ಧಾರವಾಡದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್: ಫೋನ್ ಪೇ ಮೂಲಕ ಲಂಚ ಪಡೆದ 3 ಹೆಡ್ ಕಾನ್‌ಸ್ಟೇಬಲ್‌ಗಳು ಹಾಗೂ ಹೋಮ್‌ಗಾರ್ಡ್ ಬಂಧನ

ಧಾರವಾಡದಲ್ಲಿ ಫೋನ್ ಪೇ ಮೂಲಕ ಮರಳು ಸಾಗಣೆ ಲಾರಿ ಚಾಲಕನಿಂದ ₹30,000 ಲಂಚ ಪಡೆದ ಆರೋಪದ ಮೇಲೆ ಮೂವರು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು ಒಬ್ಬ ಗೃಹರಕ್ಷಕ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಲಾರಿ ಬಿಡಲು ಹಣ ಪಡೆದಿದ್ದ ಈ ನಾಲ್ವರ ಡಿಜಿಟಲ್ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಭ್ರಷ್ಟಾಚಾರ ನಿರ್ಮೂಲನೆಗೆ ಲೋಕಾಯುಕ್ತ ಕೈಗೊಂಡ ಕ್ರಮ ಇದು.

ಧಾರವಾಡದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್: ಫೋನ್ ಪೇ ಮೂಲಕ ಲಂಚ ಪಡೆದ 3 ಹೆಡ್ ಕಾನ್‌ಸ್ಟೇಬಲ್‌ಗಳು ಹಾಗೂ ಹೋಮ್‌ಗಾರ್ಡ್ ಬಂಧನ
ಹಸನ್ ಸಾಬ್ ನದಾಫ್ ಮತ್ತು ಇಮಾಮ್ ಅತ್ತಾರ್
Edited By:

Updated on: Aug 28, 2026 | 4:36 PM

ಧಾರವಾಡ, ಆ.28: ಮರಳು ಸಾಗಣೆ ಮಾಡುವ ಲಾರಿ ಚಾಲಕನಿಂದ ಫೋನ್ ಪೇ (PhonePe) ಮೂಲಕ 30,000 ರೂ. ಲಂಚ ಪಡೆದ ಆರೋಪದಡಿಯಲ್ಲಿ ಮೂವರು ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ಗಳು ಹಾಗೂ ಓರ್ವ ಗೃಹರಕ್ಷಕ ಸಿಬ್ಬಂದಿಯನ್ನು (Home Guard) ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ನಾಲ್ವರು ಆರೋಪಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೊಪ್ಪಳ ಮೂಲದ ಲಾರಿ ಚಾಲಕ ಹನುಮಂತ ಎಂಬುವವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಮರಳು ಲಾರಿ ಬಿಡಲು ತಮ್ಮಿಂದ ಲಂಚ ಪಡೆಯಲಾಗಿದೆ ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ಯಾವುದೇ ಭಯವಿಲ್ಲದೆ ಡಿಜಿಟಲ್ ರೂಪದಲ್ಲಿ ಅಂದರೆ ಫೋನ್ ಪೇ ಮೂಲಕ 30,000 ರೂ. ಲಂಚದ ಹಣವನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ 8.89 ಕೋಟಿ ರೂ. ಹಗರಣ: ‘ಟೆಂಪಲ್ ರನ್’ ಮಾಡುತ್ತಿದ್ದ ಪ್ರಮುಖ ರೂವಾರಿ ಸೇರಿ ಮೂವರ ಬಂಧನ

ಬಂಧಿತ ಆರೋಪಿಗಳಿಂದ ಲಂಚದ ಹಣ ಪಡೆದಿದ್ದ ಆನ್‌ಲೈನ್ ಡಿಜಿಟಲ್ ದಾಖಲೆಗಳು ಹಾಗೂ ನಾಲ್ವರ ಮೊಬೈಲ್‌ಗಳನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಧಾರವಾಡ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹಸನ್‌ಸಾಬ ನದಾಫ್, ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಇಮಾಮ್ ಅತ್ತಾರ್, ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಗಿರೀಶ ಮನ್ಸೂರು, ಹೋಮ್‌ಗಾರ್ಡ್ ಸಿಬ್ಬಂದಿ ಇಕ್ಬಾಲ್ ನದಾಫ್ ಬಂಧಿತ ಅಧಿಕಾರಿಗಳು ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us