ಧಾರವಾಡ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೇದಾರ್

ಪ್ರತ್ಯೇಕ ಘಟನೆ: ಒಂದೆಡೆ ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದರೆ, ಮತ್ತೊಂದೆಡೆ ಮಂಗಳೂರು ತಾಲೂಕು ಕಚೇರಿಯಲ್ಲಿ 4 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಭೂಮಾಪಕ ಅಧಿಕಾರಿ ಶೀತಲ್ ರಾಜ್ ಲೋಕಾಯುಕ್ತ ಖೆಡ್ಡಾಗೆ ಬಿದ್ದಿದ್ದಾರೆ.

ಧಾರವಾಡ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೇದಾರ್
ಶಿರಸ್ತೇದಾರ್
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 07, 2024 | 6:12 PM

ಧಾರವಾಡ, ಮಾ.07: ಜಿಲ್ಲೆಯ ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಭೂ ನ್ಯಾಯ ಮಂಡಳಿ ಆದೇಶದಂತೆ ಖಾತೆ ಬದಲಿಸಿಕೊಡಲು ರೈತ ಮಲ್ಲಿಕಾರ್ಜುನ ಕುರುಬರ ಎಂಬಾತನ ಬಳಿ 45 ಸಾವಿರ ರೂ. ಲಂಚ ಪಡೆಯುವಾಗ ಕಲಘಟಗಿ ತಹಶೀಲ್ದಾರ್ ಕಚೇರಿ ಶಿರಸ್ತೆದಾರ ಸುರೇಶ್ ಅಡವಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾನೆ. ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

4ಸಾವಿರ ರೂ. ಲಂಚ ಸ್ವೀಕರಿಸುವಾಗ ಭೂಮಾಪಕ ಲೋಕಾಯುಕ್ತ ಬಲೆಗೆ

ದಕ್ಷಿಣ ಕನ್ನಡ: ತಾಲೂಕು ಕಚೇರಿಯಲ್ಲಿ 4 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಭೂಮಾಪಕ ಶೀತಲ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನಿನ ಪೋಡಿ ಮಾಡಿಕೊಡಲು ಬರೊಬ್ಬರಿ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂಮಾಪಕ ಶೀತಲ್ ರಾಜ್, ಇಂದು ರೈತನಿಂದ ಇಂದು 4 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಎಸ್​ಪಿ ಸೈಮನ್, DySP ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ರೆಡ್​ಹ್ಯಾಂಡ್​ ಆಗಿ ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ:ಬಳ್ಳಾರಿಯಲ್ಲಿ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಇಂಜಿನಿಯರ್ 

ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕ ಲೋಕಾ ಬಲೆಗೆ

ಶಿವಮೊಗ್ಗ: ಜಿಲ್ಲೆಯ ಸೊರಬ ಪುರಸಭೆ ಕಂದಾಯ ನಿರೀಕ್ಷಕ 40 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದಿದ್ದರು. ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಗುರುವಯ್ಯ ಲೋಕಾ ಬಲೆ ಬಿದ್ದ ಅಧಿಕಾರಿ. ಲೋಕಾಯುಕ್ತ ಡಿವೈಎಸ್​​ಪಿ ಪಿ.ಉಮೇಶ್​​ ಈಶ್ವರ ನಾಯ್ಕ್​​ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಖಾಲಿ ನಿವೇಶನಕ್ಕೆ ಸಂಬಂಧಿಸಿದ ಕೆಲಸ ಮಾಡಿಕೊಡಲು ಪ್ರತಿಭಾ ಎಂ.ನಾಯ್ಕ ಎಂಬುವರ ಬಳಿ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ