ಧಾರವಾಡ: ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೆ ಮೂವರು ಯುವಕರಿಂದ ಹಲ್ಲೆ

ಮೂವರು ಯುವಕರಿಂದ ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹೊಸ ಬಸ್ ನಿಲ್ದಾಣ ಬಳಿ ನಡೆದಿದೆ. ಟ್ರ್ಯಾಕ್ಟರ್​ ಹಿಂದೆ ತೆಗೆದುಕೊಳ್ಳಲು ಒಪ್ಪದಿದ್ದಾಗ ಇಬ್ಬರು ಚಾಲಕರ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಬಸ್​ ಚಾಲಕನ​ ಮೇಲೆ ಹಲ್ಲೆ ಟ್ರ್ಯಾಕ್ಟರ್ ಚಾಲಕ ಸೇರಿದಂತೆ ಮೂವರಿಂದ ಹಲ್ಲೆ ಮಾಡಲಾಗಿದೆ.

ಧಾರವಾಡ: ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೆ ಮೂವರು ಯುವಕರಿಂದ ಹಲ್ಲೆ
ಟ್ರ್ಯಾಕ್ಟರ್, ಕೆಎಸ್​ಆರ್​ಟಿಸಿ ಬಸ್​ ಚಾಲಕ ಸಂತೋಷ್ ಚುಳಕಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 08, 2023 | 4:40 PM

ಧಾರವಾಡ, ಸೆಪ್ಟೆಂಬರ್​ 8: ಮೂವರು ಯುವಕರಿಂದ ಕೆಎಸ್​ಆರ್​ಟಿಸಿ ಬಸ್ (KSRTC bus)​ ಚಾಲಕನ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹೊಸ ಬಸ್ ನಿಲ್ದಾಣ ಬಳಿ ನಡೆದಿದೆ. ಸಂತೋಷ್ ಚುಳಕಿ ಹಲ್ಲೆಗೊಳಗಾದ ಕೆಎಸ್​ಆರ್​ಟಿಸಿ ಬಸ್​ ಚಾಲಕ. ಇಕ್ಕಟ್ಟಾದ ರಸ್ತೆಯಲ್ಲಿ ಬಸ್​ ತೆರಳುವಾಗ ಎದುರಿಗೆ ಟ್ರ್ಯಾಕ್ಟರ್​​ ಬಂದಿದೆ. ಸ್ವಲ್ಪ ಹಿಂದೆ ತೆಗೆದುಕೊಳ್ಳುವಂತೆ ಸಂತೋಷ್ ಮನವಿ ಮಾಡಿದ್ದು, ಹಿಂದೆ ಸರಿಯಲು ಒಪ್ಪದಿದ್ದಾಗ ಇಬ್ಬರು ಚಾಲಕರ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಬಸ್​ ಚಾಲಕನ​ ಮೇಲೆ ಹಲ್ಲೆ  ಟ್ರ್ಯಾಕ್ಟರ್ ಚಾಲಕ ಸೇರಿದಂತೆ ಮೂವರಿಂದ ಹಲ್ಲೆ ಮಾಡಲಾಗಿದೆ. ಗಾಯಾಳು ಬಸ್ ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೈಟೆನ್ಷನ್ ಟವರ್​ ಏರಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶವಾಗಿ ಸಾವು

ಬೆಂಗಳೂರು ಗ್ರಾಮಾಂತರ: ಹೈಟೆನ್ಷನ್ ಟವರ್​ ಏರಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋನೆನಹಳ್ಳಿ ಬಳಿ ನಡೆದಿದೆ. ಅಮೃತ್(25) ಮೃತ ವ್ಯಕ್ತಿ. ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾರು ಮತ್ತು ಬೈಕ್ ನಡುವೆ ಅಪಘಾತ: ಯುವಕ ಸಾವು

ಮೈಸೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕ ಸಾವನ್ನಪ್ಪಿರುವಂತಹ ಘಟನೆ ಹುಣಸೂರು ನಗರದ ಮಾರಿಗುಡಿ ಬೀದಿಯ ಮಂಜುನಾಥ್ (26) ಮೃತ ಯುವಕ. ಮಂಜುನಾಥ್ ಹುಣಸೂರು ಎಚ್​ಡಿಎಫ್​ಸಿ ಬ್ಯಾಂಕ್ ಉದ್ಯೋಗಿ ಆಗಿದ್ದ. ಮಂಜುನಾಥ್ ತನ್ನ ತಂಗಿ ಮಗಳು ಪೂರ್ವಿಕಾಳೊಂದಿಗೆ ಮೈಸೂರು ಕಡೆಯಿಂದ ಮಡಿಕೇರಿ ಕಡೆಗೆ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು: ಯಲಗಲವಾಡಿ ಕೆರೆಯಲ್ಲಿ ಮುಳುಗಿ ತಾಯಿ, ಮಗ ಸಾವು

ಅಪಘಾತದಲ್ಲಿ ಗಾಯಗೊಂಡಿದದ್ದ ಮಂಜುನಾಥ್ ಮತ್ತು ಪೂರ್ವಿಕಾ ಇಬ್ಬರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾನೆ. ಪೂರ್ವಿಕಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಕಳ್ಳತನ ಹಾಗೂ ಬೈಕ್ ಕಳವು ಮಾಡುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಹಾಗೂ ಬೈಕ್ ಕಳವು ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ವಿನೋದ್ ಹಾಗೂ ಪ್ರಶಾಂತ್ ಬಂಧಿತರು. 5.39 ಲಕ್ಷ ನಗದು, ಮೂರು ದ್ವಿಚಕ್ರ ವಾಹನ, 50 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ವಿವಿಧ 8 ಪ್ರಕರಣಗಳಲ್ಲಿ ಬಂಧಿತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮೊದಲ ಪ್ರಿಯಕರನನ್ನು ಬಿಟ್ಟು ಮತ್ತೊಬ್ಬನ ಸಂಗಡ ಮಾಡಿದ್ದಕ್ಕೆ ತಾಯಿ ಮಗುವಿನ ಹತ್ಯೆ

ಮನೆಗಳವು, ದರೋಡೆ, ಡಕಾಯಿತಿ, ಮಾದಕ ವಸ್ತು ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಾರೆಂಟ್ ಇದ್ದರೂ ಅಸಾಮಿಗಳು ತಲೆಮರೆಸಿಕೊಂಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಡಿಯೋ ಅಲ್ಲೂರಿ ಜಿಲ್ಲೆಯಲ್ಲಿ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ ಅಲ್ಲೂರಿ ಜಿಲ್ಲೆಯಲ್ಲಿ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು