ಧಾರವಾಡದ ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್! ಮಹಿಳೆಯೊಂದಿಗಿನ ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ?

ಧಾರವಾಡದ ರಾಮಾಪುರ ಅರಣ್ಯದಲ್ಲಿ ಮಾಜಿ ಶಾಸಕರ ಪುತ್ರ ರಾಜು ಬೋಳಶೆಟ್ಟಿಯ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸಿಕ್ಕಿತ್ತು. ಅವರನ್ನು ಯಾರೋ ಕೊಲೆ ಮಾಡಿ ಕಾರಿನ ಸಮೇತ ಸುಟ್ಟು ಹಾಕಿರುವ ಶಂಕೆಯೂ ವ್ಯಕ್ತವಾಗಿತ್ತು. ಆ ಶಂಕೆಯೀಗ ದೃಢಪಟ್ಟಿದೆ. ಮಹಿಳೆಯೊಂದಿಗಿನ ಅನೈತಿಕ ಸಂಬಂಧದ ಹಿನ್ನೆಲೆ ಶಾಸಕನ ಪುತ್ರನ ಕೊಲೆಯಾಗಿದೆ ಎಂದು ತಿಳಿದು ಬಂದಿದ್ದು, ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.

ಧಾರವಾಡದ ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್! ಮಹಿಳೆಯೊಂದಿಗಿನ ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ?
ಧಾರವಾಡದ ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್! ಮಹಿಳೆಯೊಂದಿಗಿನ ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ?
Edited By:

Updated on: Mar 25, 2026 | 2:28 PM

ಧಾರವಾಡ, ಮಾರ್ಚ್​ 25: ಜಿಲ್ಲೆಯಲ್ಲಿ ಮಾಜಿ ಶಾಸಕನ ಪುತ್ರನ ಹತ್ಯೆ ಪ್ರಕರಣ ಭಾರೀ ತಿರುವು ಪಡೆದಿದ್ದು, ಘಟನೆ ಪೂರ್ವನಿಯೋಜಿತ ಕೊಲೆ ಎಂಬ ಶಂಕೆ ಮತ್ತಷ್ಟು ಗಾಢವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವ ಧಾರವಾಡ (Dharwad) ತಾಲೂಕಿನ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿತ್ತು.  ಈ ಪ್ರಕರಣದಲ್ಲಿ ಮೂವರಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಗೆ ಸಾಲದ ರೂಪದಲ್ಲಿ ಹಣ ನೀಡಿದ್ದ ರಾಜು

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರಾಜು ಬೋಳಶೆಟ್ಟಿ, ದೈಹಿಕ ಸಂಪರ್ಕಕ್ಕೆ ಬಂದಾಗ ಆಕೆಗೆ ಹಣ ನೀಡುತ್ತಿದ್ದ. ಸಾಲದ ರೂಪದಲ್ಲಿಯೇ ಮಹಿಳೆಗೆ ಹಣ ನೀಡುತ್ತದ್ದ ರಾಜು, 2 ಲಕ್ಷ ರೂ. ಗೂ ಹೆಚ್ಚು ಹಣ ಕೊಟ್ಟಿದ್ದ. ಇದೇ ವಿಚಾರಕ್ಕೆ ಮಹಿಳೆ ಹಾಗೂ ರಾಜು ನಡುವೆ ಮನಸ್ತಾಪ ಆಗಿತ್ತು. ನಿನ್ನೆಯೂ ಆತ ದೈಹಿಕ ಸಂಪರ್ಕಕ್ಕಾಗಿ ಹೊಲಕ್ಕೆ ಮಹಿಳೆಯನ್ನು ಕರೆದಿದ್ದ. ಇದೇ ವೇಳೆ ಮಹಿಳೆ, ಆಕೆಯ ಮಗ ಹಾಗೂ ಆಕೆಯ ಪ್ರಿಯಕರ ಸೇರಿ ಈ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ

ಶವವನ್ನು ಕಾರು ಸಮೇತ ಸುಟ್ಟ ಆರೋಪಿಗಳು

ರಾಜು ಬೋಳಶೆಟ್ಟಿಯ ಕಾರಿನಲ್ಲೇ ರಾಮಾಪುರ ಅರಣ್ಯಕ್ಕೆ ಆತನ ಶವವನ್ನು ತಂದ ಈ ಮೂವರು, ಹಿಂದಿನ ಸೀಟಿನಲ್ಲಿ ಶವವಿಟ್ಟು, ತಾವು ತಂದಿದ್ದ 10 ಲೀ. ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬಳಿಕ ಮೂವರೂ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ಕೆಲವೇ ಘಂಟೆಗಳಲ್ಲಿ ಮೂವರನ್ನೂ ಸೆರೆ ಹಿಡಿಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us