ಧಾರವಾಡದಲ್ಲಿ ಸರಣಿ ಅಪಘಾತ; ಅದೃಷ್ಟವಶಾತ್ ಸ್ಥಳದಲ್ಲಿದ್ದ ಎಲ್ಲರೂ ಬಚಾವ್
ಶನಿವಾರ ರಾಜ್ಯದಲ್ಲಿ ನಡೆದ ಕೆಲವು ಅಪಘಾತ ಮತ್ತು ಅಪರಾಧಗಳ ಸುದ್ದಿ ಇಲ್ಲಿವೆ.
ಧಾರವಾಡ: ಲಾರಿ ಚಕ್ರ ಬೇರ್ಪಟ್ಟು ಸರಣಿ ಅಪಘಾತ ಸಂಭವಿಸಿದ ಘಟನೆ ಧಾರವಾಡ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ್ದ ಲಾರಿಯೊಂದು ಕಾರು ಮತ್ತು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. ಅದೃಷ್ಟವಶಾತ್ ಸರಣಿ ಅಪಘಾತ ಸ್ಥಳದಲ್ಲಿದ್ದ ಎಲ್ಲರೂ ಬಚಾವ್ ಆಗಿದ್ದು ಯಾರಿಗೂ ಹಾನಿ ಉಂಟಾಗಿಲ್ಲ. ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾರಿನ ಇಂಜಿನ್‌ನಲ್ಲಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು ಕಲಬುರಗಿ: ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರೊಂದು ಹೊತ್ತಿ ಉರಿದ ಘಟನೆ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯ ಮುಂದೆ ನಡೆದಿದೆ. ಪ್ರಯಾಣಿಕರು ತಕ್ಷಣವೇ ಕಾರಿನಿಂದ ಇಳಿದು ಜೀವ ಉಳಿಸಿಕೊಂಡಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಖಾಲಿ ಜಾಗದಲ್ಲಿ ಮದ್ಯ ಸೇವಿಸಿ ಜೂಜಾಡುತ್ತಿದ್ದವರು ವಶಕ್ಕೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಖಾಲಿ ಜಾಗದಲ್ಲಿ ಮದ್ಯ ಸೇವಿಸಿ ಜೂಜಾಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಈ ಮುನ್ನ ಸ್ಥಳಿಯರು ಪೋಲಿ ಪುಂಡರ ಹಾವಳಿ ಬಗ್ಗೆ ಐಜಿಪಿಗೆ ದೂರು ನೀಡಿದ್ದರು. ಹೀಗಾಗಿ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಸೂಚನೆ ಮೇರೆಗೆ ದಾಳಿ ನಡೆಸಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದವರನ್ನು ವಶಪಡಿಸಿಕೊಳ್ಳಲಾಗಿದೆ.
ವೃದ್ಧೆಯ ಸರ ಕಳವು ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೇವಗಾನಹಳ್ಳಿಯಲ್ಲಿ ಕಳ್ಳನೋರ್ವ ವೃದ್ಧೆಯ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ನಡೆದಿದೆ. ವೆಂಕಟಲಕ್ಷ್ಮಮ್ಮ ಎಂಬುವವರ 40 ಗ್ರಾಂ ಚಿನ್ನದ ಸರ ಕಳವಾಗಿದೆ. ಮಂಕಿ ಕ್ಯಾಪ್ ಧರಿಸಿ ಬಂದಿದ್ದ ಸರಗಳ್ಳ ಕೃತ್ಯವೆಸಗಿದ್ದು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
Indian Space Association: ಭಾರತೀಯ ಬಾಹ್ಯಾಕಾಶ ಒಕ್ಕೂಟಕ್ಕೆ ಅ. 11ಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ
Published On - 10:33 pm, Sat, 9 October 21