ಮನೆಯಲ್ಲೇ ಅನಸ್ತೇಶಿಯಾ ತಜ್ಞನ ಭೀಕರ ಕೊಲೆ: ಪತ್ನಿಯಿಂದಲೇ ದುರಂತ ಅಂತ್ಯ ಕಂಡ ವೈದ್ಯ?

Dharwad News: ಧಾರವಾಡದ ಅಪಾರ್ಟ್‌ಮೆಂಟ್‌ನಲ್ಲಿ ಚಿರಾಯು ಆಸ್ಪತ್ರೆಯ ಅನಸ್ತೇಷಿಯಾ ತಜ್ಞ ಡಾ. ಕಿರಣ್ ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದ್ದು, ನೇತ್ರ ವೈದ್ಯೆಯಾಗಿರುವ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಪತ್ನಿಯೇ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮನೆಯಲ್ಲೇ ಅನಸ್ತೇಶಿಯಾ ತಜ್ಞನ ಭೀಕರ ಕೊಲೆ: ಪತ್ನಿಯಿಂದಲೇ ದುರಂತ ಅಂತ್ಯ ಕಂಡ ವೈದ್ಯ?
ಮೃತ ವೈದ್ಯ ಕಿರಣ್ ಹೊನ್ನಣ್ಣನವರ್
Image Credit source: Tv9 Kannada
Edited By:

Updated on: Jul 16, 2026 | 11:53 AM

ಧಾರವಾಡ, ಜುಲೈ 15: ಚಿರಾಯು ಆಸ್ಪತ್ರೆಯ ವೈದ್ಯ ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅವರ 10 ವರ್ಷದ ಮಗನ ಮೇಲೂ ಹಲ್ಲೆ ನಡೆಸಲಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಾರ್ಟ್​ಮೆಂಟ್​ಗೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿದ್ದು, ಘಟನೆ ಸಂಬಂಧ ಡಾ.ಕಿರಣ್ ಪತ್ನಿ ಡಾ.ಪ್ರಿಯಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪತ್ನಿಯಿಂದಲೇ ಹತ್ಯೆ ಶಂಕೆ

ಡಾ.ಕಿರಣ್ ಅವರನ್ನು ಪತ್ನಿ ಪ್ರಿಯಾಂಕಾಳೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿಯೇ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪತಿ ಕೊಂದ ಬಳಿಕ ಮಗನ ಮೇಲೂ ಹಲ್ಲೆ ನಡೆದಿದೆ. ಬಳಿಕ ಡಾ.ಪ್ರಿಯಾಂಕಾ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಅನುಮಾನಗಳ ವ್ಯಕ್ತವಾಗಿವೆ.

ಇದನ್ನೂ ಓದಿ: 14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಅಚ್ಚರಿಯ ಹೇಳಿಕೆ ನೀಡಿದ ಹುಬ್ಬಳ್ಳಿ ಕಿಮ್ಸ್‌ ವೈದ್ಯರು

‘ಹೊರಗಿನವರ ಕೃತ್ಯ ಅಲ್ಲ’

Chirayu Hospital Case: ಡಾಕ್ಟರ್ ಕಿರಣ್‌ರನ್ನು ಪತ್ನಿ ಡಾ.ಪ್ರಿಯಾ ಹತ್ಯೆ ಮಾಡಿದ್ರಾ? ಕಮಿಷನರ್ ಹೇಳಿದ್ದೇನು?

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಸಂಬಂಧಿಕರು ಫೋನ್ ಮಾಡಿದಾಗ ಪತಿ ರೆಸ್ಟ್ ಮಾಡುತ್ತಿದ್ದಾರೆ ಎಂದು ಪತ್ನಿ ಪ್ರಿಯಾ ಹೇಳಿದ್ದಾರೆ. ಡಾ.ಕಿರಣ್ ಚಿರಾಯು ಆಸ್ಪತ್ತೆಯಲ್ಲಿ ಅನಸ್ತೇಶಿಯಾ ತಜ್ಞರಾಗಿದ್ದರೆ, ಪತ್ನಿ ನೇತ್ರ ವೈದ್ಯೆಯಾಗಿದ್ದರು. ಸಂಜೆಯವರೆಗೂ ಫೋನ್ ಸ್ವೀಕರಿಸದೇ ಇದ್ದಾಗ ಅನುಮಾನದಿಂದ ಸಂಬಂಧಿಕರು ಮನೆಗೆ ಬಂದು ನೋಡಿದಾಗ, ರಕ್ತದ ಮಡುವಿನಲ್ಲಿ ಅವರು ಬಿದ್ದಿರೋದು ಕಂಡಿದೆ. ಗಾಯಗೊಂಡಿರುವ ಬಾಲಕನಿಗೆ ಜೀವ ಇದ್ದ ಕಾರಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾರ್ಟ್​​ಮೆಂಟ್​​ಗೆ ಭದ್ರತೆ ಇರುವ ಕಾರಣ ಇಲ್ಲಿ ಬೇರೆಯವರು ಬಂದು ಕೊಲೆ ಮಾಡೋದು ಸಾಧ್ಯವಿಲ್ಲ. ಘಟನೆಗೆ ಸರಿಯಾದ ಕಾರಣ ಕೂಡ ಇನ್ನೂ ಗೊತ್ತಾಗಿಲ್ಲ. ಪ್ರಿಯಾಂಕಾ ಆಘಾತದಲ್ಲಿ ಏನೇನೋ ಹೇಳುತ್ತಿದ್ದು, ಅಸಲಿಗೆ ಏನಾಗಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:22 pm, Wed, 15 July 26

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us