಡಿಕೆ

ಇದೀಗ ಒಟ್ಟು 22 ಹೈ ಡೆಫಿನಿಶನ್ ಸಿಸಿ ಟಿವಿ ಕ್ಯಾಮರಾಗಳನ್ನು ಗ್ರಾಮದಲ್ಲಿ ಅಳವಡಿಸಲಾಗಿದ್ದು, ಇದಕ್ಕೆ ಸುಮಾರು 7.5 ಲಕ್ಷ ರೂಪಾಯಿ ಖರ್ಚಾಗಿದೆ. ಅಲ್ಲದೇ ಸುಮಾರು ಒಂದು ತಿಂಗಳವರೆಗೆ ಬ್ಯಾಕ್ ಅಪ್ ಇಟ್ಟುಕೊಳ್ಳಬಹುದಾಗಿದೆ. ಎಲ್ಲವನ್ನೂ ಗ್ರಾಮ ಪಂಚಾಯತ್ ಕಚೇರಿಯಿಂದಲೇ ನಿರ್ವಹಿಸಲಾಗುತ್ತಿದೆ. ಅಲ್ಲದೇ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಉಳಿದ ಸದಸ್ಯರೆಲ್ಲ ಸೇರಿ ಸಭೆ ನಡೆಸಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಮೊದಲಿಗೆ ಎಲ್ಲರೂ ಗ್ರಾಮದಲ್ಲಿ ತಿರುಗಾಡಿ ಎಲ್ಲೆಲ್ಲ ಈ ಕ್ಯಾಮೆರಾಗಳನ್ನು ಅಳವಡಿಸಬೇಕು ಅನ್ನೋದನ್ನು ನಿರ್ಧರಿಸಿದರು. ಬಳಿಕ ಗರಗ್ ಠಾಣೆಯ ಪೊಲೀಸರಿಗೂ ಈ ಮಾಹಿತಿಯನ್ನು ನೀಡಲಾಗಿ, ಅವರು ಕೂಡ ಸಲಹೆಗಳನ್ನು ನೀಡಿದರು. ಅದೆಲ್ಲದರ ಪರಿಣಾಮವಾಗಿ ಇಂದು ಇಡೀ ಗ್ರಾಮವೇ ಸಿಸಿ ಟಿವಿ ಕ್ಯಾಮೆರಾಗಳ ಕಣ್ಗಾವಲಿಗೆ ಬಂದಿದೆ.

ಇನ್ನು ಗ್ರಾಮದ ಪಕ್ಕದಲ್ಲಿಯೇ ಸಾಕಷ್ಟು ಕೈಗಾರಿಕೆಗಳಿದ್ದು, ಬೇರೆ ಕಡೆಯಿಂದ ಬಂದಿರುವ ಅನೇಕರು ಇಲ್ಲಿಯೇ ನೆಲೆಸಿದ್ದಾರೆ. ಅಂಥವರೇನಾದರೂ ಅಕ್ರಮ ಕೃತ್ಯ ಎಸಗಿದರೆ ಪತ್ತೆಹಚ್ಚಲು ಈ ಕ್ಯಾಮರಾಗಳ ಮೂಲಕ ಸಾಕಷ್ಟು ಸಹಾಯವಾಗುತ್ತದೆ. ಅಲ್ಲದೇ ಗ್ರಾಮದಲ್ಲಿ ಯುವತಿಯರನ್ನು ಚುಡಾಯಿಸುವುದು, ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿದ್ದವು. ಇದೀಗ ಸಿಸಿ ಟಿವಿ ಕ್ಯಾಮರಾ ಅಳವಡಿಸಿದ್ದರಿಂದಾಗಿ, ಅಂಥ ಕೃತ್ಯಗಳಿಗೆ ಬ್ರೇಕ್ ಬಿದ್ದಿದೆ. ಅಲ್ಲದೆ ಮಹಿಳೆಯರು, ಯುವತಿಯರು, ಮಕ್ಕಳು ನೆಮ್ಮದಿಯಾಗಿ ಓಡಾಡಬಹುದು ಎಂಬುದು ಸ್ಥಳೀಯರ ಅನಿಸಿಕೆ.

ಹಿಟ್ ಆ್ಯಂಡ್ ರನ್ ಪ್ರಕರಣಗಳ ಪತ್ತೆಗೂ ನೆರವಾಗ್ತಿವೆ ಸಿಸಿಟಿವಿ

ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತ ನಡೆಯುವ ಸ್ಥಳಗಳ ಪೈಕಿ ಈ ಗ್ರಾಮವೂ ಒಂದು. ಅಂಥ ಅಪಘಾತಗಳ ಪೈಕಿ ಹಿಟ್ ಆ್ಯಂಡ್ ರನ್ ಕೇಸುಗಳೇ ಹೆಚ್ಚಾಗಿರುತ್ತವೆ. ಇದೀಗ ಕ್ಯಾಮರಾ ಅಳವಡಿಸಿರುವುದರಿಂದ ಅಪಘಾತ ಮಾಡಿ ಪರಾರಿಯಾದವರು ತಪ್ಪಿಸಿಕೊಳ್ಳುವುದು ಸುಲಭವಲ್ಲ.

ಇದನ್ನೂ ಓದಿ: ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ: ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ

ಒಟ್ಟಿನಲ್ಲಿ ಎಷ್ಟೋ ಗ್ರಾಮ ಪಂಚಾಯತ್​ಗಳು ಕುಡಿಯುವ ನೀರನ್ನು ಪೂರೈಸಲು ಹಣವಿಲ್ಲದೇ ಒದ್ದಾಡುವ ಪರಿಸ್ಥಿತಿಯಲ್ಲಿರುವಾಗ ಈ ಗ್ರಾಮ ಪಂಚಾಯತ್ ಅಚ್ಚರಿ ಮೂಡಿಸುವಂಥ ಅಭಿವೃದ್ಧಿಗೆ ಮುಂದಾಗಿರುವುದು ನಿಜಕ್ಕೂ ಅಚ್ಚರಿಯೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ