ಪ್ರದೀಪ್ ಶೆಟ್ಟರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ: ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ

ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ಕಸರತ್ತು ನಡೆಸುತ್ತಿದೆ. ಸಿಟಿ ರವಿ ಅವರನ್ನು ಆಯ್ಕೆ ಮಾಡಲು ಪ್ಲಾನ್ ಮಾಡಲಾಗಿದೆ ಎನ್ನಲಾಗುತ್ತಿದೆ. ಇದನ್ನೇ ಮುಂದಿಟ್ಟುಕೊಂಡು, ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದ್ದಾರೆ. ಇವರ ಹೇಳಿಕೆಗೆ ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರು ಅಸಮಾಧಾನ ಹೊರಹಾಕಿದ್ದಾರೆ.

ಪ್ರದೀಪ್ ಶೆಟ್ಟರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ: ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ
ಪ್ರದೀಪ್ ಶೆಟ್ಟರ್ ಮತ್ತು ಬಸವರಾಜ ಕುಂದಗೋಳ ಮಠ
Edited By: Rakesh Nayak Manchi

Updated on: Sep 03, 2023 | 8:04 PM

ಹುಬ್ಬಳ್ಳಿ, ಸೆ.3: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ ಎಂಬ ವಿಧಾನಪರಿಷತ್​ನ ಬಿಜೆಪಿ ಸದಸ್ಯ ಪ್ರದೀಶ್ ಶೆಟ್ಟರ್ ಹೇಳಿಕೆಗೆ ಅಸಮಾಧಾನ ಹೊರಹಾಕಿದ ಧಾರವಾಡ (Dharwad) ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳ ಮಠ (Basavaraj Kundgolmath), ಪ್ರದೀಶ್ ಶೆಟ್ಟರ್ (Pradeep Shettar)​ ಹೇಳಿಕೆ ಖಂಡನೀಯ. ಬಿಜೆಪಿಯಿಂದ ನೀವು ಎರಡು ಬಾರಿ ವಿಧಾನಪರಿಷತ್​ಗೆ ಆಯ್ಕೆಯಾಗಿದ್ದೀರಿ. ನಿಮ್ಮಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದರು.

ಮಾರ್ಗದರ್ಶನ ಮಾಡಬೇಕೇ ಹೊರತು ಈ ರೀತಿ ಹೇಳಿಕೆ ಕೊಡಬಾರದು. ಭಾರತೀಯ ಜನತಾ ಪಕ್ಷದಲ್ಲಿ ಎಂದಿಗೂ ನಿಮ್ಮನ್ನು ಕಡೆಗಣನೆ ಮಾಡಿಲ್ಲ. ಕಾರ್ಯಕರ್ತರಿಂದ ಕೇಂದ್ರ ನಾಯಕರವರೆಗೂ ಗಣ್ಯರೆಂದು ಅರಿಯಬೇಕು. ಗ್ರಾಮ ಪಂಚಾತ್ ಅಧ್ಯಕ್ಷ, ಉಪಾಧ್ಯಕ್ಷರ ಸನ್ಮಾನ ಕಾರ್ಯಕ್ರಮಕ್ಕೆ ಕರೆದಿರಲಿಲ್ಲ. ನಿಮ್ಮನ್ನು ಕರೆಯದಿದ್ದಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸಲು ನಾವು ಸಿದ್ಧ. ಆದರೆ, ಬಿಜೆಪಿ ಚಿಹ್ನೆ ಮೇಲೆ ಎರಡು ಬಾರಿ ಎಂಎಲ್​ಸಿ ಆಗಿ ಈ ರೀತಿ ಮಾತಾಡುವುದು ತಪ್ಪು ಎಂದರು.

ಇದನ್ನೂ ಓದಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಫೋಟ: ನಾಯಕತ್ವ, ಉಸ್ತುವಾರಿ ಬದಲಾವಣೆಗೆ ಪಟ್ಟು

ಜಗದೀಶ್ ಶೆಟ್ಟರ್ ಆರು ಬಾರಿ ಶಾಸಕರಾಗಿದ್ದೂ ಬಿಜೆಪಿ ಚಿಹ್ನೆಯಿಂದಲೇ. ಜಗದೀಶ್ ಶೆಟ್ಟರ್ ವೈಯಕ್ತಿಕ ವರ್ಚಸ್ಸಿನಿಂದ ಆರು ಬಾರಿ ಶಾಸಕರಾಗಿರಲಿಲ್ಲ. ಧಾರವಾಡ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಮೂರರಲ್ಲಿ ಲಿಂಗಾಯತ ಶಾಸಕರೇ ಇದ್ದಾರೆ. ನೀವು ಜನ ಪ್ರತಿನಿಧಿಯಾಗಿ ಮಾರ್ಗದರ್ಶನ ಮಾಡಬೇಕೆ ಹೊರತು,ಈ ರೀತಿ ಹೇಳಿಕೆ ಕೊಡಬಾರದು ಎಂದು ಬಸವರಾಜ ಕುಂದಗೋಳ ಅವರು ಮಾಧ್ಯಮ ಪ್ರಕರಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us