Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ್ ಹೋರಾಟಕ್ಕೆ ಕೊನೆಗೂ ಜಯ

2016ರಲ್ಲಿ ಪೊಲೀಸ್ ಕುಟುಂಬದ ಸದಸ್ಯರೊಂದಿಗೆ ಉಗ್ರ ಹೋರಾಟಕ್ಕೆ ಮುಂದಾಗಿದ್ದ ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ್ ಹಾಗೂ ಗುರುಪಾದಯ್ಯ ಹೊಂಗಲ್ ಮಠ ಅವರನ್ನು ರಾಜ್ಯ ಸರ್ಕಾರದ ರಾಜದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರು ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ್ ಹೋರಾಟಕ್ಕೆ ಕೊನೆಗೂ ಜಯ
ಹೋರಾಟಗಾರ ಬಸವರಾಜ ಕೊರವರ್
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 24, 2023 | 9:24 PM

ಧಾರವಾಡ, ನವೆಂಬರ್​​​ 24: ರಾಘವೇಂದ್ರ ಔರಾದಕರ್ ವರದಿ ಜಾರಿಗೆ ಆಗ್ರಹಿಸಿ 2016ರಲ್ಲಿ ಪೊಲೀಸ್ ಕುಟುಂಬದ ಸದಸ್ಯರೊಂದಿಗೆ ಉಗ್ರ ಹೋರಾಟಕ್ಕೆ ಮುಂದಾಗಿದ್ದ ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ್ (Basavaraja korwar) ಹಾಗೂ ಗುರುಪಾದಯ್ಯ ಹೊಂಗಲ್ ಮಠ ಅವರಿಗೆ ಹೈಕೋರ್ಟ್ ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರದ ರಾಜದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರು ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಅರ್ಜಿದಾರರ ಪರ ದೀಪಕ ಶೆಟ್ಟಿ ವಾದಿಸಿದ್ದರು.

ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷಾಂತರ ಪೊಲೀಸರಿಗೆ ವಾರದ ರಜೆ, ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕೊಡುವಂತಹ ಅಂಶಗಳನ್ನು ಹೊಂದಿರುವ ರಾಘವೇಂದ್ರ ಔರಾದಕರ್ ವರದಿ ಜಾರಿಗೆ ಆಗ್ರಹಿಸಿ ಹೋರಾಟ ಮಾಡಲಾಗಿತ್ತು.

ಅಂದು ಇವರ ಹೋರಾಟವನ್ನು ಹತ್ತಿಕ್ಕೋ ಉದ್ದೇಶದಿಂದ ಪೊಲೀಸರು ಕಲಾಭವನ ಮೈದಾನಕ್ಕೆ ಬರುವ ಮುನ್ನವೇ ಬಂಧಿಸಿದ್ದರು. ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇವರ ಮೇಲೆ ರಾಜದ್ರೋಹದ ಪ್ರಕರಣ ದಾಖಲಿಸಿ 86 ದಿನಗಳ ಕಾಲ ಇವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ: ಧಾರವಾಡ: ತುರ್ತು ಕಾಮಗಾರಿ, ಈ ಎಲ್ಲಾ ಭಾಗದಲ್ಲಿ ನವೆಂಬರ್ 26 ರಂದು ವಿದ್ಯುತ್ ವ್ಯತ್ಯಯ

ಕೊನೆಗೂ ಸರಕಾರದ ವಿರುದ್ದ ಜೈಲಿನಲ್ಲಿಯೇ ಹಲವು ದಿನಗಳ ಕಾಲ ಉಪವಾಸ ಸತ್ಯಾಗ್ರಹವನ್ನು ಕೈಗೊಂಡು ಸರಕಾರಕ್ಕೆ ಸೆಡ್ಡು ಹೊಡೆದಿದ್ದರು. ಕೊನೆಗೆ ಮನವೊಲಿಕೆ ನಂತರ ಹೋರಾಟ ಮೊಟಕುಗೊಳಿಸಿದ್ದರು.

ಇದಾದ ಬಳಿಕ 86 ದಿನಗಳ ಬಳಿಕ ಜಾಮೀನು ಮೇಲೆ ಹೊರಬಂದಿದ್ದರು. ಎಂಟು ವರ್ಷಗಳ ಕಾಲ ಸುದೀರ್ಘ ಕಾನೂನು ಹೋರಾಟದ ನಂತರ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ಆದೇಶದ ವಿರುದ್ದ ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ: ಮತ್ತೆ ಸುದ್ದಿಗೆ ಬಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶೋ ರೂಮ್ ವಿವಾದ: ಲೋಕಾಯುಕ್ತ ಪೊಲೀಸರಿಗೇ ತಪ್ಪು ಮಾಹಿತಿ ನೀಡಿತಾ ಹು-ಧಾ ಪ್ರಾಧಿಕಾರ?

ಟಿವಿ-9 ಡಿಜಿಟಲ್ ಜೊತೆ ಮಾತನಾಡಿದ ಬಸವರಾಜ ಕೊರವರ್, ನಾನು ಹೈಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ. ಪೊಲೀಸರ ನ್ಯಾಯಯುತ ಬೇಡಿಕೆಗಳ ಹೋರಾಟಕ್ಕೆ ತಡವಾಗಿಯಾದರೂ ಜಯ ದೊರಕಿದೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ರಾಘವೇಂದ್ರ ಔರಾದಕರ್ ವರದಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿ ಪೊಲೀಸರ ವಿವಿಧ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!