ಧಾರವಾಡದಲ್ಲಿ ಎಗ್ ರೈಸ್, ಗೋಬಿ ಮಂಚೂರಿ ಆಸೆ ತೋರಿಸಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು

ಬಾಲಕಿಯನ್ನು ಕೌನ್ಸಿಲಿಂಗ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಮಕ್ಕಳ‌ ರಕ್ಷಣಾ ಘಟಕದಿಂದ ಬಾಲಕಿಯನ್ನು ರಕ್ಷಿಸಲಾಗಿದೆ.

ಧಾರವಾಡದಲ್ಲಿ ಎಗ್ ರೈಸ್, ಗೋಬಿ ಮಂಚೂರಿ ಆಸೆ ತೋರಿಸಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು
ಅತ್ಯಾಚಾರ ತಡೆಯೋಣ

ಧಾರವಾಡ: ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿ ಮೇಲೆ ಎಗ್ ರೈಸ್ ಹಾಗೂ ಗೋಬಿ ಮಂಚೂರಿ ತಿನ್ನಿಸುವ ಆಸೆ ತೋರಿಸಿ ಯುವಕನೋರ್ವ ಅತ್ಯಾಚಾರ ನಡೆಸಿದ ಅಮಾನವೀಯ ಧಾರವಾಡದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆಯೇ ಅತ್ಯಾಚಾರ ನಡೆದಿದ್ದು, ಬಾಲಕಿಯನ್ನು ಕೌನ್ಸಿಲಿಂಗ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಮಕ್ಕಳ‌ ರಕ್ಷಣಾ ಘಟಕದಿಂದ ಬಾಲಕಿಯನ್ನು ರಕ್ಷಿಸಲಾಗಿದೆ. ಕೌನ್ಸಲಿಂಗ್ ಬಳಿಕ ದುರ್ಘಟನೆ ಬೆಳಕಿಗೆ ಬಂದ ನಂತರ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಅಧಿಕಾರಿ ಕಮಲಾ ಅವರು ದೂರು ದಾಖಲಿಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ದಿನವೇ ಈ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆಯ ಹೇಳಿಕೆ ದಾಖಲು
ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಬುಧವಾರ (ಸೆಪ್ಟೆಂಬರ್ 22) 2ನೇ ಜೆಎಂಎಫ್ಸಿ ನ್ಯಾಯಾಧೀಶರ ಎದುರು ದಾಖಲಿಸಲಾಗಿದೆ. ಸೆಕ್ಷನ್ 164 ಅಡಿಯಲ್ಲಿ ಯುವತಿಯ ಹೇಳಿಕೆಯನ್ನು ದಾಖಲಿಸಲಾಗಿದ್ದು, ಸುಮಾರು 45 ನಿಮಿಷಗಳ ಕಾಲ ಯುವತಿ ಹೇಳಿಕೆ ನೀಡಿದ್ದಾಳೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ ಸೆಪ್ಟೆಂಬರ್ 7ರಂದು 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ಮೈಸೂರಿನ ಮೂರನೇ ಜೆಎಮ್​ಎಫ್​ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಹಾಜರುಪಡಿಸಿದ್ದರು.  ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದರು. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ.

ಜತೆಗೆ ಮೈಸೂರಿನ 3ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಇತರ 6 ಆರೋಪಿಗಳನ್ನು  ಪೊಲೀಸರು ಹಾಜರುಪಡಿಸಿದ್ದರು.

ಇದನ್ನೂ ಓದಿ:
ಪಾನಮತ್ತ ಯುವತಿ ಮೇಲೆ ಕ್ಯಾಬ್​ ಚಾಲಕನಿಂದ ಅತ್ಯಾಚಾರ ಆರೋಪ; ಕ್ಯಾಬ್ ಚಾಲಕನ ಬಂಧನ

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮೈಸೂರು ಅತ್ಯಾಚಾರ ಪ್ರಕರಣ: ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್

(Dharwad Rape on 14 Year minor Girl Complaint registered)

Read Full Article

Click on your DTH Provider to Add TV9 Kannada